ಕಲಬುರಗಿ ; ರೌಡಿಶೀಟರ್‌ಗಳು ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಕಂಡು ಬಂದಲ್ಲಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಿ ಗಡಿಪಾರು ಆದೇಶಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ರಾಘವೇಂದ್ರ ನಗರ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ( ಪಿ.ಐ ) ಶಿವಾನಂದ ಎ.ಗಾಣಿಗೇರ ಎಚ್ಚರಿಕೆ ನೀಡಿದರು .
ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಇಂದು ನಡೆದ ರೌಡಿ ಪರೇಡ್‌ನಲ್ಲಿ ಅವರು ರೌಡಿಶೀಟರ್‌ಗಳಿಗೆ ಈ ಖಡಕ್ಕಾದ ಎಚ್ಚರಿಕೆಯನ್ನು ನೀಡಿದರು . ಠಾಣಾ ವ್ಯಾಪ್ತಿಯಲ್ಲಿ ಯಾವುದೇ ಅಪರಾಧ ಚಟುವಟಿಕೆಯಲ್ಲಿ ತೊಡಗದಂತೆ ಮತ್ತು ಬಡ್ಡಿ ವ್ಯವಹಾರ , ಲ್ಯಾಂಡ್ ಮಾಫಿಯಾ , ಹಪ್ತಾ ವಸೂಲಿ ಮಾಡದಂತೆ ರೌಡಿಗಳಿಗೆ ಎಚ್ಚರಿಕೆ ನೀಡಿದರು . ಒಂದು ವೇಳೆ ಇಂತಹ ಯಾವುದೇ ಅಪರಾಧ ಚಟುವಟಿಕೆಯಲ್ಲಿ ಭಾಗಿಯಾಗಿದ್ದು ಕಂಡು ಬಂದಲ್ಲಿ ಸೂಕ್ತ ಕಾನುನು ಕ್ರಮ ಜರುಗಿಸಿ ಗಡಿಪಾರು ಆದೇಶಕ್ಕೆ ಶಿಫಾರಸ್ಸು ಮಾಡುವುದಾಗಿ ಎಚ್ಚರಿಸಿದರು .
ಪರೇಡ್‌ನಲ್ಲಿ ಠಾಣಾ ವ್ಯಾಪ್ತಿಯ 98 ಜನ ರೌಡಿಶೀಟರ್‌ಗಳ ಪೈಕಿ 45 ಜನ ರೌಡಿಶೀಟರ್‌ಗಳು ಭಾಗವಹಿಸಿದ್ದರು . ಪರೇಡ್‌ಗೆ ಗೈರು ಹಾಜರಾದ ರೌಡಿಶೀಟರ್‌ಗಳ ಮೇಲೆ ನಿಗಾ ಇರಿಸಲಾಗಿದ್ದು , ಅವರು ಪ್ರತಿ ತಿಂಗಳು ರೌಡಿ ಪರೇಡ್‌ಗೆ ಹಾಜರಾಗಬೇಕು ಎಂದು ಸೂಚಿಸಿದರು .
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…