ಸ್ಫೋಟಕ ಅಂಶ ಬಯಲು ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

  • ಕಮಲ್‌ ಪಂಥ್‌ʼಗೆ ಬಿಜೆಪಿ ನಾಯಕರಿಂದ ಅಪಮಾನ ಪಿಎಸ್‌ಐ ಪರೀಕ್ಷೆ ಅಕ್ರಮ ಬಯಲಿಗೆಳೆದ ಪೊಲೀಸ್‌ ಇಲಾಖೆ
  • ಬಿಜೆಪಿಯ ನಾಯಕ-ಪರೀಕ್ಷೆ ಅಕ್ರಮದ ಕಿಂಗ್‌ಪಿನ್ʼಗೂ ಲಿಂಕ್ ಇದೆ ಎಂದ ಮಾಜಿ ಸಿಎಂ
  • ಸಚಿವ ಡಾ.ಅಶ್ವತ್ಥನಾರಾಯಣ ವಿರುದ್ಧ ಕಾಂಗ್ರೆಸ್‌ ಬಳಿ ದಾಖಲೆ ಇದೆಯಾ? ಎಂದು ಪ್ರಶ್ನೆ

ಚನ್ನಪಟ್ಟಣ: ಇಡೀ ದೇಶದ ಗಮನ ಸೆಳೆದಿರುವ ಪಿಎಸ್‌ಐ ಪರೀಕ್ಷೆ ಅಕ್ರಮವನ್ನು ಪೊಲೀಸ್‌ ಇಲಾಖೆಯಿಂದಲೇ ಬಯಲಿಗೆ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದನ್ನೂ ಓದಿ: ಸೌಹಾರ್ದ ಬಸವ, ರಂಜಾನ್, ಅಂಬೇಡ್ಕರ್ ಜಯಂತಿ ಆಚರಣೆ

ಇಂದಿಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; “ಈ ವಿಚಾರವಾಗಿ ನನಗಿರುವ ಮಾಹಿತಿಯೇ ಬೇರೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿದೆ. ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಕೊಲೆ ನಂತರ ನಡೆದ ಬೆಳವಣಿಗೆಗಳಿಗೂ ಈ ಪರೀಕ್ಷೆ ಅಕ್ರಮ ಬಯಲಾಗುವುದಕ್ಕೂ ಲಿಂಕ್‌ ಇದೆ” ಎಂದರು.

ಚಂದ್ರು ಎಂಬ ಯುವಕನ ಕೊಲೆ ಪ್ರಕರಣದ ವಿಚಾರವಾಗಿ ನಡೆದ ಬೆಳವಣಿಗೆಗಳೇ ಪರೀಕ್ಷೆ ಅಕ್ರಮವನ್ನು ಬಯಲಿಗೆಳೆದಿವೆ. ಬಿಜೆಪಿಯ ವಕ್ತಾರರೊಬ್ಬರು ಪೊಲೀಸ್‌ ಆಯುಕ್ತ ಕಮಲ್ ಪಂಥ್ ವಿರುದ್ಧವೇ ಆರೋಪ ಮಾಡಿದ್ದರು. ಆ ಕೊಲೆಯ ವಿಚಾರವಾಗಿ ಆಯುಕ್ತರು ಸುಳ್ಳು ಹೇಳುತ್ತಿದ್ದಾರೆಂದು ಅವರು ದೂರಿದ್ದರು. ಪರಸ್ಪರ ದ್ವಿಚಕ್ರ ವಾಹನ ಢಿಕ್ಕಿ ಕಾರಣಕ್ಕೆ ಗಲಾಟೆ ನಡೆದು ಯುವಕನ ಕೊಲೆಯಾಗಿತ್ತು ಎಂದು ಪೊಲೀಸರು ಹೇಳಿದ್ದರು.

ಆದರೆ, ಬಿಜೆಪಿ ನಾಯಕರು ಹಠಕ್ಕೆ ಬಿದ್ದವರಂತೆ ಉರ್ದು ಭಾಷೆ ಮಾತನಾಡಲು ಬರಲಿಲ್ಲ ಎನ್ನುವ ಕಾರಣಕ್ಕೆ ಗಲಾಟೆಯಾಗಿ ಯುವಕನ ಕೊಲೆಯಾಯಿತು ಎಂದು ಕಥೆ ಕಟ್ಟಿದ್ದರು. ಅದು ಅಲ್ಲಿಂದ ಪಿಎಸ್‌ಐ ಪರೀಕ್ಷೆ ಅಕ್ರಮದವರೆಗೂ ಬಂದು ನಿಂತಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಇದನ್ನೂ ಓದಿ: ಜಗತ್ತಜ್ಯೋತಿ ಅಣ್ಣಬಸವಣ್ಣನವರ 889ನೇ ಜಯಂತೋತ್ಸವ

ಪೊಲೀಸ್ ಇಲಾಖೆಯ ಪ್ರಾಮಾಣಿಕ ಅಧಿಕಾರಿ ಕಮಲ್ ಪಂಥ್ ಅವರಿಗೆ ಅವಮಾನ‌ ಮಾಡಿದ್ದರು ಬಿಜೆಪಿ ನಾಯಕರು. ಅದಕ್ಕಾಗಿ ಇಲಾಖೆಯಲ್ಲಿರುವ ಅವರ ಅಭಿಮಾನಿಗಳು ಕೆಲವರು ಸರಕಾರಕ್ಕೆ ಬುದ್ಧಿ ಕಲಿಸಲೆಂದೇ ಅವರೇ ಹಗರಣವನ್ನು ಹೊರತೆಗೆದಿದ್ದಾರೆ. ಇದು ಸರಕಾರದಿಂದ ಹೊರಬಂದಿಲ್ಲ, ಪೊಲೀಸ್ ಇಲಾಖೆಯಿಂದಲೇ ಇದು ಹೊರಬಂದಿದೆ. ಈ ಸರಕಾರದ ನಡವಳಿಕೆಯನ್ನು ಪೊಲೀಸ್‌ ಇಲಾಖೆಯವರೇ ಹೊರಗೆಳೆದಿದ್ದಾರೆ ಎಂದು ಅವರು ಹೇಳಿದರು.

ನಿಷ್ಠಾವಂತ, ಪ್ರಾಮಾಣಿಕ ಪೊಲೀಸ್ ಅಧಿಕಾರಿಯ ಮೇಲೆ ಆರೋಪ ಮಾಡಿದ್ದ ಬಿಜೆಪಿಯ ನಾಯಕನಿಗೆ ಪರೀಕ್ಷೆ ಅಕ್ರಮದಲ್ಲಿ ಈಗ ಬಂಧನಕ್ಕೊಳಗಾಗಿರುವ ಕಿಂಗ್‌ಪಿನ್ ಲಿಂಕ್ ಇತ್ತು.‌ ಪೊಲೀಸರು ಅದರ ಜಾಡು ಹಿಡಿದು ಎಲ್ಲವನ್ನೂ ಹೊರಗೆಳೆದು ಜನರ ಮುಂದೆ ಇಟ್ಟಿದ್ದಾರೆ. ಹೇಳುತ್ತಾ ಹೋದರೆ ಇದೇ ದೊಡ್ಡ ಕಥೆ ಆಗುತ್ತದೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಇದನ್ನೂ ಓದಿ: ಬಸವಣ್ಣನವರ ತತ್ತ್ವಾದರ್ಶದ ಮಾರ್ಗದಲ್ಲಿ ಬದುಕು ಸಾಗಿಸುವ ಅನಿವಾರ್ಯತೆ ನಮಗಿದೆ: ಪ್ರೊ ಅಷ್ಠಗಿ ಅಭಿಮತ

ಎಲ್ಲಾ ಅಭ್ಯರ್ಥಿಗಳು ದುಡ್ಡು ಕೊಟ್ಟು ಆಯ್ಕೆ ಅಗಿದ್ದಾರೆ ಎನ್ನಲು ಆಗುವುದಿಲ್ಲ. 30% ಆಭ್ಯರ್ಥಿಗಳು ಹಣದಿಂದ ಹುದ್ದೆ ಗಿಟ್ಟಿಸಿರಬಹುದು. ಹಾಗೆಯೇ 30-40% ಆಭ್ಯರ್ಥಿಗಳು ಪ್ರಾಮಾಣಿಕವಾಗಿ ಪರೀಕ್ಷೆ ಬರೆದಿರಬಹುದು, ನ್ಯಾಯಯುತವಾಗಿ ಆಯ್ಕೆಯಾದವರಿಗೆ ಅನ್ಯಾಯ ಆಗಬಾರದು ಎಂದಷ್ಟೇ ನಾನು ಹೇಳಿದ್ದೆ ಮಾಜಿ ಮುಖ್ಯಮಂತ್ರಿಗಳು ತಿಳಿಸಿದರು.

ಕಾಂಗ್ರೆಸ್‌ ನಾಯಕರ ಬಳಿ ದಾಖಲೆ ಇದೆಯಾ?:ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರ ಬಗ್ಗೆ ಕಾಂಗ್ರೆಸ್‌ ನಾಯಕರು ಆರೋಪ ಮಾಡುತ್ತಿದ್ದಾರೆ. ಆದರೆ, ಅವರ ಬಳಿ ಸಚಿವರ ವಿರುದ್ಧ ದಾಖಲೆ ಇದೆಯಾ? ಅವರ ವಿರುದ್ಧ ಎಲ್ಲಿದೆ ದಾಖಲೆ? ಎಂದು ಪ್ರಶ್ನಿಸಿದ ಮಾಜಿ ಮುಖ್ಯಮಂತ್ರಿಗಳು; ಸಚಿವರ ವಿರುದ್ಧ ಅವರ ಸಹೋದ್ಯೋಗಿಗಳೇ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಬೆಂಗಳೂರಿಗೆ ಬರುತ್ತಿದ್ದಂತೆಯೇ ಅದೆಲ್ಲ ಮಾಧ್ಯಮಗಳಲ್ಲಿ ಬರುವಂತೆ ನೋಡಿಕೊಂಡಿದ್ದಾರೆ. ಇದೆಲ್ಲ ಅಮಿತ್ ಶಾ ತಲೆಗೆ ಹೋಗಲಿ ಎಂದೇ ಸಚಿವರ ವಿರುದ್ಧ ಮಾಹಿತಿ ನೀಡಿದ್ದಾರೆ ಎಂದರು.

ಅಶ್ವತ್ಥನಾರಾಯಣ ವಿಕೆಟ್ ಉರುಳಿಸಲು ಬಿಜೆಪಿಯಲ್ಲಿಯೇ ಸಂಚು ನಡೆದಿದೆ. ರಾಜ್ಯದಲ್ಲಿ ಬಿಜೆಪಿಯವರು ತಮ್ಮ ಮನೆಗೆ ತಾವೇ ಬೆಂಕಿ ಹಚ್ಚಿಕೊಳ್ಳುತ್ತಿದ್ದಾರೆ, ನಾವು ಹಚ್ಚಬೇಕಿಲ್ಲ. ನಾನು ಮತ್ತೆ ಪೆಟ್ರೋಲ್ ತೆಗೆದುಕೊಂಡು ಹೋಗ್ಲಾ ಸುರಿಯೋಕೆ? ಕಾಂಗ್ರೆಸ್ ನಾಯಕರಿಗೆ ನೈಜ ವಿಷಯಗಳ ಮೇಲೆ ಹೋರಾಟ ನಡೆಸುವ ಶಕ್ತಿ ಇಲ್ಲ. ಯಾರೋ ಹೇಳಿದ್ದನ್ನು ಹೇಳ್ಕೋತಾರೆ ಅಷ್ಟೇ. ಎಂದು ಮಾಜಿ ಸಿಎಂ ತಿಳಿಸಿದರು.

ಹೊಸ ಯುವ ಗೀತೆ “ಚೆಕ್‌ ಮೈ ಫಿಜ್” ನಲ್ಲಿ ಮಿಂಚಲಿದ್ದಾರೆ ಬಾದ್‌ ಶಾ ಮತ್ತು ಜಾಕಲೀನ್‌ ಫರ್ನಾಂಡೀಸ್‌

ಧರ್ಮಗುರುಗಳ ಸಾವು ನೋವು ತಂದಿದೆ:ರಂಜಾನ್ ಹಬ್ಬದ ದಿನವೇ ಮುಸ್ಲಿಂ ಧರ್ಮಗುರುಗಳಾದ ಸೈಯದ್ ನಜ್ಮಿ ಮೃತಪಟ್ಟ ವಿಚಾರ ನನಗೆ ಬಹಳ ನೋವುಂಟು ಮಾಡಿದೆ ಎಂದು ಕುಮಾರಸ್ವಾಮಿ ದುಃಖ ವ್ಯಕ್ತಪಡಿಸಿದರು.

ನಮಾಜ್ ಬಳಿಕ ಕುಟುಂಬ ಸಮೇತರಾಗಿ ಊರಿಗೆ ಹೊರಟಿದ್ದವರು ಅಪಘಾತದಲ್ಲಿ ಧರ್ಮ ಗುರುಗಳು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಧರ್ಮಗುರುಗಳು, ಅವರ ಧರ್ಮಪತ್ನಿ, ಪುತ್ರಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಪುತ್ರಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಆಕೆಗೆ ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಉಚಿತ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದೇನೆ. ಈ ಬಗ್ಗೆ ಆದಿಚುಂಚನಗಿರಿ ಶ್ರೀಗಳ ಜತೆ ಮಾತನಾಡಿ ಮನವಿ ಮಾಡಿದ್ದೇನೆ. ಶ್ರೀಗಳು ವೈಯಕ್ತಿಕವಾಗಿ ಆಕೆಗೆ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚಿಸಿದ್ದಾರೆ.

ಯಾವುದೇ ರೀತಿಯ ಚಿಕಿತ್ಸಾ ವೆಚ್ಚವನ್ನು ತೆಗೆದುಕೊಳ್ಳದಂತೆ ಅವರು ಸೂಚಿಸಿದ್ದಾರೆ. ಮುಸ್ಲಿಂ ಧರ್ಮಗುರುಗಳು ಒಳ್ಳೆಯ ಹೆಸರು ಗಳಿಸಿದ್ದರು. ಧಾರ್ಮಿಕ ಕೆಲಸದ ಮೂಲಕ ಅವರ ಸಮುದಾಯದಲ್ಲಿ ಬಹಳಷ್ಟು ಸೇವೆ ಮಾಡಿದ್ದರು. ಆವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಹೆಚ್ಡಿಕೆ ತಿಳಿಸಿದರು.

emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

2 hours ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

3 hours ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

5 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

16 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

18 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

19 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420