ಕಲಬುರಗಿ: ಶಿಕ್ಷಣ ಹೆಸರಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪಾಲಕರಿಂದ ಡೊನೇಶನ್ ಮೂಲಕ ಅಕ್ರಮವಾಗಿ ಹಣವನ್ನು ಪಡೆಯುತ್ತಿದ್ದಾರೆ.ಕೂಡಲೇ ಸರಕಾರ ಇದನ್ನು ತಡೆಗಟ್ಟಬೇಕು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಒತ್ತಾಯಿಸಿದ್ದಾರೆ.
ಬಹುತೇಕ ಖಾಸಗಿ ಶಿಕ್ಷಣ ಸಂಸ್ಥೆಗಳು ರಾಜಾರೋಷವಾಗಿ ಡೊನೇಶನ್ ಕೇಳುತ್ತಾರೆ.ಬಡ ಪಾಲಕರು ಹಣ ನೀಡಲು ಸಾಧ್ಯವಿಲ್ಲ.ಮಧ್ಮಮ ಕುಟುಂಬದವರಿಗೂ ಇದು ಹೊರೆಯಾಗುತ್ತಿದೆ.ಸರಕಾರಿ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುತ್ತಿಲ್ಲ.ಖಾಸಗಿ ಶಾಲಾ ಕಾಲೇಜುಗಳಲ್ಲಿ ಡೊನೇಷನ್ ಹಾವಳಿ ಇದೆ.ಹೀಗಾಗಿ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.
ಎಲ್ಲರಿಗೂ ಉಚಿತ ಶಿಕ್ಷಣ ನೀಡುವ ಹೊಣೆ ಸರ್ಕಾರದ್ದು.ಆದರೆ ಸರ್ಕಾರದಲ್ಲಿರುವ ಸಚವರ,ಶಾಸಕರುಗಳ ಒಡೆತನಕ್ಕೆ ಸೇರಿದ ಖಾಸಗಿ ಶಿಕ್ಷಣ ಸಂಸ್ಥೆಗಳು ಇವೆ.ಆದ್ದರಿಂದ ಖಾಸಗಿ ಶಾಲಾ ಕಾಲೇಜುಗಳಲ್ಲಿ ನಡೆಯುತ್ತಿರುವ ಡೊನೇಶನ್ ತಡೆಯಲು ಸರ್ಕಾರಕ್ಕೆ ಧೈರ್ಯವಿಲ್ಲ.ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರು ಯಾರು ಎಂಬಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಇನ್ನು ಎಲ್ ಕೆ ಜಿ ,ಯುಕೆಜಿ ಮಕ್ಕಳನ್ನು ಶಾಲೆಗೆ ಪ್ರವೇಶ ಪಡೆಯಲು ಲಕ್ಷ ರೂಪಾಯಿ ಡೊನೇಶನ್ ಕೊಡಬೇಕು.ಶಾಲೆಯ ಶುಲ್ಕ ಬೆರೆ.ಪಾಲಕರನ್ನು ಹಗಲು ದರೋಡೆ ಮಾಡುತ್ತಿರುವ ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ನೇರವಾಗಿ ಭ್ರಷ್ಟಾಚಾರಕ್ಕಿಳಿದಿವೆ.ಇದಷ್ಟೇ ಅಲ್ಲದೆ ಇತ್ತೀಚೆಗೆ ರಾಜ್ಯದಲ್ಲಿ ಸುದ್ದಿ ಮಾಡಿದ ಸರಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಶಿಕ್ಷಣ ಸಂಸ್ಥೆಗಳು ಅಕ್ರಮವಾಗಿ ವಿದ್ಯಾರ್ಥಿಗಳಿಂದ ಹಣ ವಸೂಲಿ ಮಾಡಿದ್ದು ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ.ಇಂಥ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪರೀಕ್ಷೆ ಕೇಂದ್ರಕ್ಕೆ ಅನುಮತಿ ನೀಡಿದ್ದು ಸರ್ಕಾರದ ಮೇಲೆ ಅನುಮಾನ ಬರುವಂತೆ ಮಾಡಿದೆ.
ಕೂಡಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇನ್ನು ಮುಂದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರ ಕೊಡದೆ ಸರಕಾರಿ ಶಾಲಾ-ಕಾಲೇಜುಗಳಲ್ಲಿ ನೇಮಕಾತಿ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಬೇಕು.ಡೊನೇಶನ್ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳ ಮಾನ್ಯತೆ ಹಾಗೂ ಪರವಾನಗಿ ರದ್ದು ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.