ಕಲಬುರಗಿ: ಸತತ ಅಧ್ಯಯನವೇ ವಿದ್ಯಾರ್ಥಿಯ ಲಕ್ಷಣ ವಿದ್ಯಾರ್ಥಿಗಳು ಸತತವಾಗಿ ಅಧ್ಯಯನ ಮಾಡಬೇಕು ಹಾಗೂ ವಿಶ್ವವಿದ್ಯಾಲಯದ ಎಲ್ಲಾ ಸೌಲಭ್ಯವನ್ನು ಪಡೆದುಕೊಂಡು ತಾವು ಉನ್ನತವಾದ ಜ್ಞಾನವನ್ನು ಗಳಿಸಿಕೊಳ್ಳಬೇಕೆಂದು ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಗುಲಬರ್ಗಾ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರಾದ ಡಾ. ಮೇಧಾವಿನಿ ಕಟ್ಟಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಇದನ್ನೂ ಓದಿ: ಸ್ವಾತಂತ್ರ್ಯದ ಜೊತೆಗೆ ಸಾಮಾಜಿಕ ಸಮಾನತೆಗಾಗಿ ಅಂಬೇಡ್ಕರ ಹೋರಾಟ: ಪ್ರಿಯಾಂಕ್ ಖರ್ಗೆ
ಮುಖ್ಯ ಅತಿಥಿಯಾಗಿದ್ದ ಕಲಾ ನಿಕಾಯದ ಡೀನರು ಹಾಗೂ ಆಂಗ್ಲ ವಿಭಾಗದ ಪ್ರಾಧ್ಯಾಪಕ ಡಾ. ರಮೇಶ ರಾಠೋಡ ವಿದ್ಯಾರ್ಥಿಗಳು ಹೆಚ್ಚಿನ ವಿದ್ಯಾಭ್ಯಾಸವನ್ನು ಕೈಗೊಳ್ಳಬೇಕು ಅಂದಾಗ ಮಾತ್ರ ವಿದ್ಯಾರ್ಥಿಗಳು ಕಂಡ ಕನಸು ನನಸಾಗುವುದು. ವಿದ್ಯಾರ್ಥಿಗಳು ಸಮಯಕ್ಕೆ ಬೆಲೆಯನ್ನು ಕೊಡಬೇಕು. ಅದೇರೀತಿ ಕನ್ನಡ ಜೊತೆ ಜೊತೆಗೆ ಇಂಗ್ಲಿಷ ಭಾಷೆಯನ್ನು ವ್ಯವಹಾರಿಕ ದೃಷ್ಟಿಯಿಂದ ಹಾಗೂ ಪರೀಕ್ಷೆ ದೃಷ್ಟಿಯಿಂದ ವಿದ್ಯಾರ್ಥಿಗಳು ಇಂದು ಅನಿವಾರ‍್ಯವಾಗಿ ಕಲಿಯಬೇಕಾಗಿದೆ. ಅಂದಾಗ ಮಾತ್ರ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದು ಉನ್ನತವಾದ ಉದ್ಯೋಗವನ್ನು ಪಡೆಯಬಹುದು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಮಾತನಾಡಿ, ವಿದ್ಯಾರ್ಥಿಗಳು ಪುಸ್ತಕವನ್ನು ತಮ್ಮ ಉತ್ತಮ ಗೆಳೆಯನಾಗಿಸಬೇಕು ಅಂದಾಗ ಮಾತ್ರ ಯಶಸ್ಸು ಪಡೆಯಬಹುದು. ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕರು ಸತತ ಅಧ್ಯಯನ ಶೀಲರಾಗಿರಬೇಕು ಅಂದಾಗ ಮಾತ್ರ ಹೊಸ ಸಾಹಿತ್ಯವನ್ನು ಸೃಷ್ಟಿಸಬಹುದು ಎಂದು ಮಾತನಾಡಿದರು.
ಇದನ್ನೂ ಓದಿ: ಬುದ್ಧ, ಬಸವ, ಅಂಬೇಡ್ಕರ್ ತತ್ವ ಪಾಲನೆಗೆ ಪ್ರಿಯಾಂಕ್ ಖರ್ಗೆ ಕರೆ
ಡಾ. ಶ್ರೀಶೈಲ ನಾಗರಾಳ, ಶ್ರೀಧರ, ಅರುಣ, ಭೀಮಾಂಶಕರ ವೇದಿಕೆಯಲ್ಲಿದ್ದರು.ಸ
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…