ಕಲಬುರಗಿ: ಕುಡಿತದ ಚಟಕ್ಕೆ ಅಂಟಿಕೊಂಡಿದ್ದ ವ್ಯಕ್ತಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಪ್ರಕರಣ ಜಿಲ್ಲೆಯ ಶಹಾಬಾದ್ ಪಟ್ಟಣದ ಭೀಮಶೆಪ್ಪ ನಗರದಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾದ ವ್ಯಕ್ತಿಯ ಪತ್ನಿ ಸೇರಿ ಮೂವರನ್ನು ಪೋಲಿಸರು ಬಂಧಿಸಿದ್ದಾರೆ.
ನಾಗೇಂದ್ರ ರೆಡ್ಡಿ (26) ಕೊಲೆಯಾದ ದುರ್ದೈವಿ. ಇಂದು ಪಟ್ಟಣದ ತಮ್ಮ ಮನೆಯಲ್ಲಿ ಕಲಹ ಉಂಟಾಗಿದ ಪರಿಣಾಮ ಇಬ್ಬರ ನಡುವೆ ಜಗಳ ಸಂಭವಿಸಿ ಕೊಲೆ ನಡೆದಿದೆ ಎನ್ನಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಪತ್ನಿ ಲಕ್ಷ್ಮೀ ಮತ್ತು ಆಕೆಯ ತಂದೆ ದುರ್ಗಪ್ಪ, ತಾಯಿ ರೇಣುಕಾ ಹಾಗೂ ಸಹೋದರ ಸಿದ್ದು ಅವರೇ ಕಾರಣ ಎನ್ನಲಾಗಿದ್ದು, ಪೋಲಿಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ನಾಗರೆಡ್ಡಿ ಮತ್ತು ಲಕ್ಷ್ಮೀಯ ಮದುವೆಯು ಕಳೆದ ಆರು ವರ್ಷಗಳ ಹಿಂದೆ ಜರುಗಿತ್ತು. ನಾಗರೆಡ್ಡಿ ಕುಡಿತದ ಚಟಕ್ಕೆ ಅಂಟಿಕೊಂಡಿದ್ದ. ಆತನಿಗೆ ಎಷ್ಟೇ ಬುದ್ದಿವಾದ ಹೇಳಿದರೂ ಸಹ ಕೇಳಲಿಲ್ಲ. ಕುಡಿದು ಮನೆಯವರೊಂದಿಗೆ ಸಾಕಷ್ಟು ಕಿರಿಕಿರಿ ಮಾಡುತ್ತಿದ್ದ ಎನ್ನಲಾಗಿದೆ. ಇದರಿಂದ ಕುಪಿತಗೊಂಡು ಕಲ್ಲಿನಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಅವರು ತಿಳಿಸಿದ್ದಾರೆ.
ಈ ಕುರಿತು ಶಹಾಬಾದ್ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…