ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಯಿ ಇರುವ ಹುದ್ದೆಗಳನ್ನು ತುಂಬದೆ ಸರ್ಕಾರ ಈ ಭಾಗದ ಯುವಕರಿಗೆ ಪದೇ ಪದೇ ಅನ್ಯಾಯವೆಸಗುತ್ತಿದೆ ಎಂದು ಮಾಜಿ ಸಚಿವರಾದ, ಶಾಸಕರಾದ, ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ದ ಹರಿಹಾಯ್ದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಬರೆದುಕೊಂಡಿರುವ ಅವರು ಕಲ್ಯಾಣ ಕರ್ನಾಟಕದಲ್ಲಿ ಕಲ್ಯಾಣವೇ ಇಲ್ಲದಾಗಿದೆ. ಈ ಬಿಜೆಪಿ ಸರ್ಕಾರದಲ್ಲಿ ಹುದ್ದೆಗಳು ಖಾಲಿಯಿದ್ದರೂ ಸಹ ಭರ್ತಿ ಮಾಡದೇ ನಮ್ಮ ಭಾಗದ ಯುವಕರಿಗೆ ಅನ್ಯಾಯವೆಸಗುತ್ತಿದೆ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಸೌಹಾರ್ದ ಬಸವ, ರಂಜಾನ್, ಅಂಬೇಡ್ಕರ್ ಜಯಂತಿ ಆಚರಣೆ
ಕಲ್ಯಾಣ ಕರ್ನಾಟಕ ವಿಶೇಷ ಸ್ಥಾನಮಾನ ಹೊಂದಿದ್ದರೂ ಕೂಡಾ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಬಿಜೆಪಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
ಕಲ್ಯಾಣ ಕರ್ನಾಣಟಕದಲ್ಲಿರುವ ಒಟ್ಟು ಹುದ್ದೆಗಳು – 32,252. ಇವುಗಳಲ್ಲಿ ನೇಮಕಾತಿಯಾಗಿರುವ ಹುದ್ದೆಗಳು – 13,711 ಹಾಗೂ ಖಾಲಿ ಇರುವ ಹುದ್ದೆಗಳು- 18,549 ಹುದ್ದೆಗಳು ಹಾಗೂ ನೇಮಕಾತಿಗೆ ಪ್ರಸ್ತಾವನೆ ಕಳಿಸಿದ್ದು – 6,204 ಹುದ್ದೆಗಳು ಮುಂಭಡ್ತಿಯಲ್ಲಿನ ಸ್ಥಿತಿ ಹುದ್ದೆಗಳು -24,197, ಮುಂಭಡ್ತಿಯಾಗಿರುವ ಹುದ್ದೆಗಳು- 14043 ಹಾಗೂ ಖಾಲಿ ಇರುವ ಹುದ್ದೆಗಳು 10,154 ಹುದ್ದೆಗಳು ಎಂದು ಖರ್ಗೆ ಅವರು ವಿವರಿಸಿದ್ದಾರೆ.
ಇದನ್ನೂ ಓದಿ: ಸ್ಫೋಟಕ ಅಂಶ ಬಯಲು ಮಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…