ಕಲಬುರಗಿ: 2021-22ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಹಾಗೂ “ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಮೆಟ್ರಿಕ್-ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ/ಅರೆ-ಅಲೆಮಾರಿ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2022ರ ಮೇ 31 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಹ ಅಭ್ಯರ್ಥಿಗಳು www.ssp.postmatric.karnataka.gov.in ವೆಬ್‍ಸೈಟ್‍ದಲ್ಲಿ 2022ರ ಮೇ 31 ರೊಳಗಾಗಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್‍ಸೈಟ್‍ನ್ನು ಹಾಗೂ ಸಹಾಯವಾಣಿ ಸಂಖ್ಯೆ 8050770005, 8050770004 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…