ಆಶಾ, ಅಂಗನವಾಡಿ ಕಾರ್ಯಕರ್ತರ ಕೋರೊನಾ ಸಂದರ್ಭದ ಸೇವೆ ಮರೆಯಲಾರದು,ಅಂದು ಅವರ ನೋವು – ಸಂಕಟದ ಅನುಭವವನ್ನು ಆಳಂದ ಶಾಸಕ ಸುಭಾಷ್ ಗುತ್ತೇದಾರ್ ಅವರು ಮೆಲುಕು ಹಾಕಿದರು.
ಆಳಂದ: ಪಟ್ಟಣದ ಗುರು ಭವನದ ಆವರಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಆಯುಷ್ ಇಲಾಖೆ, ತಾಲ್ಲೂಕು ಆರೋಗ್ಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಬೃಹತ್ ಆರೋಗ್ಯ ಶಿಬಿರ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್ ಸಂದಿಗ್ಧ ಪರಿಸ್ಥಿತಿಯ ಸೇವೆಯನ್ನು ಬಣ್ಣಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆರೋಗ್ಯ ಇಲಾಖೆಯ ವಿವಿಧ ಯೋಜನೆಯ ಉಪಯೋಗಗಳು ಸದುಪಯೋಗ ಪಡೆದುಕೊಳ್ಳಬೇಕೆಂದು ಅವರು ಸಾರ್ವಜನಿಕರಿಗೆ ಕರೆ ನೀಡಿದರು.
ಉತ್ತಮ ಆರೋಗ್ಯಕ್ಕೆ ಆಗಾಗ ಆರೋಗ್ಯ ತಪಾಸಣೆ ಮಾಡಿಕೊಳ್ಳುವುದು ಅಗತ್ಯ,ಮನುಷ್ಯ ಸದೃಡವಾಗಿ ಇರಬೇಕಾದ್ರೆ ಉತ್ತಮ ಜೀವನಶೈಲಿ ಅಳವಡಿಸಿಕೊಳ್ಳಬೇಕೆಂದರು.
ತಾಲ್ಲೂಕು ವೈದ್ಯಾಧಿಕಾರಿ ಡಾ.ಸುಶೀಲಕುಮಾರ್ ಅಂಬುರೆ ಪ್ರಾಸ್ತಾವಿಕವಾಗಿ ಮಾತನಾಡಿದರು.ನಂತರ ಆಯುಷ್ ಇಲಾಖೆಯ ಬಿತ್ತಿಚಿತ್ರ ಶಾಸಕರು ಬಿಡುಗಡೆಗೊಳಿಸಿ, ಆಯುಷ್ಮಾನ್ ಕಾಡನ್ನು ಫಲಾನುಭವಿಗಳಿಗೆ ವಿತರಿಸಿದರು.ಇದೇ ವೇಳೆ ವಿವಿಧ ರೋಗಗಳ ತಪಾಸಣಾ ಮಳಿಗೆಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.ತಹಸೀಲ್ದಾರ್ ಯಲ್ಲಪ್ಪ ಸುಬೇದಾರ್ ಕಾರ್ಯನಿರ್ವಾಹಕಾಧಿಕಾರಿ ಡಾ.ಸಂಜಯ ರೆಡ್ಡಿ ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗಲಮಡಿ, ಪುರಸಭೆ ಅಧ್ಯಕ್ಷೆ ರಾಜೇಶ್ವರಿ ಎಸ್ ಖಜೂರಿ,ಉಪಾಧ್ಯಕ್ಷ ಈರಣ್ಣಾ ಹತ್ತರಕಿ ,ಮುಖ್ಯಾಧಿಕಾರಿ ವಿಜಯ ಮಹಾಂತೇಶ ಹೂಗಾರ,ಮೋನಮ್ಮ ಸುತಾರ್ , ಡಾ.ಚಂದ್ರಕಾಂತ ನರಿಬೋಳಿ, ಸೇರಿದಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು,ತಜ್ಞ ವೈದ್ಯರು, ಆಶಾ ಕಾರ್ಯಕರ್ತರು ವಿವಿಧ ಗ್ರಾಮದ ರೋಗಿಗಳು ಪಾಲ್ಗೊಂಡಿದ್ದರು.
ಮಹಿಳಾ ಅಧಿಕಾರಿ ಪ್ರಾರ್ಥಿಸಿದರು. ಶಿವಕುಮಾರ್ ಸ್ವಾಗತಿಸಿದರು. ಚಾಮರಾಜ ದೊಡ್ಡಮನಿ ವಂದಿಸಿದರು.ಸಾವಿರಕ್ಕೂ ಹೆಚ್ಚು ರೋಗಿಗಳ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.ಕಲಾ ತಂಡದಿಂದ ಆರೋಗ್ಯ ಜಾಗೃತಿ ಹಾಡುಗಳು ಗಮನ ಸೆಳೆದವು.