ಬಿಸಿ ಬಿಸಿ ಸುದ್ದಿ

ಅಂಬೇಡ್ಕರ್ ಜಯಂತ್ಯುತ್ಸವ | ಚಿಂತನೆಗೆ ವೇದಿಕೆಯಾಗಲಿ: ವಿಶಾಲ ಮಹಾದೇವ ತರನಳ್ಳಿ

ಶಹಾಬಾದ : ಎಲ್ಲ ಧರ್ಮ, ಜಾತಿಗಳಿಗೆ ಸಮಾನತೆ, ಸಮಾನ ಅವಕಾಶ ನೀಡಿದ ಸಂವಿಧಾನ ಕರ್ತೃ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತೋತ್ಸವಗಳು ಕಾಟಾಚಾರಕ್ಕೆ ನಡೆಯದೆ ಅವರ ಬದುಕು, ಆದರ್ಶ, ತತ್ವಗಳ ಗಂಭೀರ ಚಿಂತನೆಗಳ ಚರ್ಚೆಗೆ ವೇದಿಕೆಯಾಗಬೇಕು ಎಂದು ಸಂಯೋಜಕ ವಿಶಾಲ ಮಹಾದೇವ ತರನಳ್ಳಿ ಹೇಳಿದರು.

ಅವರು ತಾಲೂಕಿನ ತರನಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ದಸಂಸ ತರನಳ್ಳಿ ಗ್ರಾಮ ಘಟಕದ ವತಿಯಿಂದ ಆಯೋಜಿಸಲಾದ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ೧೩೧ನೇ ಜಯಂತೋತ್ಸವದ ನಿಮಿತ್ತ ಆಯೋಜಿಸಲಾದ ಸಂವಿಧಾನ ರಕ್ಷಣೆಗಾಗಿ ಹಾಗೂ ಪ್ರಬುದ್ಧ ಭಾರತ ನಿರ್ಮಾಣಕ್ಕಾಗಿ ಬಹಿರಂಗ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು.

ಇದನ್ನೂ ಓದಿ: ‘ಬುದ್ಧ ಪೂರ್ಣಿಮಾ’ದ ಇತಿಹಾಸ, ಮಹತ್ವ ಮತ್ತು ಉಲ್ಲೇಖಗಳೂ

ಬಡತನದಲ್ಲಿ ಜನಿಸಿ ಹಲವು ನೋವುಗಳ ಮಧ್ಯೆ ತಮ್ಮ ವಿದ್ಯಾಬ್ಯಾಸವನ್ನು ಪಡೆದ ಅಂಬೇಡ್ಕರ್ ಅವರು ಜಗತ್ತಿನ ಹಲವು ದೇಶಗಳ ಸಂವಿಧಾನ ಅಧ್ಯಯನ ಮಾಡಿ ಅಮೇರಿಕಾ, ಇಂಗ್ಯೆಂಡ್, ಐರ್ಲೆಂಡ್ ದೇಶದ ಪ್ರಮುಖ ಅಂಶ ತೆಗೆದುಕೊಂಡು ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಂತ ಸಂವಿಧಾನ ನಮ್ಮ ದೇಶಕ್ಕೆ ಸಮರ್ಪಣೆ ಮಾಡಿದ ಕೀರ್ತಿ ಇದೆ ಎಂದರು.

ಕರ್ನಾಟಕ ರಾಜ್ಯ ದಸಂಸ ಸಂಘಟನಾ ಸಂಚಾಲಕ ಕೃಷ್ಣಪ್ಪ ಕರಣಿಕ್ ಮಾತನಾಡಿ, ವ್ಯವಸ್ಥಿತ ಸಂವಿಧಾನವನ್ನು ದೇಶಕ್ಕೆ ನೀಡಿದ ಮಹಾನ್ ನಾಯಕ ಅಂಬೇಡ್ಕರ್. ಇಂದು ಸಮಾಜದಲ್ಲಿ ಅಂಬೇಡ್ಕರ್ ವೇಷಧಾರಿಗಳು ಕಾಣಸಿಗುತ್ತಾರೆಯೇ ಹೊರತು, ಅವರಂತೆ ನಡೆದುಕೊಳ್ಳುವವರು ಕಡಿಮೆ. ದೇಶ, ಸಮಾಜ ಮತ್ತು ತನ್ನವರಿಗಾಗಿ ಬಾಬಾಸಾಹೇಬರು ಬಾಳಿದಂತೆ ಬಾಳು ನಡೆಸಬಾಕಾದವರು ಬೇಕಾಗಿದೆ. ಕೇವಲ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಹಾಗೂ ಪೂಜೆ ಮಾಡುವುದಕ್ಕಿಂತಲೂ ಅವರ ಚರಿತ್ರೆಯನ್ನು ಅರಿತು ನಡೆಯಬೇಕಾಗಿದೆ.ಅವರು ಹಾಕಿಕೊಟ್ಟ ಮಾರ್ಗದಲ್ಲಿ ಎಲ್ಲ ವರ್ಗದ ಜನ, ವಿಶೇಷವಾಗಿ ದಲಿತರು ಸಾಗಬೇಕಿದೆ ಎಂದರು.

ಇದನ್ನೂ ಓದಿ: ಕಲಬುರಗಿ: ರಾಘವೇಂದ್ರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪರೇಡ್‌

ಕಾಂಗ್ರೆಸ್ ಮುಖಂಡರಾದ ಅಜಿತ್‌ಕುಮಾರ ಪಾಟೀಲ, ರವಿ ಚವ್ಹಾಣ, ಬಿಜೆಪಿ ಮುಖಂಡ ಬಸವರಾಜ ಮದ್ರಿಕಿ, ದಸಂಸ ತಾಲೂಕಾ ಸಂಚಾಲಕ ಮಹಾದೇವ ತರನಳ್ಳಿ, ತಾಲೂಕಾ ಸಂಘಟನಾ ಸಂಚಾಲಕ ತಿಪ್ಪಣ್ಣ ಧನ್ನೇಕರ್,ಭೀಮ ಆರ್ಮಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ ಹುಗ್ಗಿ, ಮಾಜಿ ಗ್ರಾಪಂ ಸದಸ್ಯರಾದ ವೀರಯ್ಯಸ್ವಾಮಿ ಟೆಂಗಳಿ, ಬಸವರಾಜ ಖಣದಾಳ, ಹಣಮಂತ ಕೊಂಡಯ್ಯ, ಅವಿನಾಶ ಕೊಂಡಯ್ಯ, ಶರಣು ಧನ್ನೇಕರ್ ಸೇರಿದಂತೆ ಅನೇಕರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

4 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

14 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

14 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

14 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago