ಶರಣು, ಮಹಾರಾಜ, ಸತ್ಯಂಪೇಟೆಗೆ ಕಾಯಕಯೋಗಿ-೨೦೨೨ ಪ್ರಶಸ್ತಿ

1
148

ಕಲಬುರಗಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಕೊಡಮಾಡುವ ರಾಜ್ಯಮಟ್ಟದ ಕಾಯಕಯೋಗಿ-೨೦೨೨ ಪ್ರಶಸ್ತಿಗೆ ಕಲಬುರಗಿಯ ಪೌರ ಕಾರ್ಮಿಕ ಶರಣು ಅತನೂರ, ಯಾದಗಿರಿಯ ಉದ್ಯಮಿ ಮಹಾರಾಜ ದಿಗ್ಗಿ, ಪತ್ರಕರ್ತ ಡಾ. ಶಿವರಂಜನ ಸತ್ಯಂಪೇಟೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪರಿಷತ್ ರಾಜ್ಯಾಧ್ಯಕ್ಷ ಡಾ. ಹುಲಿಕಲ್ ನಟರಾಜ, ಪ್ರಧಾನ ಕಾರ್ಯದರ್ಶಿ ದಾನಿ ಬಾಬುರಾವ ತಿಳಿಸಿದ್ದಾರೆ.

ಇದನ್ನೂ ಓದಿ: ಸರ್ವಧರ್ಮಿಯರಿಂದ ಕಲಬುರಗಿಯಲ್ಲಿ ಇಫ್ತೆಯಾರ್ ಕೂಟ

Contact Your\'s Advertisement; 9902492681

ಮೇ ೧ರಂದು ಬೆಂಗಳೂರಿನ ವಿಜಯನಗರದ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಬೆಳಗ್ಗೆ ೧೦.೩೦ ಗಂಟೆಗೆ ನಡೆಯಲಿರುವ ಪ್ರಶಸ್ತಿ ಪ್ರದಾನ ಸಮಾರಂಭದ ಸಾನ್ನಿಧ್ಯವನ್ನು ಸಾಣೇಹಳ್ಳಿಯ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದು, ಖ್ಯಾತ ವಿಜ್ಞಾನಿ ಡಾ. ಎ.ಎಸ್. ಕಿರಣಕುಮಾರ ಉದ್ಘಾಟಿಸಲಿದ್ದಾರೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ದೈಹಿಕ ಶಿಕ್ಷಣ ವಿಭಾಗದಲ್ಲಿ ಪರಸುರಾಮಗೆ ಪಿಎಚ್. ಡಿ ಅವಾರ್ಡ್

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here