ಕಲಬುರಗಿ: ಜೈ ಭಾರತ್ ಮಾತಾ ಸೇವಾ ಸಮಿತಿ (ರಿ) ನವದೆಹಲಿ ಹಾಗೂ ಜಯಕರ್ನಾಟಕ ಸಂಘಟನೆ ಕಲಬುರ್ಗಿ ಇವರ ಸಂಯುಕ್ತ ಆಶ್ರಯದಲ್ಲಿ ಸಮಿತಿಯ ರಾಷ್ಟ್ರೀಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಹವಾ ಮಲ್ಲಿನಾಥ್ ಮಹಾರಾಜ್ ನಿರಗುಡಿ ಅವರ ದಿವ್ಯ ಸಾನಿಧ್ಯದಲ್ಲಿ ಆಳಂದ ಪಟ್ಟಣದಲ್ಲಿ ಏ.೨೬ರಂದು ಬೆಳಗ್ಗೆ ೧೦.೩೦ ಕ್ಕೆ ಶ್ರೀ ರಾಮನವಮಿ ಉತ್ಸವ ಆಚರಣೆ ಮಾಡಲಾಯಿತು.
ಈ ಇದನ್ನೂ ಓದಿ: ಬಾಲ ಕಾರ್ಮಿಕರಿಗೆ ದುಡಿಸಿಕೊಳ್ಳುತ್ತಿರುವುದು ಭೀಮರಾಯ ಎಂ. ಕಂದಳ್ಳಿ ಖಂಡನೆ ಉತ್ಸವದ ಅಂಗವಾಗಿ ೧೫ ಅಡಿ ಎತ್ತರದ ಶ್ರೀರಾಮನ ಹಾಗೂ ಹನುಮನ ಮೂರ್ತಿಯ ಶೋಭಾಯಾತ್ರೆ ಆಳಂದ್ ಪಟ್ಟಣದ ಬಸ್ ನಿಲ್ದಾಣದಿಂದ ತಹಸಿಲ್ ಕಚೇರಿ ಮಾರ್ಗವಾಗಿ ಶ್ರೀರಾಮ ಮಾರ್ಕೆಟ್ ವರೆಗೆ ಮಾಡಲಾಗುವುದು ಹಾಗೂ ಈ ಶೋಭಾಯಾತ್ರೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್, ವಿಶ್ವಗುರು ಬಸವಣ್ಣ, ಡಾ. ಬಾಬುಜಿಗಜೀವನ್ ರಾಂ ಹಾಗೂ ದೇಶದ ಮಹಾನ ನಾಯಕರ ಭಾವಚಿತ್ರಗಳ ಭವ್ಯ ಶೋಭಾಯಾತ್ರೆ ನಡೆಸಲಾಗುವುದು, ಅದರೊಂದಿಗೆ ಈ ಒಂದು ಶೋಭಾಯಾತ್ರೆಯಲ್ಲಿ ಅಳಂದ ತಾಲೂಕಿನ ಮಹಾನ್ ನಾಯಕರ, ಸಮಾಜ ಸೇವಕರ ಹಾಗೂ ಅಳಂದ ತಾಲೂಕಿನಿಂದ ಪೊಲೀಸ್ ಇಲಾಖೆ ಹಾಗೂ ಸೈನಿಕ ಇಲಾಖೆಯಲ್ಲಿ ಸೇವೆ ಸಲ್ಲಿಸಿ ಹುತಾತ್ಮರಾದ ವೀರ ಯೋಧರ ಭಾವಚಿತ್ರಗಳ ಭವ್ಯ ಮೆರವಣಿಗೆಯು ಮಾಡಲಾಗುವುದು. ಶೋಭಾಯಾತ್ರೆಯಲ್ಲಿ ನಾಡಿನ ಖ್ಯಾತ ಡೊಳ್ಳು, ತಮಟೆ, ಹಲಗೆ ಹಾಗೂ ಲೇಜಿಮ್ ಸೇರಿದಂತೆ ಅನೇಕ ಕಲಾತಂಡದವರು ಭಾಗವಹಿಸಿ ತಮ್ಮ ಕಲೆಯನ್ನು ಪ್ರದರ್ಶನ ಮಾಡಲಿದ್ದಾರೆ.
ಇದನ್ನೂ ಓದಿ: ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಪತ್ರಿಕಾಗೋಷ್ಠಿ ಮುಖ್ಯಾಂಶಗಳು
ಈ ಒಂದು ಶೋಭಾಯಾತ್ರೆ ಮೂಲಕ ಸಮಸ್ತ ದೇಶ ಬಾಂಧವರಿಗೆ ಶಾಂತಿ, ಏಕತೆ ಮತ್ತು ಸೌಹಾರ್ದತೆ ಸಂದೇಶ ಸಾರುವದಾಗಿದೆ, ಈ ಕಾರ್ಯಕ್ರಮದಲ್ಲಿ ವಿವಿಧ ಮಠಾಧೀಶರು, ಮುಸ್ಲಿಂ ಸಮಾಜದ ಮುಖಂಡರು ಸೇರಿದಂತೆ ಎಲ್ಲಾ ಸಮಾಜದ ಮುಖಂಡರು ಹಾಗೂ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ, ಈ ಉತ್ಸವದಲ್ಲಿ ಸಮಸ್ತ ದೇಶಬಾಂಧವರು ಭಾಗವಹಿಸಬೇಕೆಂದು ಜೈ ಭಾರತ ಸೇವಾ ಸಮಿತಿ (ರಿ) ನವದೆಹಲಿ ರಾಷ್ಟ್ರೀಯ ವಕ್ತಾರರಾದ ವೈಜನಾಥ್ ಎಸ್ ಝಳಕಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…