ಶಹಾಬಾದ: ಕಸಾಪದಿಂದ ಡಾ. ರಾಜಕುಮಾರ್ 94ನೇ ಹುಟ್ಟುಹಬ್ಬದ

0
62

ಶಹಾಬಾದ: ಡಾ. ರಾಜಕುಮಾರ  ಅಂದ್ರೆ ಬರೀ ಹೆಸರಲ್ಲ, ಅದೊಂದು ಶಕ್ತಿ.ಅದು ಕನ್ನಡದ ಪ್ರತಿಧ್ವನಿ, ಕನ್ನಡಿಗರಿಗಾಗಿ, ಕನ್ನಡಿಗರಿಂದ, ಕನ್ನಡಕ್ಕಾಗಿ ಬಾಳಿ ಬದುಕಿದ ಮೇರುನಟ, ಹೆಮ್ಮೆಯ ಕನ್ನಡಿಗ ಎಂದು ಸಾಮಾಜಿಕ ಚಿಂತಕ ಲೋಹಿತ್ ಕಟ್ಟಿ ಹೇಳಿದರು.

ಅವರು ರವಿವಾರ ನಗರದ ಕನ್ನಡ ಭವನದಲ್ಲಿ ಕಸಾಪ ವತಿಯಿಂದ ಆಯೋಜಿಸಲಾದ ಡಾ. ರಾಜಕುಮಾರ್ ಅವರ 94 ನೇ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.  ಕೇವಲ ನಟರಾಗಿ, ಹೋರಾಟಗಾರರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ ಹಾಗೂ ಹಂಪಿ ವಿಶ್ವವಿದ್ಯಾಲಯದಿಂದ ನಾಡೋಜ ಪದವಿಯನ್ನು ಪಡೆದಿದ್ದಾರೆ. ಚಿತ್ರರಂಗದಲ್ಲಿನ ಜೀವಮಾನದ ಸಾಧನೆ ಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ ಎಂದರು.

Contact Your\'s Advertisement; 9902492681

ಇದನ್ನೂ ಓದಿ: ಪಿಎಸ್‌ʼಐ ಪರೀಕ್ಷೆ ಅಕ್ರಮದ ಬಗ್ಗೆ ಹೆಚ್.ಡಿ.ಕುಮಾರಸ್ವಾಮಿ ಹೇಳಿದೇನೂ?

ಕಸಾಪ ತಾಲೂಕು ಅಧ್ಯಕ್ಷ ಶರಣಬಸಪ್ಪ ಕೋಬಾಳ ಮಾತನಾಡಿ,ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು. ೨೦೦೦ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್‌ನಿಂದ ಅಪಹರಣವಾಗಿದ್ದ ರಾಜ್‌ಕುಮಾರ್, ೧೦೮ ದಿನಗಳ ನಂತರ ಬಿಡುಗಡೆಯಾಗಿದ್ದರು ಎಂದು ಹೇಳಿದರು.

ಅತಿಥಿಗಳಾಗಿ ಕಸಾಪ ಮಾಜಿ ಅಧ್ಯಕ್ಷ ಎನ್. ಸಿ. ವಾರದ ಮಾತನಾಡಿ, ೨೦೦೬ ರಲ್ಲಿ ಹೃದಯಾ ಘಾತದಿಂದ ಮರಣ ಹೊಂದಿದ ಡಾ. ರಾಜ್ ಅವರ ಸ್ವ-ಇಚ್ಛೆಯಂತೆ, ಮರಣೋತ್ತರವಾಗಿ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯಕ್ಕೆ ದಾನ ಮಾಡಲಾಯಿತು.ಡಾ. ರಾಜ್ ಅವರ ಭಾಷಣಗಳು ಹಾಗು ಚಳುವಳಿಯ ನೇತೃತ್ವ ಸಹಾಯಕಾರಿಯಾದವು. ಗುಂಡೂರಾವ್ ನೇತೃತ್ವದ ಆಗಿನ ಕರ್ನಾಟಕ ಸರ್ಕಾರವು ಚಳುವಳಿಯ ತೀವ್ರತೆಗೆ ಸ್ಪಂದಿಸಿ, ಗೋಕಾಕ್ ವರದಿಯನ್ನು ಜಾರಿಗೊಳಿಸಿತು ಎಂದು ಹೇಳಿದರು.

ಇದನ್ನೂ ಓದಿ: ಬಯಲು ಗ್ರಂಥಾಲಯದ ಪುನರಾರಂಭ, ವಿಶ್ವ ಪುಸ್ತಕ ದಿನಾಚರಣೆ

ಬಸವರಾಜ ಮದ್ರಕಿ, ನಾಗಣ್ಣ ರಾಂಪುರೆ, ಶರಣು ವಸ್ತ್ರದ,ವಿಶ್ವನಾಥ  ಚಿತ್ತಾಪುರ, ನಾಗರಾಜ ದಂಡಾವತಿ, ಸೂಗಯ್ಯಸ್ವಾಮಿ,ಜಗದೇವಿ ಹೀರೆಮಠ, ಗುರುಪ್ರಸಾದ ಕೋಬಾಳ, ಯಲ್ಲಾಲಿಂಗ ಪೂಜಾರಿ, ವಿಜಯಕುಮಾರ ಕಂಟಿಕರ್ ಇತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here