ಕಲಬುರಗಿ: ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯನಿರ್ವಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ನವೋದಯ ಮಾದರಿ ವಸತಿ ಶಾಲೆಯಲ್ಲಿ 2022-23ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ (ಆಂಗ್ಲ ಮಾಧ್ಯಮ) 6ನೇ ತರಗತಿ ಪ್ರವೇಶ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಮಹಿಮೂದ್ ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ನೆರವೇರಿದ ಗುಲಬರ್ಗಾ ವಿಶ್ವವಿದ್ಯಾಲಯದ 39, 40ನೇ ಘಟಿಕೋತ್ಸವ
ಪ್ರವೇಶ ಪಡೆಯಲಿಚ್ಚಿಸುವ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ,ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಹಾಗೂ ಇತರೆ ವರ್ಗಗಳ ವಿದ್ಯಾರ್ಥಿಗಳಿಗೆ ಶೇ. 25 ರಷ್ಟು ಸ್ಥಾನಗಳು ಮೀಸಲಿದ್ದು, ಇದರಲ್ಲಿ ಬಾಲಕಿಯರಿಗೆ ಶೇ. 50ರಷ್ಟು ಸ್ಥಾನಗಳು ಮೀಸಲಿಡಲಾಗಿದೆ. ಇಚ್ಚೆಯುಳ್ಳ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಇಲಾಖೆಯ ವಸತಿ ಶಾಲೆಗಳಲ್ಲಿ ಅಥವಾ ತಾಲೂಕು ಅಲ್ಪಸಂಖ್ಯಾತ ಮಾಹಿತಿ ಕೇಂದ್ರಗಳಲ್ಲಿ ಉಚಿತವಾಗಿ ಸಲ್ಲಿಸಬಹುದು.
ಇದನ್ನೂ ಓದಿ: ಕಲ್ಯಾಣ ಕರ್ನಾಟಕ ಜಾನಪದ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ
ಆಸಕ್ತ ವಿದ್ಯಾರ್ಥಿಗಳು, ಪಾಲಕರು ಸೇವಾ ಸಿಂಧು ಪೋರ್ಟಲ್ ಲಿಂಕ್ https://sevasindhuservices.karnataka.gov.in ಮೂಲಕ ಅರ್ಜಿಗಳನ್ನು ಸಲ್ಲಿಸಲು ಉಚಿತ ಸೇವೇ ಪಡೆಯಲು ಸಮೀಪದ ಅಲ್ಪಸಂಖ್ಯಾತರ ತಾಲೂಕಾ ಮಾಹಿತಿ ಕೇಂದ್ರಗಳಲ್ಲಿ ಅಥವಾ ಮೊರಾರ್ಜಿ ದೇಸಾಯಿ ವಸತಿ ಶಾಲೆ/ಅಲ್ಪಸಂಖ್ಯಾತರ ತಾಲೂಕಾ ಮಾಹಿತಿ ಕೇಂದ್ರಗಳ್ಲಿ ಅಥವಾ ಮೋರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಲು ಕೋರಿದೆ. ಏಪ್ರಿಲ್ 30ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ https://dom.karnataka.gov.in ಸಹಾಯವಾಣಿ 827779990,080-22535916, ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-247260ಗೆ ಸಂಪರ್ಕಿಸಲು ಕೋರಲಾಗಿದೆ.