ಜೇವರ್ಗಿ: ಬಸವೇಶ್ವರ ವೃತ್ತದಲ್ಲಿ ವಿಶ್ವ ಗುರು ಮಹಾಮಾನವತಾವಾದಿ ಸಮಾನತೆಯ ಹರಿಕಾರ ಜಗತಜ್ಯೋತಿ ಅಣ್ಣ ಬಸವಣ್ಣ ನವರ 889 ನೇ ಜಯಂತೋತ್ಸವ ಆಚರಣೆ ಮಾಡಲಾಯಿತು.
ಬಸವಣ್ಣನವರ ಭಾವಚಿತ್ರಕ್ಕೆ ಪುಷ್ಪರ್ಚನೆ ಮತ್ತು ಧ್ವಜರೋಹಣ ನೆರವೇರಿಸಿ ಮಾಜಿ ಶಾಸಕರು ಶ್ರೀ ದೊಡ್ಡಪ್ಪಗೌಡ ಪಾಟೀಲ ಮಾತನಾಡಿ 12 ನೇ ಶತಮಾನದಲ್ಲಿ ಅನುಭವ ಮಂಟಪದಲ್ಲಿ ಎಲ್ಲಾ ಸಮಾಜದ ಶರಣ-ಶರಣೆಯರ ಒಂದೇ ವೇದಿಕೆ ಸಿದ್ಧಪಡಿಸಿ ಸಮಾಜದಲ್ಲಿರುವ ಮೂಢನಂಬಿಕೆ ಗೊಡ್ಡು ಆಚರಣೆಗಳನ್ನು ವಿರೋಧಿಸಿ ಮನುಷ್ಯ ಜಾತಿ ಒಂದೇ ಎಂಬ ಸಂದೇಶವನ್ನು ಜಗತ್ತಿಗೆ ಸಾರಿದ ಮಹಾನ ಚೇತನ ಜಗತ್ತಜ್ಯೋತಿ ಅಣ್ಣಬಸವಣ್ಣ ಎಂದು ಹೇಳಿದರು.
ಇದನ್ನೂ ಓದಿ: ಬಸವಣ್ಣನವರ ತತ್ತ್ವಾದರ್ಶದ ಮಾರ್ಗದಲ್ಲಿ ಬದುಕು ಸಾಗಿಸುವ ಅನಿವಾರ್ಯತೆ ನಮಗಿದೆ: ಪ್ರೊ ಅಷ್ಠಗಿ ಅಭಿಮತ
ಕಾಂಗ್ರೆಸ್ ಮುಖಂಡ ರಾಜಶೇಖರ್ ಸಿರಿ ಮಾತನಾಡಿ ಜೇವರ್ಗಿಯಲ್ಲಿ ಬಸವೇಶ್ವರ ಮೂರ್ತಿ ಸ್ಥಾಪನೆ ಆಗಬೇಕು ಅದಕ್ಕಾಗಿ ಸಮಾಜದ ಬಂಧುಗಳು ಪಕ್ಷತೀತವಾಗಿ ಕ್ಷೇತ್ರದ ಶಾಸಕರ ಮೇಲೆ ಮತ್ತು ಸರ್ಕಾರದ ಒತ್ತಡ ಹಾಕಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ತಸಿಲ್ದಾರ್ ವಿನಯ್ ಕುಮಾರ್ ಪಾಟೀಲ್ ಸಮಾಜದ ಮುಖಂಡರು ಮತ್ತು ಇತರ ಸಮಾಜದ ಮುಖಂಡರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…