ಕಲಬುರಗಿ: ಶಾಂತಿ, ಸಮತೆ, ಸೌಹಾರ್ದತೆ ನೆಲೆಸಲಿ, ಪ್ರೀತಿ, ವಿಶ್ವಾಸ ವೃದ್ದಿಸುವ ನಿಟ್ಟಿನಲ್ಲಿ ಇಲ್ಲಿನ ಸೌಹಾರ್ದ ಕರ್ನಾಟಕ ಸಂಘಟನೆ ವತಿಯಿಂದ ನಗರದ ಬಸವೇಶ್ವರ ಪುತ್ಥಳಿ ಬಳಿ ಬುಧವಾರ ಸೌಹಾರ್ದ ಬಸವ, ರಂಜಾನ್ ಹಾಗೂ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
ಚುನಾವಣೆ ದೃಷ್ಟಿ ಇಟ್ಟುಕೊಂಡು ಪ್ರಭುತ್ವ ಪೇರಿತ ಜಯಂತಿ ವೈಭವದ ರೀತಿಯಲ್ಲಿ ಆಚರಣೆಗಳಲ್ಲಿ ಮುಳುಗದೆ ನಿಜವಾದ ಅರ್ಥದಲ್ಲಿ ಆಚರಿಸುವಂತಾಗಬೇಕು ಎಂದು ಆಗಮಿಸಿದ ಗಣ್ಯರು ಅಭಿಪ್ರಾಯಪಟ್ಟರು.
ಪರಸ್ಪರ ಪ್ರೀತಿ, ವಿಶ್ವಾಸ ವೃದ್ಧಿಸುವ ಆಚರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ನೆಲೆಸಲು ಸಾಧ್ಯ. ಸ್ವಾರ್ಥದ ಉದ್ದೇಶವಿಟ್ಟುಕೊಂಡು ಮಹನೀಯರ ಆಚರಣೆ ಸಲ್ಲದು ಎಂದು ತಿಳಿ ಹೇಳಿದರು.
ಪಾಧರ್ ವಿಕ್ಟರ್, ಸಂಗಾನಂದ ಭಂತೇಜಿ, ಕೋರಣೇಶ್ವರ ಸ್ವಾಮೀಜಿ, ಕೆ. ನೀಲಾ, ಮೀನಾಕ್ಷಿ ಬಾಳಿ, ಪ್ರಭು ಖಾನಾಪುರೆ, ಮೆಹರಾಜ್ ಪಟೇಲ್, ಮಹಾಂತೇಶ ಕಲ್ಬುರ್ಗಿ, ರವೀಂದ್ರ ಶಾಬಾದಿ, ಡಾ. ಶಿವರಂಜನ ಸತ್ಯಂಪೇಟೆ, ಭೀಮಣ್ಣ ಬೋನಾಳ ಇತರರು ಭಾಗವಹಿಸಿದ್ದರು.
ನಂತರ ಎಲ್ಲರೂ ಪರಸ್ಪರ ಶೀರ್ ಖುರ್ಮಾ ಸೇವಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…