ಕಲಬುರಗಿ ನಗರದ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸಲುವಂತೆ ಸ್ಲಂ ಜನಾಂದೋಲನಾ ಕರ್ನಾಟಕ ಜಿಲ್ಲಾ ಕೊಳಗೇರಿ ನಿವಾಸಿಗಳ ಒಕ್ಕೂಟ ವತಿಯಿಂದ ನಗರದಕ್ಕೆ ಆಗಮಿಸಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಚ್.ಹನುಮಂತಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.
ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸುಮಾರು ಸಾವಿರಕ್ಕೂ ಹೆಚ್ಚು ಪೌರ ಕಾರ್ಮಿಕರಿದ್ದು, ಇವರುಗಳು ಸುಮಾರು ವರ್ಷಗಳಿಂದ ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವರುಗಳು ನಗರದ ವಿವಿಧ, ಕೊಳಚೆ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ.
ಇದನ್ನೂ ಓದಿ: ಆರ್ಯ ಈಡಿಗ ಸಮಾಜದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ
ಇವರಿಗೆ ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವುದರಿಂದ ಇವರಿಗೆ ಬರುವ ಸಂಬಳವು ತೀರಾ ಕಡಿಮೆ ಮಟ್ಟದಾಗಿದ್ದು, ಆ ಸಂಬಳದಲ್ಲಿ ಇವರುಗಳ ಜೀವನ ನಡೆಸುವುದು ಕಷ್ಟಕರವಾಗಿರುತ್ತದೆ. ಜೊತೆಗೆ ಇಂದಿನ ಬೆಲೆ ಏರಿಕೆಯ ದಿನಗಳಲ್ಲಿ ಇವರಿಗೆ ಇನ್ನು ಕಷ್ಟವಾಗುತ್ತಿದ್ದು, ಇವರಿಗೆ ಕಲಬುರಗಿ ನಗರದಲ್ಲಿ ಮಹಾನಗರ ಪಾಲಿಕೆಯಿಂದ/ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಅಥವಾ ತಮ್ಮ ಅಭಿವೃದ್ಧಿ ನಿಗಮದಿಂದಾದರೂ ಇವರುಗಳಿಗೆ ವಸತಿ ನಿರ್ಮಿಸಿಕೊಡಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಗೌರವ ಅಧ್ಯಕ್ಷ ಬಾಬುರಾವ ದಂಡಿನಕರ್, ಸಂಚಾಲಕ ಅಲ್ಲಮಪ್ರಭು ನಿಂಬರ್ಗಾ, ಕಾರ್ಯದರ್ಶಿ ವಿಕಾಸ ಸವಾರಿಕರ್, ಕವಿತಾ ಇನಾಂದಾರ, ಅನಿಲ ಚಕ್ರ, ಗಣೇಶ ಕಾಂಬಳೆ, ಭಾಗಮ್ಮ ಬನಸೋಡೆ, ಬ್ರಹ್ಮಾನಂದ ಮಿಂಚಾ ಇದ್ದರು.
ಇದನ್ನೂ ಓದಿ: ಗುತ್ತಿಗೆ ಪದ್ಧತಿ ಕೈಬಿಟ್ಟು, ಪೌರ ಕಾರ್ಮಿಕರ ಖಾಯಂ ನೇಮಕಾತಿ ಮಾಡಬೇಕು:ಹೆಚ್.ಹನುಮಂತಪ್ಪ
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…