ಬಿಸಿ ಬಿಸಿ ಸುದ್ದಿ

ಸಿಐಡಿ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಸಬೇಕು: ಶಾಸಕ ಪ್ರಿಯಾಂಕ್ ಖರ್ಗೆ

ಕಲಬುರಗಿ: ಅಕ್ರಮ ಪಿಎಸ್ ಐ ನೇಮಕಾತಿ ಹಗರಣ ತನಿಖೆ ಸರಿಯಾದ ದಿಕ್ಕಿನಲ್ಲಿ ನಡೆಸಬೇಕು, ಕೇವಲ ಕಲಬುರಗಿಗೆ ಮಾತ್ರ ಸೀಮಿತಗೊಳಿಸಿ ಮುಚ್ಚಿಹಾಕಬಾರದು ಎಂದು ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕಲಬುರಗಿ ಹೊರತುಪಡಿಸಿಯೂ ರಾಜ್ಯದ ಬಹುತೇಕ ಕಡೆ ಹಗರಣ ನಡೆದಿದೆ ಬೇರೆ ಕಡೆ ಹಗರಣಗಳ ಕುರಿತು ತನಿಖೆ ನಡೆಸೋದು ಯಾವಾಗ? ತನಿಖೆ ನಡೆದು ಅಕ್ರಮದಲ್ಲಿ ಭಾಗಿಯಾದವರು ಹೆಸರು ಬಹಿರಂಗಗೊಂಡರೆ ಸರ್ಕಾರ ಬಿದ್ದುಹೋಗುತ್ತಿದೆಯಾ ಎನ್ನುವುದನ್ನು ಅವರೇ ಸ್ಪಷ್ಟಪಡಿಸಬೇಕು ಎಂದರು.

ಇದನ್ನೂ ಓದಿ: ಎಸ್ಸಿ-ಎಸ್ಟಿ ಮೀಸಲು: ಹೋರಾಟಕ್ಕೆ ವೇದಿಕೆ ಸಿದ್ಧ – ಭೀಮರಾವ ದೊರೆ

ಸಿಐಡಿ ನೋಟಿಸು ನೀಡಿರುವುದನ್ನ ಪ್ರಸ್ತಾಪಿಸಿದಾಗ ಉತ್ತರಿಸಿದ ಶಾಸಕರು ನೋಟಿಸಿಗೆ ಈಗಾಗಲೇ ಉತ್ತರ ನೀಡಿದ್ದೇನೆ. ನಾನು ಹಿಟ್ ಅಂಡ್ ರನ್ ಮಾಡುತ್ತಿಲ್ಲ. ನನಗೆ ಮೂರು ನೋಟಿಸು ನೀಡುವ ಸಿಐಡಿ, ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಯಾಕೆ ನೋಟಿಸು ನೀಡುತ್ತಿಲ್ಲ ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರ ತರಾತುರಿಯಲ್ಲಿ ಮತಾಂತರ ಕಾಯ್ದೆ ಜಾರಿಗೆ ತರಲು ಪ್ರಯತ್ನಿಸುತ್ತಿದೆ. ಆರ್ ಎಸ್ ಎಸ್ ಬೇಡಿಕೆಗಳನ್ನು ಜಾರಿಗೆ ತರುವುದೇ ಸರ್ಕಾರದ ಉದ್ದೇಶವಾಗಿದೆ ಎಂದು ಇದರಿಂದ ತಿಳಿಯುತ್ತದೆ. ಜ್ವಲಂತ ಸಮಸ್ಯೆಗಳನ್ನು ಬಗೆಹರಿಸಲು ವಿಫಲವಾಗಿರುವ ಸರ್ಕಾರ ಇಂತಹ ವಿಚಾರಗಳನ್ನು ಹರಿಬಿಡುತ್ತದೆ. ಹಜಾನ್ ವಿಚಾರದಲ್ಲಿ ಸುಪ್ರಿಂ ಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿದೆ. ಕೋರ್ಟ್ ಆದೇಶ ಮಸೀದಿ, ಮಂದಿರ ಹಾಗೂ ಚರ್ಚುಗಳಿಗೆ ಅನ್ವಯವಾಗುತ್ತದೆ.ಆದರೆ ಸರ್ಕಾರ ಕೋರ್ಟ್ ಆದೇಶವನ್ನು ಪಾಲನೆ ಮಾಡಲು ಯಾಕೆ ಕಷ್ಟಪಡುತ್ತಿದೆ ? ಎಂದು ಪ್ರಶ್ನಿಸಿದರು.

ಸಚಿವ ಅಶ್ವಥ್ ನಾರಾಯಣ ಹಾಗೂ ಎಂ.ಬಿ.ಪಾಟೀಲ್ ಭೇಟಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಖರ್ಗೆ, ಆ ಕುರಿತು ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಈ‌ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ ಎಂದರು.

ಇದನ್ನೂ ಓದಿ: ಜಿಮ್ಸ್ ನಲ್ಲಿ ರೋಗಿಗಳಿಗೆ ಭೇಟಿ ಮಾಡಿದ ಸಂಸದ ಡಾ.ಉಮೇಶ ಜಾಧವ

ನಟಿ ಹಾಗೂ ಮಾಜಿ ಸಂಸದೆ ಟ್ವಿಟ್ ಮಾಡಿದ್ದಕ್ಕೆ ಬಿಜೆಪಿ ಟಾಂಗ್ ನೀಡಿದ ಕುರಿತು ಪ್ರಶ್ನಿಸಿದಾಗ, ನಮ್ಮ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ ಅವರವರ ಅಭಿಪ್ರಾಯ ಹೇಳುತ್ತಾರೆ. ಯಾವುದೇ ರಾಜಕೀಯ ಪಕ್ಷದಲ್ಲಿ ಸಣ್ಣಪುಟ್ಟ ವಿಚಾರಗಳು ಬಂದು ಹೋಗುತ್ತವೆ. ಬಿಜೆಪಿಯವರು ಮೊದಲು ತಮ್ಮ ತಟ್ಟೆಯಲ್ಲಿ ಬಿದ್ದಿರುವ ಹೆಗ್ಗಣವನ್ನು ತೆಗೆಯಲಿ ಎಂದು ಆಮೇಲೆ ನಮ್ಮ ಪಕ್ಷದ ಬಗ್ಗೆ ಮಾತನಾಡಲಿ. ಸಿಎಂ ಆಗಬೇಕಾದರೆ ರೂ 2500 ಕೋಟಿ ಕೊಡಿ ಎಂದು ಅವರಿಗೆ ಯಾರೋ ಹೇಳಿದ್ದನ್ನ ಬಹಿರಂಗಪಡಿಸಿದ್ದಾರೆ ಅವರ ಮೇಲೆ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ ಕಟೀಲ್ ಯಾವ ಕ್ರಮ ಕೈಗೊಂಡಿದ್ದಾರೆ ?ಎಂದು ಪ್ರಶ್ನಿಸಿದರು.

ಬಿಜೆಪಿ ಸರ್ಕಾರದಲ್ಲಿ ಮಂತ್ರಿಯಾಗಬೇಕಾದರೆ ಸಿಡಿ ತಯಾರಿಸಬೇಕು ಎಂದು ಬಿಜೆಪಿಯವರೇ ಹೇಳುತ್ತಿದ್ದಾರೆ. ಮಂತ್ರಿಮಂಡಲ ವಿಸ್ತರಣೆಯ ಈ ಸಂದರ್ಭದಲ್ಲಿ ಯಾರ ಸಿಡಿ ಹೊರಗೆ ಬರಲಿದೆ ಎನ್ನುವುದು ತಮಗೆ ತಿಳಿದಿಲ್ಲ ಎಂದರು.

ಇದನ್ನೂ ಓದಿ: ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳಕ್ಕೆ ಶಾಸಕ ಬಸವರಾಜ ಮತ್ತಿಮಡು ಭೇಟಿ

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago