ಬಿಸಿ ಬಿಸಿ ಸುದ್ದಿ

ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಎಸ್‌ಯುಸಿಐ ಪ್ರತಿಭಟನೆ

ಶಹಾಬಾದ: ಎಲ್‌ಪಿಜಿ ದರ ಏರಿಕೆಯನ್ನು ವಿರೋಧಿಸಿ ಸೋಮವಾರ ರಾತ್ರಿ ಎಸ್.ಯು.ಸಿ.ಐ (ಸಿ) ವತಿಯಿಂದ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಎಸ್‌ಯುಸಿಐ (ಕಮ್ಯುನಿಸ್ಟ್)ನ ನಗರದ ಕಾರ್ಯದರ್ಶಿ ಕಾಮ್ರೇಡ್ ಗಣಪತರಾವ. ಕೆ.ಮಾನೆ ಮಾತನಾಡಿ, ಅಚ್ಚೇ ದಿನ್ ಎಂದರೆ ಅದಾನಿ ಅಂಬಾನಿಗಳ ಅಚ್ಚೇ ದಿನ್ ಹೊರತು ಇದು ಜನ ಸಾಮಾನ್ಯರಿಗಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಉಚಿತವಾಗಿ ಸಿಲಿಂಡರ್ ಕೊಡುತ್ತೇವೆ ಎಂದು ಹೇಳಿ ಈಗ ಕೇಂದ್ರ ಸರ್ಕಾರವು ಏಕಾಏಕಿ ರೂ೫೦/- ಏರಿಸಿದೆ. ಈ ಬೆಲೆ ಏರಿಕೆಯ ಪ್ರಹಾರವು ನಿರಂತರವಾಗಿ ನಡೆಯುತ್ತಲೇ ಇದೆ. ಪ್ರತಿಯೊಂದು ಕ್ಷೇತ್ರ ಖಾಸಗೀಕರಣಗೊಳಿಸುತ್ತಿರುವ ಬಿಜೆಪಿ ಸರ್ಕಾರವು ಇತ್ತೀಚೆಗೆ ಕಾರ್ಪೊರೇಟ್ ಧಣಿಗಳ ೬೮,೦೦೦ಕೋಟಿ ಸಾಲವನ್ನು ಮನ್ನಾ ಮಾಡಿದೆ. ಸಾಮಾನ್ಯ ಜನರನ್ನು ವಂಚಿಸಿ ಹಗಲು ದರೋಡೆಗೆ ಸರ್ಕಾರವು ಮುಂದಾಗಿದೆ ಎಂದು ಕಿಡಿಕಾರಿದರು. ಕೋವಿಡ್ ನಂತರ ಜನರಿಗೆ ಆದಾಯ ಇಲ್ಲ. ಕೆಲಸ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆಯ ವಿರುದ್ಧ ಧ್ವನಿ ಎತ್ತಿ ಅಧಿಕಾರ ವಹಿಸಿಕೊಂಡಿರುವ ಬಿಜೆಪಿ ಸರ್ಕಾರವು ತಾನು ಅಧಿಕಾರ ವಹಿಸಿಕೊಂಡಾಗ ತೆರಿಗೆಯ ಮೇಲೆ ತೆರಿಗೆ ವಿಧಿಸಿ ಜನರನ್ನು ಲೂಟಿ ಹೊಡೆಯುತ್ತಿದೆ. ಅಗತ್ಯ ವಸ್ತುಗಳ ಬೆಲೆ ಹೆಚ್ಚಾಗಿದೆ. ನಿರೋದ್ಯೋಗ, ವೇತನ ಕಡಿತ ಹೆಚ್ಚಾಗಿರುವ ಪ್ರಸ್ತುತ ಪರಿಸ್ಥಿತಿಯಲ್ಲಿ ಬೆಲೆ ಏರಿಕೆಯು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದರು.

ಇದನ್ನೂ ಓದಿ: ಫೋಟೋಗ್ರಾಫರ್ಸ್ ಅಸೋಸಿಯೇಶನ್ ವತಿಯಿಂದ ಶಿವಾನಂದ ತಗಡೂರುಗೆ ಸನ್ಮಾನ

ಕಾಮ್ರೇಡ್ ಜಗನ್ನಾಥ.ಎಸ್.ಹೆಚ್ ಮಾತನಾಡಿ, ಡಬಲ್ ಇಂಜಿನ್ ಸರ್ಕಾರವೆಂದು ಹೇಳಿಕೊಂಡು ಡಬಲ್ ದರೋಡೆ ನಡೆಯುತ್ತಿದೆ. ಒಂದೆಡೆ ಜನಸಾಮಾನ್ಯರು ಜೀವನ ನಡೆಸಲು ಹರಸಾಹಸ ಪಡುತ್ತಿದ್ದಾರೆ. ಮತ್ತೊಂದು ಕಡೆ ೧೪೦ ಶತ ಕೋಟ್ಯಾಧಿಪತಿಗಳು ನಮ್ಮ ದೇಶದಲ್ಲಿದ್ದಾರೆ. ರೈತರ ಹೋರಾಟದಿಂದ ಸ್ಪೂರ್ತಿ ಪಡೆದು ಸರ್ಕಾರದ ಕಾರ್ಪೊರೇಟ್ ಪರ ನೀತಿಗಳನ್ನು ಹಿಂಪಡೆಯುವಂತೆ ಮಾಡಬೇಕಾಗಿದೆ. ಬೆಲೆ ಏರಿಕೆಯನ್ನು ಹಿಂಪಡೆಯದೆ ಇದ್ದರೆ ಈ ಹೋರಾಟವನ್ನು ಮತ್ತ? ಬಲಗೊಳಿಸಲಾಗುವುದು ಎಂದು ಎಚ್ಚರಿಕೆಯನ್ನು ನೀಡಿದರು.

ಕಾಮ್ರೇಡ್ ಗುಂಡಮ್ಮ ಮಡಿವಾಳ ಮಾತನಾಡಿದರು. ಕಾಮ್ರೇಡ್ ರಾಜೇಂದ್ರ ಅತನೂರು ಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಿದ್ದು ಚೌಧರಿ, ತುಳಜಾರಾಮ್.ಎನ್. ಕೆ, ರಮೇಶ ದೇವಕರ್, ತಿಮ್ಮಯ್ಯ ಮಾನೆ, ನೀಲಕಂಠ. ಎಮ್. ಹುಲಿ, ಪ್ರವೀಣ, ರಘು ಪವಾರ, ಶ್ರೀನಿವಾಸ, ಆನಂದ, ಮಹಾದೇವಿ ಅತನೂರ, ರಾಧಿಕಾ, ಅಜಯ್, ಕಿರಣ, ಮಹಾದೇವ ಸ್ವಾಮಿ, ಮಲ್ಲಣ್ಣ ಗೌಡ ತೊನಸನಳ್ಳಿ, ಬಸಣ್ಣ ರೆಡ್ಡಿ ತೊನಸನಳ್ಳಿ, ಹೊನ್ನಪ್ಪ ಸೇರಿದಂತೆ ಅನೇಕರು ಇದ್ದರು.

ಇದನ್ನೂ ಓದಿ: ರೆಹಮಾನ್ ಪಟೇಲ್ ಗೆ ಹೈದ್ರಾಬಾದ್ ಆರ್ಟ್ ಸೂಸೈಟಿ ರಾಷ್ಟ್ರೀಯ ಪ್ರಶಸ್ತಿ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago