ಆಳಂದ: ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಮಂಗಳವಾರ ಪತನಗೊಂಡ ಸಂಭ್ರಮದಲ್ಲಿ ಪಟ್ಟಣದ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಂದಗುಳೆ ನೇತೃತ್ವದಲ್ಲಿ ಕಾರ್ಯಕರ್ತರು ಮತ್ತು ಮುಖಂಡರು ಸೇರಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
ಸರ್ಕಾರದ ಪತನವು ಪಕ್ಷದ ಕೋಟಿ, ಕೋಟಿ ನಿಸ್ವಾರ್ಥ ಕಾರ್ಯಕರ್ತರಿಗೆ ಜಯವಾಗಿದೆ. ಕರುನಾಡಿನಲ್ಲಿ ಕೇಸರಿಯುಗ ಪ್ರಾರಂಭಗೊಳ್ಳಲಿದೆ ಎಂದರು. ಪಟ್ಟಣದ ಪ್ರಮುಖ ಸ್ಥಳಗಳಲ್ಲಿ ಪಟಾಕಿ ಸಿಡಿಸಿ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿ, ಪ್ರಧಾನಿ ನರೇಂದ್ರ ಮೋದಿ, ಅಮಿತ ಶಾ, ಪಕ್ಷದ ರಾಜ್ಯಾಧ್ಯಕ್ಷ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಶಾಸಕ ಸುಭಾಷ ಗುತ್ತೇದಾರ ಸೇರಿ ನಾಯಕರ ಪರ ಜಯಘೋಷ ಕೂಗಿದರು.
ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಜನಪರ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಿದ್ದವು. ಈಗ ಮತ್ತೆ ಕೇಸರಿ ಕಹಳೆಯ ಮೂಲಕ ಬಿಎಸ್‌ವೈ ನೇತೃತ್ವದಲ್ಲಿ ರಾಜ್ಯದಲ್ಲಿ ಒಳ್ಳೆಯ ಆಡಳಿತ ಮೂಲಕ ಜನಪರ ಕೆಲಸಗಳು ನಡೆಯಲಿವೆ ಎಂದರು.
ಪಕ್ಷದ ಮುಖಂಡ ಅಶೋಕ ಗುತ್ತೇದಾರ, ಪ್ರಧಾನ ಕಾರ್ಯದರ್ಶಿ ಮಹೇಶ ಗೌಳಿ, ತಾಲೂಕು ಪಂಚಾಯತ ಉಪಾಧ್ಯಕ್ಷ ಗುರುನಾಥ ಪಾಟೀಲ, ತಡಕಲ್ ಗ್ರಾಪಂ ಅಧ್ಯಕ್ಷ ಶಿವುಪುತ್ರಪ್ಪ ಬೆಳ್ಳೆ, ಪುರಸಭೆ ಸದಸ್ಯ ಈರಣ್ಣಾ ಹತ್ತರಕಿ, ಪ್ರಭಾಕರ್ ಘನಾತೆ, ಬಾಬು ಹದರಿ, ಹಿಂದುಳಿದ ಘಟಕದ ಅಧ್ಯಕ್ಷ ಸಿದ್ದು ಪೂಜಾರಿ, ಶ್ರೀಶೈಲ ಖಜೂರಿ, ಸೋಮು ಹತ್ತರಕಿ, ರಾಜಕುಮಾರ ಷಣ್ಮೂಖ ಮತ್ತಿತರು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…