ಬಿಜೆಪಿಯಿಂದ ಮಾತ್ರ ಜನಪರ ಸರ್ಕಾರ ಸಾಧ್ಯ: ಬಿರಾದಾರ್

0
112

ಕಲಬುರಗಿ: ರಾಜ್ಯದ ಜನತೆ ಬಿಜೆಪಿ ಪರವಾಗಿದ್ದಾರೆ. ಹಾಗಾಗಿ ಬಿಜೆಪಿ ಮಾತ್ರ ರಾಜ್ಯದಲ್ಲಿ ಈಗ ಜನಪರವಾಗಿ ಆಡಳಿತ ನಡೆಸಲು ಸಂವಿಧಾನಬದ್ಧ ಹಕ್ಕು ಪಡೆದುಕೊಂಡಿದೆ ಎಂದು ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸುಭಾಷ್ ಬಿರಾದಾರ್ ಕಮಲಾಪೂರ್ ಅವರು ತಿಳಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಪಡೆದ ಪರಿಣಾಮ ೧೦೪ ಸ್ಥಾನಗಳಲ್ಲಿ ಜಯಭೇರಿ ಬಾರಿಸಿತು. ಚುನಾವಣೆ ಮುನ್ನ ಪರಸ್ಪರ ಕಚ್ಚಾಡಿಕೊಂಡಿದ್ದ ಕಾಂಗ್ರೆಸ್ ಹಾಗೂ ಜೆಡಿ(ಎಸ್) ಪಕ್ಷಗಳು ಕೇವಲ ಅಧಿಕಾರಕ್ಕಾಗಿ ಮೈತ್ರಿಕೂಟ ಸರ್ಕಾರ ರಚಿಸಿಕೊಂಡಿದ್ದರಿಂದ ಮೈತ್ರಿಕೂಟದ ಶಾಸಕರೇ ತೀವ್ರ ಅಸಮಾಧಾನಗೊಂಡರು. ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದು ಪತನದವರೆಗೂ ಕಚ್ಚಾಟ, ಹಾದಿ ಬೀದಿ ರಂಪಾಟ, ಭಿನ್ನಮತಗಳಿಂದ ಇಡೀ ಆಡಳಿತ ಯಂತ್ರವೇ ಕುಸಿದು ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದವು. ಈಗ ಸಮ್ಮಿಶ್ರ ಸರ್ಕಾರ ಪತನಗೊಂಡಿದ್ದರಿಂದ ಬಿಜೆಪಿಗೆ ಸದನದಲ್ಲಿ ಬಹುಮತ ಇದ್ದು, ಶೀಘ್ರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಅವರು ಹೇಳಿಕೆಯಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ರಾಜ್ಯದ ಜನರು ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಬೇಕು ಎಂದು ಬಯಸಿದ್ದರು. ಅವಕಾಶವಾದಿ ರಾಜಕಾರಣದಿಂದ ಕೇವಲ ಮೂರು ದಿನಗಳ ಮುಖ್ಯಮಂತ್ರಿಯಾಗಿ ಅಧಿಕಾರ ತ್ಯಜಿಸಬೇಕಾಗಿತ್ತು. ಈಗ ಮೈತ್ರಿಕೂಟದ ಶಾಸಕರ ಅಸಹಕಾರದಿಂದಲೇ ಮೈತ್ರಿ ಸರ್ಕಾರ ಬಿದ್ದು ಹೋಗಿದ್ದು, ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚಿಸಲಿದೆ ಎಂದು ಅವರು ತಿಳಿಸಿದ್ದಾರೆ.

ಯಡಿಯೂರಪ್ಪ ಅವರು ಹಿಂದೆ ಮುಖ್ಯಮಂತ್ರಿಗಳಾಗಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಗಳನ್ನು ರಾಜ್ಯದ ಜನತೆ ಮರೆತಿಲ್ಲ. ಈಗ ಮತ್ತೆ ರಾಜ್ಯದಲ್ಲಿ ಅಭಿವೃದ್ಧಿ ಪರ್ವ ಆರಂಭವಾಗಲಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ರಾಜ್ಯದ ಸಮಗ್ರ ಅಭಿವೃದ್ಧಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಆಗಲಿದೆ ಎಂದು ಅವರು ಹೇಳಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here