ಬಿಸಿ ಬಿಸಿ ಸುದ್ದಿ

‘ಸಾಹಿತ್ಯದ ಬದುಕಿಗೆ ಮಾಧ್ಯಮದ ಬೆಳಕು’ ವಿಚಾರಗೋಷ್ಠಿ

ಕಲಬುರಗಿ: ಇಂದು ಗ್ರಂಥಾಲಯ ಡಿಜಿಟಲಿಕರಣದಲ್ಲಿ ನಾವು ಜಾಗತೀಕ ಮಟ್ಟದಲ್ಲಿ ಪ್ರಥಮ ಸ್ಥಾನದಲ್ಲಿದ್ದೇವೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ. ಗ್ರಂಥಾಲಯ ಹಾಗೂ ಸುದ್ದಿ ಮಾಧ್ಯಮಗಳ ಅವಿನಾಭಾವ ಸಂಬಂಧ ಹಾಗೂ ಬೆಸುಗೆ ಬೇರ್ಪಡಿಸಲು ಅಸಾಧ್ಯ. ಡಾ.ಬಿ.ಆರ್.ಅಂಬೇಡ್ಕರ್, ಮಹಾತ್ಮಾ ಗಾಂಧಿಜೀ, ಡಿವಿಜಿ ಸೇರಿದಂತೆ ಮುಂತಾದ ಮಹಾತ್ಮರು ಪತ್ರಿಕೆಗಳು ಸಮಾಜಕ್ಕೆ ಪೂರಕ ಎಂಬ ಅಂಶವನ್ನು ಮನಗಂಡು ಪತ್ರಿಕೆಗಳು ಹೊರತರುವ ಮೂಲಕ ಸಾಬೀತು ಮಾಡಿದ್ದಾರೆ. ಮಂಗಳೂರು ಸಮಾಚಾರ ಎಂಬ ಕನ್ನಡದ ಮೊದಲ ಪತ್ರಿಕೆಯಿಂದ ಇಂದಿನವರೆಗೆ ಪತ್ರಿಕೆಗಳು ಸಮಾಜದ ಕನ್ನಡಿಯಾಗಿ ಕೆಲಸ ಮಾಡುತ್ತಲಿವೆ. ಹಾಗಾಗಿ ಪತ್ರಕರ್ತರ ಕಾರ್ಯ ಮೆಚ್ಚುವಂತಹದ್ದು ಎಂದು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶಕುಮಾರ ಹೊಸಮನಿ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಸೋಮವಾರ ಏರ್ಪಡಿಸಿದ ‘ಸಾಹಿತ್ಯದ ಬದುಕಿಗೆ ಮಾಧ್ಯಮದ ಬೆಳಕು’ ಕುರಿತ ವಿಚಾರಗೋಷ್ಠಿ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಗೆ ಅಬಿನಂದನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಯಾವುದೇ ವ್ಯಕ್ತಿ, ಸಮೂಹ ಹಾಗೂ ಸಮಾಜದ ಅಭಿವೃದ್ಧಿಗೆ ಪತ್ರಿಕೆಗಳು ಪೂರಕವಾಗಿವೆ. ನಾನು ಇಂದು ಜಿಲ್ಲಾ ಕಸಾಪದ ಅಧ್ಯಕ್ಷನಾಗಲು ಕೂಡ ಪತ್ರಿಕೆಗಳು ಬೆನ್ನೆಲುಬಾಗಿವೆ. ಸಾಹಿತ್ಯಿಕ, ಸಾಂಸ್ಕೃತಿಕ ಚಟುವಟಿಕೆಗಳ ಕುರಿತು ಯಾವತ್ತೂ ಧನಾತ್ಮಕವಾಗಿ ಸ್ಪಂದಿಸಿವೆ. ಮುಂದಿನ ದಿನಗಳಲ್ಲಿ ಕೂಡ ಪರಿಷತ್ತಿನೊಂದಿಗೆ ಸ್ಪಂದನಾ ಹಸ್ತ ಚಾಚುತ್ತೇವೆ ಎಂದು ಭಾವ ತುಂಬಿ ನುಡಿದರು. ಪತ್ರಿಕೆ ಒಳಗೊಂಡು ಮುಂತಾದ ಸುದ್ದಿ ಮಾಧ್ಯಮದವರಲ್ಲಿ  ಕವಿ ಹೃದಯಿಗಳಾಗಿದ್ದಾರೆ ಎಂಬುದರಲ್ಲಿ ಸಂಶಯವಿಲ್ಲ. ಈಗಾಗಲೇ ಪೊಲೀಸ್ ಸಾಹಿತಿಗಳ ಸಮಾವೇಶ ಹಾಗೂ ಶಿಕ್ಷಕ ಸಾಹಿತಿಗಳ ಸಮಾವೇಶ ಮಾಡಿರುವಂತೆ ಪತ್ರಿಕಾರಂಗದಲ್ಲಿನ ಪತ್ರಕರ್ತ ಸಾಹಿತಿಗಳ ಸಮಾವೇಶ ಹಮ್ಮಿಕೊಳ್ಳುವ ಉದ್ದೇಶವಿದೆ ಎಂದು ಹೇಳಿದರು.

ವಿಚಾರ ಮಂಡನೆ ಮಾಡಿದ ಸಾಹಿತಿ-ಪತ್ರಕರ್ತ ಡಾ.ಶಿವರಂಜನ್ ಸತ್ಯಂಪೇಟೆ, ಸಾಹಿತ್ಯ ಹಾಗೂ ಪತ್ರಿಕೆಗಳು ಒಂದಕ್ಕೊಂದು ಪೂರಕವಾಗಿ ಬೆಸೆದುಕೊಂಡಿವೆ. ಹಿಂದಿನ ಪತ್ರಿಕೆಗಳು ಸಾಹಿತ್ಯಕ್ಕೆ ಮೀಸಲಾಗಿದ್ದವು. ಆದರೆ ಇಂದಿನ ಪತ್ರಿಕೆಗಳಲ್ಲಿ ಸಾಹಿತ್ಯ ಹೆಚ್ಚಾಗಿ ಕಾಣುತ್ತಿಲ್ಲ. ಕಾಲಕ್ಕೆ ತಕ್ಕಂತೆ ಪತ್ರಿಕೆಗಳು ಕೂಡ ಪರಿವರ್ತಿತ ರೂಪದಲ್ಲಿ ಸಾಗುತ್ತಲಿವೆ ಎಂದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಡಾ.ರಾಜೇಂದ್ರ ಯರನಾಳೆ ಮಾತನಾಡಿದರು. ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಶಿವರಾಜ ಅಂಡಗಿ, ಯಶವಂತರಾಯ ಅಷ್ಠಗಿ, ಶರಣರಾಜ್ ಛಪ್ಪರಬಂದಿ, ಶಕುಂತಲಾ ಪಾಟೀಲ ಜಾವಳಿ, ಕಲ್ಯಾಣಕುಮಾರ ಶೀಲವಂತ, ಡಾ.ಕೆ.ಗಿರಿಮಲ್ಲ, ಧರ್ಮಣ್ಣ ಹೆಚ್.ಧನ್ನಿ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ಸಿದ್ಧಲಿಂಗ ಬಾಳಿ ವೇದಿಕೆ ಮೇಲಿದ್ದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕಕ್ಕೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ವಿಶೇಷವಾಗಿ ಗೌರವಿಸಲಾಯಿತು.

ನಗರ ಕೇಂದ್ರ ಗ್ರಂಥಾಲಯ ಇಲಾಖೆಯ ಉಪ ನಿರ್ದೇಶಕ ಅಜಯಕುಮಾರ, ಹಿರಿಯ ಸಾಹಿತಿಗಳಾದ ಡಾ.ಸ್ವಾಮಿರಾವ ಕುಲಕರ್ಣಿ, ಮುಡುಬಿ ಗುಂಡೇರಾವ, ಪ್ರೊ.ಶಿವರಾಜ ಪಾಟೀಲ, ಕೆ.ಎಸ್.ಬಂಧು ಸಿದ್ಧೇಶ್ವರಕರ್, ಪ್ರಮುಖರಾದ ಜಗದೀಶ ಮರಪಳ್ಳಿ, ಬಸವರಾಜ ಮೊರಬದ, ಶಿವಕುಮಾರ ಸಿ.ಎಚ್., ಗಣಪತಿ ಪಾಟೀಲ,  ವಿಶ್ವನಾಥ ತೊಟ್ನಳ್ಳಿ, ಶಿವಲೀಲಾ ತೆಗನೂರ, ಪದ್ಮಾವತಿ ಮಾಲಿಪಾಟೀಲ, ಪದ್ಮಾವತಿ ನಾಯಕ್, ಶಿವಾನಂದ ಮಠಪತಿ, ಎಸ್.ಎಂ.ಪಟ್ಟಣಕರ್, ಗುರುಬಸಪ್ಪ ಸಜ್ಜನಶೆಟ್ಟಿ, ಸಂತೋಷ ಕುಡಳ್ಳಿ, ಶಿವಶರಣಪ್ಪ ಹಡಪದ, ನಾಗರಾಜ ಜಮದರಖಾನಿ, ಮಲ್ಲಿಕಾರ್ಜುನ ಇಬ್ರಾಹಿಂಪೂರ, ಶಂಕರ ಹೂಗಾರ ದೇಸಾಯಿ ಕಲ್ಲೂರ, ಡಾ.ಚಂದ್ರಶೇಖರ ದೊಡ್ಮನಿ, ದೌಲತರಾವ ಮಾಲಿಪಾಟೀಲ ಸೇರಿದಂತೆ ಅನೇಕರು ಭಾಗವಹಿಸಿದ್ದರು.

emedialine

Recent Posts

ಈಶಾನ್ಯ ಪದವೀಧರ ಚುನಾವಣೆ,ಅಂತಿಮ ಮತದಾನಕ್ಕೆ 1,56,623 ಮತದಾರರು ಅರ್ಹ

ಕಲಬುರಗಿ: ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರದ ಚುನಾವಣೆಗೆ ಜೂನ್ 3 ರಂದು ನಡೆಯುವ ಮತದಾನಕ್ಕೆ ಕ್ಷೇತ್ರದಾದ್ಯಂತ 99,121 ಪುರುಷರು, 57,483…

22 mins ago

ಡೊನೇಷನ್ ಹಾವಳಿಗೆ ಕಡಿವಾಣಕ್ಕೆ ಎಸ್ಎಫ್ಐಯಿಂದ ಶಾಲಾ ಶಿಕ್ಷಣ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಮನವಿ

ಬೆಂಗಳೂರು: ರಾಜ್ಯದಲ್ಲಿ ಬಹುತೇಕ ಖಾಸಗಿ ಶಾಲೆಗಳು 2024-25ನೇ, ಸಾಲಿನಲ್ಲಿ ಪ್ರವೇಶ ಶುಲ್ಕ, ಬಟ್ಟೆ. ಶೂ-ಸಾಕ್ಸ್. ಟೈ, ಬೆಲ್ಟ್, ಸ್ಮಾರ್ಟ್ ಕ್ಲಾಸ್,…

3 hours ago

ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಸಂಸ್ಕಾರ ಶಿಬಿರದ ಸಮರೂಪ 21ಕ್ಕೆ

ಕಲಬುರಗಿ : ತಾಲೂಕಿನ ಹೊನ್ನಕಿರಣಗಿ ಗ್ರಾಮದ ಶ್ರೀ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ 41 ದಿನಗಳ ಪರ್ಯಂತರ ಜರುಗಿಬಂದ 17ನೇ ವರ್ಷದ…

6 hours ago

ತುರ್ತಾಗಿ ಬರ ಪರಿಹಾರ ಒದಗಿಸಲು ಅಖಿಲ ಭಾರತ ರೈತ ಕೃಷಿಕಾರ್ಮಿಕರ ಸಂಘಟನೆ ಒತ್ತಾಯ

ಕಲಬುರಗಿ: ರಾಜ್ಯ ರೈತ ಸಮುದಾಯ ಮತ್ತು ಕೃಷಿ ಕಾರ್ಮಿಕರು ತೀವ್ರ ಬರದಲ್ಲಿ ನರಳುತ್ತಿದ್ದಾರೆ. ಆದ್ದರಿಂದ ಸರ್ಕಾರ ಯುದ್ಧೋಪಾದಿಯಲ್ಲಿ ಬರ ಪರಿಹಾರ…

6 hours ago

ಜಂಗಮಶೆಟ್ಟಿ ರಾಜ್ಯ ಮಟ್ಟದ ರಂಗಪ್ರಶಸ್ತಿಗೆ ಆಹ್ವಾನ

ಕಲಬುರಗಿ : ಇಲ್ಲಿನ ರಂಗಸಂಗಮ ಕಲಾವೇದಿಕೆಯು ಕೊಡಮಾಡುವ ಎಸ್.ಬಿ.ಜಂಗಮಶೆಟ್ಟಿ ಮತ್ತು ಸುಭದ್ರಾದೇವಿ ಜಂಗಮಶೆಟ್ಟಿ ರಂಗ ಪ್ರಶಸ್ತಿಗೆ ರಂಗ ಸಾಧಕರಿಂದ ಅರ್ಜಿ…

6 hours ago

ಕಲಬುರಗಿ ಕೇಂದ್ರೀಯ ವಿವಿಯಲ್ಲಿ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಸಾವು

ಕಲಬುರಗಿ: ಇಲ್ಲಿನ ಕಡಗಂಚಿ ಕೇಂದ್ರಿಯ ವಿಶ್ವ ವಿದ್ಯಾಲಯದ ಸಂಶೋಧನಾ ವಿದ್ಯಾರ್ಥಿ ಅನುಮಾನಸ್ಪದ ಮೃತಪಟ್ಟಿರುವ ಘಟನೆ ಬೆಳಕ್ಕಿಗೆ ಬಂದಿದಿದ್ದು, ಘಟನಾ ಸ್ಥಳಕ್ಕೆ…

6 hours ago