ಕಲಬುರಗಿ: ಉಡಚಣ ಗ್ರಾಮದ ಶ್ರೀ ನಂದಿ ಬಸವಣ್ಣ ದೇವರ ಟ್ರಸ್ಟ್ ಕಮಿಟಿ ವತಿಯಿಂದ ಕೊಡಮಾಡುವ ‘ಬಸವ ರತ್ನ’ ಪ್ರಶಸ್ತಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹಾಗೂ ಗೌರವ ಕಾರ್ಯದರ್ಶಿ ಶಿವರಾಜ ಎಸ್.ಅಂಡಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಮಿಟಿ ಅಧ್ಯಕ್ಷರು ಪ್ರಕಠಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರು ಸಾರ್ವಜನಿಕರ ಸಹಕಾರದಿಂದಲೇ ಸುಮಾರು ಕಳೆದೆರಡು ದಶಕಗಳಿಂದ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಜಿಲ್ಲೆಯ ಸಾಂಸ್ಕೃತಿಕ ಲೋಕವೇ ನಿಬ್ಬೆರಗಾಗುವಂತೆ ಮಾಡಿದ್ದಾರೆ. ಸಾಹಿತ್ಯಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ಮೇ ೨ ರ ರಾತ್ರಿ ೮ ಗಂಟೆಗೆ ಉಡಚಣ ಗ್ರಾಮದ ಶ್ರೀ ನಂದಿ ಬಸವಣ್ಣ ದೇವಸ್ಥಾನದ ಸಭಾಂಗಣದಲ್ಲಿ ಜರುಗಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುತ್ತಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…