ಶಹಾಬಾದ: ಕಲಬುರಗಿ ಗ್ರಾಮೀಣ ಕ್ಷೇತ್ರದ ವ್ಯಾಪ್ತಿಯ ಸಣ್ಣೂರ ಗ್ರಾಮದಲ್ಲಿ ಉದ್ಯೋಗ ಖಾತ್ರಿ ಯೋಜನೆ ಅಡಿ ನಡೆಯುತ್ತಿರುವ ಕಾಮಗಾರಿ ಸ್ಥಳಕ್ಕೆ ಬುಧವಾರ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಭೇಟಿ ನೀಡಿ ಪರಿಶೀಲಿಸಿದರು.
ಸರಿಯಾದ ಸಮಯಕ್ಕೆ ವೇತನ, ಖಾತೆಗೆ ಹಣ ಜಮಾ ಆಗುತ್ತದೆಯೇ ಎಂದು ಕೇಳಿದರಲ್ಲದೇ, ಕೆಲಸ ಮಾಡುವ ಸಮಯದಲ್ಲಿ ನೀರಿನ ವ್ಯವಸ್ಥೆ ಮಾಡಲಾಗುತ್ತದೆ ಇಲ್ಲವೂ ಎಂದು ವಿಚಾರಿಸಿದರು.ನಿಮ್ಮ ಏನೆ ಸಮಸ್ಯೆಗಳಿದ್ದರೂ ನನ್ನ ಗಮನಕ್ಕೆ ತರಬೇಕು.ಅದನ್ನು ಬಗೆಹರಿಸುವಲ್ಲಿ ಪ್ರಾಮಾಣಿಕವಾಗಿ ಮಾಡುತ್ತೆನೆ.ಅಲ್ಲದೇ ತಾವುಗಳು ತಾವು ಮಾಡುವ ಕೆಲಸವನ್ನು ಪ್ರಾಮಾಣಿಕವಾಗಿ ಹಾಗೂ ದೇವರ ಪೂಜೆಯೆಂದು ತಿಳಿದು ಮಾಡಬೇಕು ಎಂದರು. ಕಾರ್ಮಿಕರು ಸಮಯಕ್ಕೆ ಸರಿಯಾಗಿ ವೇತನವಾಗುತ್ತಿದೆ.ಅಲ್ಲದೇ ಹಣ ಖಾತೆಗೆ ಜಮಾ ಆಗುತ್ತಿದೆ ಎಂದು ಹ?ದಿಂದ ನುಡಿದರು.
ಇದನ್ನೂ ಓದಿ:ಇ-ಸ್ಟಾಂಪಿಂಗ್ ಸೌಲಭ್ಯ ಯಶಸ್ವಿಯಾಗಲಿ- ರವೀಂದ್ರ
ಕಾರ್ಮಿಕರ ವೇತನ ಯಾವುದೇ ಕಾರಣಕ್ಕೂ ವಿಳಂಬ ಮಾಡದೆ, ಅವರಿಗೆ ಎಲ್ಲ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಂತರ ಕಾರ್ಮಿಕರಿಗೆ ತಮ್ಮ ಕೈಯ್ಯಾರೆ ಉಪಹಾರ ವಿತರಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಮಿಕರು, ಅಧಿಕಾರಿಗಳು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…