ಬಿಸಿ ಬಿಸಿ ಸುದ್ದಿ

ಮನ ನದಿ ದಾಟಲು ಪ್ರಯತ್ನಿಸಿದ ಕಡಕೋಳ ಮಡಿವಾಳಪ್ಪ

ಕಲಬುರಗಿ: ಪಂಪ ಬನವಾಸಿ ದೇಶವನ್ನು ನೆನಪಿಸುವಂತೆ ಕಡಕೋಳ ನೆನಪಿಸುವ ಮಡಿವಾಳಪ್ಪ ಕೂಡ ನಮಗೆ ಅಷ್ಟೇ ಮುಖ್ಯವಾಗುತ್ತಾರೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ. ಬಸವರಾಜ ಕೋಡಗುಂಟಿ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಶನಿವಾರ ಆಯೋಜಿಸಿದ್ದ ಲೇಖಕ ಕಡಕೋಳ ಮಲ್ಲಿಕಾರ್ಜುನ ಅವರ ‘ಕಡಕೋಳ ನೆಲದ ನೆನಪುಗಳು’ ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಮಡಿವಾಳಪ್ಪ ಕೇವಲ ಕಡಕೋಳದ ಪ್ರತಿನಿಧಿಯಾಗಿ ಕಾಣಿಸದೆ ಒಂದು ನೆಲದ, ಸಮಸ್ತ ಸಮುದಾಯದ ಪ್ರತಿನಿಧಿಯಾಗಿ ಕಾಣುತ್ತಾನೆ ಎಂದು ತಿಳಿಸಿದರು.

ಪುಸ್ತಕ ಪರಿಚಯಿಸಿದ ಮಹಾಂತೇಶ ನವಲಕಲ್, ಸಮಾಜದ ಎಲ್ಲ ಬಗೆಯ ಅಪಸವ್ಯಗಳಿಗೆ ಬಹಳ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಮಡಿವಾಳಪ್ಪನವರು ನಾಥ, ಆರೂಢ, ಸೂಫಿ, ಸಂತ ಪರಂಪರೆಯನ್ನು ಮುಂದುವರಿಸಿದ ನೇರ ನಿಷ್ಠುರ ತತ್ವಪದಕಾರ ಎಂದು ಬಣ್ಣಿಸಿದರು.

ಲೇಖಕ ಮಲ್ಲಿಕಾರ್ಜುನ ಕಡಕೋಳ ಕೂಡ ತಮ್ಮದೇ ನೆಲದ ಭಾಷೆಯನ್ನು ಬಳಸುವ ಮೂಲಕ ಮಡಿವಾಳಪ್ಪನವರ ಅಸಲಿ ವ್ಯಕ್ತಿತ್ವವನ್ನು ಈ ಕೃತಿಯಲ್ಲಿ ಕಟ್ಟಿಕೊಟ್ಟಿದ್ದಾರೆ.‌ ದೇಶಿ ಪದಗಳನ್ನು ಮಾರ್ಗಕ್ಕೆ ತಂದು ಮುಟ್ಟಿಸುವ ಸಾರ್ಥಕ ಮತ್ತು ಬರವಣಿಗೆ ಈ ಕೃತಿಯಲ್ಲಿದೆ ಎಂದು ವಿವರಿಸಿದರು.

ಕಡಕೋಳ ಮಠದ ರುದ್ರಮುನಿ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು. ಮಕ್ಕಳ ಸಾಹಿತಿ ಎ.ಕೆ. ರಾಮೇಶ್ವರ ಅಧ್ಯಕ್ಷತೆ ವಹಿಸಿದ್ದರು. ಲೇಖಕ ಮಲ್ಲಿಕಾರ್ಜುನ ಕಡಕೋಳ ಉಪಸ್ಥಿತರಿದ್ದರು.

ಶರಣರಾಜ ಛಪ್ಪರಬಂದಿ ನಿರೂಪಿಸಿದರು. ಡಾ. ಗಿರಿಮಲ್ಲ ಕೊಂಬಿನ್ ಸ್ವಾಗತಿಸಿದರು. ಯಶವಂತ ಅಷ್ಟಗಿ ಪ್ರಾಸ್ತಾವಿಕ ಮಾತನಾಡಿದರು. ಪ್ರಕಾಶ ದೊರೆ, ಪ್ರೊ. ಕಲ್ಯಾಣರಾವ ಪಾಟೀಲ, ಡಾ. ಸೂರ್ಯಕಾಂತ ಪಾಟೀಲ, ಡಾ. ಮೀನಾಕ್ಷಿ ಬಾಳಿ ಇತರರಿದ್ದರು.

ಕಾರ್ಯಕ್ರಮದ ಮಧ್ಯೆ ಎದೆ ತುಂಬಿ ಹಾಡುವೆನು ಖ್ಯಾತಿಯ ಗಜಲ್ ಗಾಯಕ ಸೂರ್ಯಕಾಂತ ಗಡಿ ಲಿಂಗದಳ್ಳಿ ಅವರು ಹಾಡಿದ ಕಡಕೋಳ ಮಡಿವಾಳಪ್ಪನವರ ತತ್ವಪದಗಳು ಜನಮನಸೂರೆಗೊಂಡವು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

36 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

11 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

11 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago