ಬಿಸಿ ಬಿಸಿ ಸುದ್ದಿ

ಡೆಂಗ್ಯೂ, ಚಿಕೂನ್ ಗುನ್ಯಾ ನಿಯಂತ್ರಣಕ್ಕೆ ಜಾಗೃತಿ ಅಗತ್ಯ: ಬಿ.ಫೌಜಿಯಾ ತರನ್ನುಮ್

ಕಲಬುರಗಿ: ಸೊಳ್ಳೆಗಳು ಕಚ್ಚುವಿಕೆಯಿಂದ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ರೋಗಗಳು ಉಂಟಾಗುತ್ತಿದ್ದು, ಇದರ ಕುರಿತು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವುದು ತುಂಬಾ ಅವಶ್ಯಕವಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತೆ ಫೌಜಿಯಾ ಬಿ. ತರನ್ನುಮ್ ಅವರು ಹೇಳಿದ್ದಾರೆ.

ಬುಧವಾರ ಮಹಾನಗರ ಪಾಲಿಕೆ ಹೊಸ ಸಭಾಂಗಣದಲ್ಲಿ ಕಲಬುರಗಿ ನಗರದಲ್ಲಿ ಡೆಂಗ್ಯೂ ನಿಯಂತ್ರಣ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಆಯೋಜಿಸದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಈಗ ಮಳೆಗಾಲವಾದ್ದರಿಂದ ಡೆಂಗ್ಯೂ ಮತ್ತು ಚಿಕೂನ್‌ಗುನ್ಯಾ ಹರಡುವ ಸಾಧ್ಯತೆ ಹೆಚ್ಚಿದ್ದು, ಮನೆ-ಮನೆಗೆ ಭೇಟಿ ನೀಡಿ ಅಲ್ಲಿನ ಸ್ಥಳ ಪರೀಶಿಲಿಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಒಂದು ವಾರಗಳ ಕಾಲ ನೀರು ಶೇಖರಣೆ ಮಾಡಿದ ಸ್ಥಳಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗಿ ಹಲವಾರು ರೋಗಗಳಿಗೆ ಕಾರಣವಾಗುತಿದೆ. ಮನೆ ಮನೆಗೆ ತೆರಳಿ ಅಲ್ಲಿರುವ ಪರಿಸ್ಥಿತಿಯನ್ನು ಅರಿತಾಗ ಮಾತ್ರ ಇಂತಹ ಮಾರಕ ರೋಗಳು ಹರಡುವಿಕೆಯನ್ನು ಕಡಿಮೆ ಮಾಡಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಡೆಂಗ್ಯೂ ಜ್ವರದ ನಿಯಂತ್ರಣದಲ್ಲಿ ಲಾರ್ವಾ ಸಮೀಕ್ಷೆ, ಫಾಗಿಂಗ್, ತ್ಯಾಜ್ಯ ವಸ್ತುಗಳ ವಿಲೇವಾರಿ ಪ್ರಮುಖ ಅಂಶವಾಗಿವೆ. ಈ ಎಲ್ಲದರ ಬಗ್ಗೆ ಮುಂಜಾಗೃತವಾಗಿ ಎಲ್ಲಾ ಅಧಿಕಾರಿಗಳು ಚಿತ್ತ ಹರಿಸಬೇಕು, ಸ್ವಚ್ಛತೆಗೆ ಕ್ರಮ ಕೈಗೊಂಡರೆ ಇಂತಹ ಮಾರಕ ಕಾಯಿಲೆಯಿಂದ ದೂರ ಉಳಿಯಬಹುದು ಎಂದರು.
ಮನೆಯ ಸುತ್ತ ಮುತ್ತ ಬಿಸಾಡಿದ ಪಿಂಗಾಣಿ ವಸ್ತುಗಳು, ಪ್ಲಾಸ್ಟಿಕ್ ಲೋಟಗಳು, ಟೈರುಗಳು, ಎಳೆನೀರಿನ ಚಿಪ್ಪು ಮುಂತಾದವುಗಳಲ್ಲಿ ನೀರಿನ ಸಂಗ್ರಹವಾಗಿ ಸೊಳ್ಳೆಗಳು ಉತ್ಪತ್ತಿಯಾಗಿ ಡೆಂಗ್ಯೂ ಮತ್ತು ಚಿಕೂಗುನ್ಯಾ ಹರಡುತ್ತವೆ ಎಂದು ಅವರು ತಿಳಿಸಿದರು.

ನಗರದಲ್ಲಿ ಇರುವ ತ್ಯಾಜ್ಯ ವಸ್ತುಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡುವುದು ತುಂಬಾ ಅವಶ್ಯಕವಾಗಿದೆ. ಇದಕ್ಕೆ ಎಲ್ಲರ ಸಹಕಾರ ಅತಿ ಅವಶ್ಯಕವಾಗಿದೆ. ಡೆಂಗ್ಯೂ ಮುಕ್ತ ಕಲಬುರಗಿ ನಗರ ಮಾಡುವ ನಿಟ್ಟಿನಲ್ಲಿ ಎಲ್ಲರೂ ಸೇರಿ ಮುಂದೆ ಹೋಗೋಣ ಎಂದು ಅವರು ಹೇಳಿದರು.

ಪ್ರೋಬೇಷನರಿ ಐ.ಎ.ಎಸ್.ಅಧಿಕಾರಿ ಡಾ.ಗೋಪಾಲಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟಂಬ ಕಲ್ಯಾಣಾಧಿಕಾರಿ ಡಾ.ಕೆ ಮಾಧವರಾವ ಪಾಟೀಲ್, ಡಾ. ಬಸವರಾಜ, ಗುಳಗಿ, ಡಾ. ಶಿವ ಶರಣಪ್ಪ, ಡಾ. ಶರಣಬಸಪ್ಪ, ಜಿಲ್ಲಾ ಸಮಾಲೋಚಕರಾದ ಕರ್ಣಿಕ ಕೋರೆ ಸೇರಿದಂತೆ ವೈದ್ಯಾಧಿಕಾರಿಗಳು ಉಪಸ್ಥಿತರಿದರು.

emedialine

View Comments

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

3 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

3 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

3 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

20 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

22 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago