ಶಹಾಪುರ : ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಸರಕಾರ ವಿವಿಧ ಸೌಲಭ್ಯಗಳು ಜಾರಿಗೊಳಿಸಿದೆ ಆದ್ದರಿಂದ ಅವುಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಂಡು ಉತ್ತಮ ಜೀವನ ನಡೆಸಬೇಕು ಎಂದು ಕಲ್ಯಾಣ ಕರ್ನಾಟಕ ಕಟ್ಟಡ ನಿರ್ಮಾಣ ಮತ್ತು ಇತರೆ ಕಾರ್ಮಿಕರ ಸೇವಾ ಸಂಘದ ಸಂಸ್ಥಾಪಕ ಅಧ್ಯಕ್ಷರಾದ ವಿಶ್ವಾರಾಧ್ಯ ನಾಯ್ಕೋಡಿ ಹೇಳಿದರು.
ತಾಲೂಕಿನ ಮುಡಬೂಳ ಗ್ರಾಮದ ಲಿಂಗೇಶ್ವರ ಜಾತ್ರಾ ಮಹೋತ್ಸವ ಹಾಗೂ ಕಾರ್ಮಿಕ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗೆ ಉಚಿತ ಈ ಶ್ರಮ ಕಾರ್ಡ್ ಮತ್ತು ಕಾರ್ಮಿಕರ ಸುರಕ್ಷತಾ ಕಿಟ್ ವಿತರಿಸಿ ಮಾತನಾಡಿ ಅನವಶ್ಯಕವಾಗಿ ಕಚೇರಿಗಳಿಗೆ ಅಲೆದಾಡಬೇಡಿ ಸಂಪೂರ್ಣವಾದ ಮಾಹಿತಿ ಪಡೆದುಕೊಂಡು ಸೂಕ್ತ ದಾಖಲೆಗಳನ್ನು ನೀಡಿ ಸೌಲಭ್ಯಗಳು ಪಡೆಯಿರಿ ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಕಟ್ಟಡ ಕಾರ್ಮಿಕರಿಗೆ ವಿಶೇಷವಾಗಿ ಸಮ್ಮಾನಿಸಲಾಯಿತು,ಮಠದ ಪೂಜ್ಯರಾದ ಸಿದ್ಧಲಿಂಗ ಶ್ರೀಗಳವರು ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕಾರ್ಯದರ್ಶಿ ಭೀಮಣ್ಣ ನಾಯ್ಕೋಡಿ,ತಾಲ್ಲೂಕು ಘಟಕದ ಅಧ್ಯಕ್ಷರಾದ ಮಹಾಂತೇಶ ಗುರಿಕಾರ,ಮೌನೇಶ ಹಳಿಸಗರ, ವೆಂಕಟೇಶ ಬೋನೆರ್,ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಣ್ಣ ಹವಲ್ದಾರ್,ಮಲ್ಲಪ್ಪ ಪೂಜಾರಿ, ದೇವು ನಾಯಕ್, ಶರಣು,ರಮೇಶ್, ಹಾಗೂ ಗ್ರಾಮದ ಹಿರಿಯರು ಹಾಗೂ ಕಾರ್ಮಿಕರು ಹಾಜರಿದ್ದರು.
ಇದನ್ನೂ ಓದಿ: ಪಿಎಸ್ಐ ದೈಹಿಕ ಪರೀಕ್ಷೆಯಲ್ಲೂ ಅಕ್ರಮ: ಶಾಸಕ ಪ್ರಿಯಾಂಕ್ ಖರ್ಗೆ