‘ಬಸವ ಜಯಂತಿ’ ಮಹತ್ವ,’ಬಸವಣ್ಣ’ನವರ ‘ಹುಟ್ಟು ಹಬ್ಬ’

ಬಸವೇಶ್ವರ ಜಯಂತಿಯು ಮೇ 3 ರಂದು ಆಚರಿಸ್ಪಡುತ್ತದೆ. ಈ ದಿನದ ಮಹತ್ವವೇನು, ಆಚರಣೆ ಹೇಗೆ ಎಲ್ಲವನ್ನೂ ಈಗ ನೋಡೋಣವೇ..!

ಉಳ್ಳವರು ಶಿವಾಲಯ ಮಾಡುವರು
ನಾನೇನು ಮಾಡಲಿ ಬಡವನಯ್ಯಾ
ಎನ್ನ ಕಾಲೇ ಕಂಬ, ದೇಹವೇ ದೇಗುಲ
ಶಿರವೇ ಹೊನ್ನ ಕಳಶವಯ್ಯಾ
ಕೂಡಲಸಂಗಮದೇವಾ ಕೇಳಯ್ಯಾ
ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ”

ಹೀಗೆಯೇ ಮನುಕುಲಕ್ಕೆ ಮಹಾ ಸಂದೇಶಗಳನ್ನು ನೀಡಿದ ಬಸವಣ್ನನವರ ಜಯಂತಿ ಮೇ 3 ರಂದು ಬರುತ್ತದೆ.

ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮಾಜ ಈ ದಿನವನ್ನು ಅತ್ಯಂತ ದೊಡ್ಡದಾಗಿ ಆಚರಿಸುತ್ತದೆ. ಇದಲ್ಲದೆ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲ ಭಾಗಗಳಲ್ಲಿಯೂ ಬಸವ ಜಯಂತಿ ಆಚರಣೆಯು ನಡೆಯುತ್ತದೆ.

ಹನ್ನೆರಡನೇ ಶತಮಾನದ ಬಹು ದೊಡ್ಡ ಸಮಾಜ ಸುಧಾರಕರು ಬಸವಣ್ಣನವರು. ಮೇಲು ಕೀಳು, ಜಾತಿ ಧರ್ಮ, ಮಡಿ ಮೈಲಿಗೆ ತುಂಬಿದ್ದ ಸಮಾಜದ ಸಮಯದಲ್ಲಿ ನೊಂದವರ, ದೀನ ದಲಿತರ ಉದ್ಧಾರಕ್ಕೆ ನಿಂತವರು.

ಕೆಳವರ್ಗದವರನ್ನು ಮೇಲ್ವರ್ಗದವರು ಅತ್ಯಂತ ಹೀನಾಯವಾಗಿ ಕಾಣುತಿದ್ದ ಆ ಅನ್ಯಾಯವನ್ನು ಹೋಗಲಾಡಿಸಲೆಂದೇ ಬಸವಣ್ಣನವರು ಕಲ್ಯಾಣದಲ್ಲಿ ಕ್ರಾಂತಿಯ ಬೀಜ ಬಿತ್ತಿದರು. ಬಿಜ್ಜಳನ ವಿರುದ್ಧ, ಅಂಧ ಶ್ರದ್ಧೆಯ ವಿರುದ್ಧ ಸಿಡಿದು ನಿಂತು ಅನುಭವ ಮಂಟಪ ನಿರ್ಮಿಸಿದರು. ಅದರಡಿ ಎಲ್ಲಾ ವರ್ಗದವರನ್ನೂ ಬರ ಮಾಡಿಕೊಂಡರು. ಕಾಯಕವೇ ಕೈಲಾಸ ಎಂದು ಸಾರಿ, ಪ್ರತಿಯೊಬ್ಬರಲ್ಲೂ ದುಡಿದು ತಿನ್ನುವ ಹುಮ್ಮಸ್ಸುನ್ನು ತುಂಬಿದರು. ‘ವಸುದೈವ ಕುಟುಂಬಕಂ’ ಎನ್ನುತ್ತಾ ಎಲ್ಲರಲ್ಲೂ ಸಹೋದರತ್ವದ ಸಂದೇಶ ಸಾರಿದರು ನಮ್ಮ ಬಸವಣ್ಣನವರು.

ಮೂಢನಂಬಿಕೆ, ಮಡಿ ಮೈಲಿಗೆಯಿಂದ ತುಂಬಿದ್ದ ಸಮಾಜದ ನಡುವೆ ಬಸವಣ್ಣನವರ ವಚನಗಳು ಜೀವನವನ್ನು ಮತ್ತು ದೇವರನ್ನು ವಿಭಿನ್ನವಾಗಿ ನೋಡುವ ದೃಷ್ಟಿ ನೀಡಿದವು.

ಜಾತಿರಹಿತ ಸಮಾಜದ ಕನಸನ್ನು ಕಂಡ ಬಸವಣ್ಣನವರು ಪ್ರತಿಯೊಬ್ಬರಿಗೂ ಜೀವನದಲ್ಲಿ ಏಳ್ಗೆ ಪಡೆಯಲು ಸಮಾನ ಅವಕಾಶ ಬೇಕೆಂದು ಬಯಸಿದವರು. ತಮ್ಮೆಲ್ಲ ಈ ದೂರದೃಷ್ಟಿಯ ಸಮಾಜ ನಿರ್ಮಾಣಕ್ಕಾಗಿ ‘ಅನುಭವ ಮಂಟಪ’ವನ್ನು ಹುಟ್ಟು ಹಾಕಿದರು. ಈ ಅನುಭವ ಮಂಟಪದಲ್ಲಿ ಲಿಂಗಾಯತ ಮತ ನಂಬಿಕೆಯ ತತ್ವಜ್ಞಾನಿಗಳನ್ನು ಕಲೆ ಹಾಕಿ ಮನುಷ್ಯನ ನೈತಿಕತೆ ಮತ್ತು ಆದರ್ಶಗಳ ಬಗೆಗೆ ನಿರಂತರ ಚರ್ಚೆಗಳನ್ನು ಹುಟ್ಟು ಹಾಕಿದರು. ‘ಅಲ್ಲಮ ಪ್ರಭು’ ಸೇರಿದಂತೆ ಸಮಾಜದ ಕೆಳವರ್ಗ ಎನಿಸಿಕೊಂಡಿದ್ದ ಸಾಕಷ್ಟು ಜನರು ಶರಣರಾಗಿ ಈ ಅನುಭವ ಮಂಟಪದಿಂದ ಹೊರಬಂದರು..!

ಬಸವಣ್ಣ ಕೂಡಾ ಈ ಅನುಭವ ಮಂಟಪದಲ್ಲಿ ಅಭ್ಯರ್ಥಿಯಾಗಿ ಪಾಲು ವಹಿಸಿದರು. ಅಕ್ಕ ಮಹಾದೇವಿ, ಚನ್ನಬಸವಣ್ಣ ಇವರೆಲ್ಲರೂ ‘ಅನುಭವ ಮಂಟಪ’ದ ಮಹಾನ್ ಶರಣರು.

ಈ ನಾಲ್ಕು ರಾಶಿಗಳ ಜನ ತಮ್ಮ ಆರೋಗ್ಯ ಲೆಕ್ಕಿಸದೇ ಇತರರನ್ನು ಕಾಳಜಿ ಮಾಡ್ತಾರೆ..!ಅಕ್ಷಯ ತೃತೀಯದಂದೇ ಬಸವ ಜಯಂತಿ ಆಚರಣೆ ಏಕೆ?

ಬಸವ ಜಯಂತಿಯಂದು ಕರ್ನಾಟಕದಲ್ಲಿ ಸಾರ್ವಜನಿಕ ರಜೆ ನೀಡಲಾಗುತ್ತದೆ. ಪ್ರತಿ ವರ್ಷವೂ ಅಕ್ಷಯ ತೃತೀಯದಂದೇ ಬಸವ ಜಯಂತಿಯೂ ಬರುತ್ತದೆ. ಆದರೆ, ಬಸವಣ್ಣನವರು ಯಾವಾಗ ಜನಿಸಿದರೆಂಬ ಉಲ್ಲೇಖ ಎಲ್ಲಿಯೂ ಸಿಗುವುದೂ ಇಲ್ಲ. ಆದರೂ ಅಕ್ಷಯ ತೃತೀಯದಂದೇ ಬಸವ ಜಯಂತಿ ಆಚರಿಸುವುದರ ಹಿನ್ನೆಲೆ ಇಲ್ಲಿದೆ..!

ಕರ್ನಾಟಕದ ಗಾಂಧಿಯಂದು ಪ್ರಸಿದ್ಧರಾದ ‘ಹರ್ಡೇಕರ ಮಂಜಪ್ಪನವರು’ 1913 ರಲ್ಲಿ ಸಾರ್ವಜನಿಕವಾಗಿ ‘ಬಸವ ಜಯಂತಿ’ಯ ಆಚರಣೆ ಶುರು ಮಾಡಲು ನಿಶ್ಚಯಿಸಿದರು.

ವೀರಶೈವ, ಲಿಂಗಾಯತ ಸಮಾಜದ ಸಂಘಟನೆಗಾಗಿ ‘ಬಸವ ಜಯಂತಿ’ ಆಚರಿಸಲು ಹೊರಟ ಅವರಿಗೆ ಬಸವಣ್ಣ ಜನಿಸಿದ ದಿನಾಂಕ ತಿಳಿಯದಿರುವುದು ದೊಡ್ಡ ಗೊಂದಲವಾಯಿತು. ಆಗ ಮುರುಘಾಮಠದ ‘ಪೂಜ್ಯ ಶ್ರೀ ಮೃತ್ಯುಂಜಯ ಸ್ವಾಮಿಗಳು’ ಅಕ್ಷಯ ತದಿಗೆಯಂದು ‘ಬಸವ ಜಯಂತಿ’ಯನ್ನು ಆಚರಿಸಲು ತಿಳಿಸಿದರು. ಅಂದಿನಿಂದಲೂ ಅಕ್ಷಯ ತೃತೀಯದಂದು ‘ಬಸವ ಜಯಂತಿ’ ಆಚರಿಸಿಕೊಂಡು ಬರಲಾಗುತ್ತಿದೆ.

ಈ ದಿನ ಎಲ್ಲಾ ‘ಬಸವಣ್ಣ’ನ ಬೆಂಬಲಿಗರು ಅವರ ಸಂದೇಶಗಳನ್ನು ಪರಸ್ಪರ ಹಂಚಿಕೊಳ್ಳುತ್ತಾರೆ. ಸಮಾಜಕ್ಕೆ ಬಸವಣ್ಣನವರು ನೀಡಿದ ಕೊಡುಗೆಗಳನ್ನು ಸ್ಮರಿಸುತ್ತಾರೆ. ಜೊತೆಗೆ ಬಸವಣ್ಣನ ವಚನಗಳು ಎಲ್ಲೆಡೆ ಹರಿದಾಡುತ್ತವೆ..!
ಹೀಗಿದೆ ‘ಬಸವಣ್ಣ’ನವರ ‘ಬಸವ ಜಯಂತಿ’ಯ ಆಚರಣೆಯ ಹಿನ್ನಲೆಯೂ..!

  • # ಕೆ.ಶಿವು.ಲಕ್ಕಣ್ಣವರ
emedialine

Recent Posts

ಶಿಕ್ಷಣ ಕ್ಷೇತ್ರದಲ್ಲಿ ಸಾಧನೆಗೈದ ರಾಜಶೇಖರ್ ತಲಾರಿಗೆ ಮಾಧ್ಯಮ ರತ್ನ ಪ್ರಶಸ್ತಿ

ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…

31 mins ago

24 ನೇ ವರ್ಷದ `ಅಮ್ಮ ಪ್ರಶಸ್ತಿ’ಗೆ ಕೃತಿಗಳ ಆಹ್ವಾನ

ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…

52 mins ago

ಚಿಂಚೋಳಿ: ಪ್ರವಾದಿ ಅವಹೇಳನ ಖಂಡಿಸಿ ಪ್ರತಿಭಟನೆ

ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…

3 hours ago

ಗುರುರಾಜ ಕರ್ಜಗಿಯನ್ನು ಶೈಕ್ಷಣಿಕ ಗುಣಮಟ್ಟ ಸುಧಾರಣಾ ಸಮಿತಿಯಿಂದ ಕೈಬಿಡಲು ಎಸ್ಎಫ್ಐ ಆಗ್ರಹ

ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…

14 hours ago

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

16 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

17 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420