ಬೆಂಗಳೂರು: ಕಳೆದ ತಿಂಗಳು 16ರಂದು ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಸ್ವಿಯಾಗಿ ನಡಿದಿದ್ದು, ಇದೇ ಮೇ ತಿಂಗಳ 13ರಂದು ನೆಲಮಂಗಲ ಟೋಲ್ ಪ್ಲಾಜಾ ಬಳಿ ಬೃಹತ್ ಜನತಾ ಜಲಧಾರೆ ಸಮಾವೇಶ ನಡೆಯಲಿದೆ.
ಜಲಧಾರೆ ಕಾರ್ಯಕ್ರಮವು ಈ ಸಮಾವೇಶದ ಮೂಲಕ ಸಮಾಪ್ತಿಯಾಗಲಿದ್ದು, ಆ ಬೃಹತ್ ಸಮಾವೇಶದ ಸಿದ್ಧತೆ ಮತ್ತು ರೂಪುರೇಶೆಗಳ ಬಗ್ಗೆ ಇಂದು ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಪಕ್ಷದ ಪ್ರಮುಖರ ಸಭೆ (ಕೋರ್ ಕಮಿಟಿ) ಯಲ್ಲಿ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು.
ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಸಮಕ್ಷಮದಲ್ಲಿ ಮಾಜಿ ಸಚಿವ ಬಂಡೆಪ್ಪ ಖಾಷೆಂಪೂರ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು. ಸಭೆಯ ನಂತರ ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಖಾಷೆಂಪೂರ ಅವರು ಮಾಧ್ಯಮಗಳಿಗೆ ಈ ಬಗ್ಗೆ ಮಾಹಿತಿ ನೀಡಿದರು. ಅವರು ಹೇಳಿದ್ದಿಷ್ಟು.
ರಾಜ್ಯದ 184 ವಿಧಾನಸಭೆ ಕ್ಷೇತ್ರಗಳಲ್ಲಿ ಜಲಧಾರೆಯ 15 ಗಂಗಾ ರಥಗಳು ಯಶಸ್ವಿಯಾಗಿ ಸಂಚರಿಸುತ್ತಿವೆ. ಇವುಗಳ ಮೂಲಕ ರಾಜ್ಯದ ಎಲ್ಲಾ ಜೀವ ನದಿಗಳಿಂದ ಸಂಗ್ರಹ ಮಾಡಲಾಗಿರುವ ಪುಣ್ಯಜಲವನ್ನು ಒಂದು ಬೃಹತ್ ಕಲಶಕ್ಕೆ ತುಂಬಿಸಿ ಸಮಾವೇಶದಲ್ಲಿ ಪೂಜೆ ನೆರವೇರಿಸಲಾಗುವುದು. ಈ ಸಮಾವೇಶದಲ್ಲಿ 5 ಲಕ್ಷಕ್ಕಿಂತ ಹೆಚ್ಚು ಜನ ಸೇರಲಿದ್ದಾರೆ.
ಮುಂದಿನ ಚುನಾವಣೆಯಲ್ಲಿ ಪಕ್ಷಕ್ಕೆ ಬಹುಮತ ಸಿಕ್ಕರೆ ಐದು ವರ್ಷಗಳಲ್ಲಿ ಜನತಾ ಸರಕಾರ ಕೈಗೊಳ್ಳಲಿರುವ ಕಾರ್ಯಕ್ರಮಗಳ ಬಗ್ಗೆ ಆ ಸಮಾವೇಶದಲ್ಲಿ ಸಂಕಲ್ಪ ಮಾಡಲಾಗುವುದು. ಸಂಜೆ 4 ಗಂಟೆಗೆ ಆರಂಭ ಆಗಲಿರುವ ಸಮಾವೇಶದಲ್ಲಿ ಮಾಜಿ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯ ಅಧ್ಯಕ್ಷ ಸಿಎಂ ಇಬ್ರಾಹಿಂ, ಸಂಸದೀಯ ಮಂಡಳಿ ಅಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಹಿರಿಯ ಮುಖಂಡರು, ಸಾಹಿತಿಗಳು, ಬುದ್ಧಿಜೀವಿಗಳು, ಕನ್ನಡಪರ, ರೈತಪರ ಹೋರಾಟಗಾರರು ಭಾಗಿಯಾಗುವರು.
ಗಂಗಾ ಆರತಿ: ಸಮಾವೇಶದ ಕೊನೆಯಲ್ಲಿ ಗಂಗಾ ಪೂಜೆ ನೆರವೇರಿಸಿದ ಮೇಲೆ ಅತ್ಯಂತ ಸಂಪ್ರದಾಯಬದ್ಧವಾಗಿ ಗಂಗಾ ಆರತಿಯನ್ನು ನೆರವೇರಿಸಲಾಗುವುದು. ಈ ಕಾರ್ಯಕ್ರಮ ನಡೆಸಿಕೊಡಲು ವಾರಾಣಸಿಯಿಂದ ಪಂಡಿತರನ್ನು ಕರೆಸಲಾಗುವುದು. ಸಂಜೆಯ ಹೊತ್ತಿನಲ್ಲಿ ಆರತಿ ಕಾರ್ಯಕ್ರಮ ವಿಶೇಷವಾಗಿ ಮೂಡಿಬರಲಿದೆ.
ಐದು ಉಪ ಸಮಿತಿ ರಚನೆ: ಜಲಧಾರೆ ಸಮಾವೇಶವನ್ನು ಯಶಸ್ವಿಯಾಗಿ ಮಾಡುವ ಉದ್ದೇಶದಿಂದ ಐದು ಉಪ ಸಮಿತಿಗಳನ್ನು ರಚನೆ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಯಿತು. ವಾಹನ ನಿಲುಗಡೆ, ಊಟ, ಮಾಧ್ಯಮ, ಸಭಾಂಗಣ ಹಾಗೂ ಗಂಗಾ ಆರತಿ ವ್ಯವಸ್ಥೆಗಾಗಿ ಈ ಉಪ ಸಮಿತಿಗಳನ್ನು ರಚನೆ ಮಾಡಲಾಗಿದೆ. ಅವುಗಳ ಮುಖ್ಯಸ್ಥರು ಯಾರು ಎಂಬುದನ್ನು ಒಂದೆರಡು ದಿನದಲ್ಲಿ ತಿಳಿಸಲಾಗುವುದು.
ಅಭ್ಯರ್ಥಿ ಆಯ್ಕೆ: ವಾಯುವ್ಯ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯನ್ನಾಗಿ ಚಂದ್ರಶೇಖರ್ ಲೋಣಿ ಅವರನ್ನು ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜತೆಗೆ, ಮಾಜಿ ಸಚಿವ ಎನ್. ಎಂ.ನಬಿ, ಮಾಜಿ ಸಂಸದ ಕುಪೆಂದ್ರ ರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಗೋವಿಂದರಾಜು, ಶಾಸಕರಾದ ಕೆ.ಎಂ. ಕೃಷ್ಣಾರೆಡ್ಡಿ, ವೆಂಕಟರಾವ್ ನಾಡಗೌಡ, ಪುಟ್ಟರಾಜು, ಅನ್ನದಾನಿ, ರಾಜಾ ವೆಂಕಟಪ್ಪ ನಾಯಕ, ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್, ತಿಮ್ಮರಾಯಪ್ಪ, ವೆಂಕಟ ಶಿವಾರೆಡ್ಡಿ, ವಿಧಾನ ಪರಿಷತ್ ಮಾಜಿ ಸದಸ್ಯ ಟಿ.ಎ.ಶರವಣ ಹಾಗೂ ಜಪ್ರುಲ್ಲಾ ಖಾನ್, ಸುಧಾಕರ ಶೆಟ್ಟಿ, ಸಮೃದ್ಧಿ ಮಂಜುನಾಥ್, ನಾಸಿರ್ ಭಗವಾನ್, ವಿಲ್ಸನ್ ರೆಡ್ಡಿ, ಹನುಮಂತಪ್ಪ ಮಾವಿನಮರದ ಮುಂತಾದವರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…