ಜೇವರ್ಗಿ: ತಾಲ್ಲೂಕಿನ ಜೈನಾಪುರ ಗ್ರಾಮದಲ್ಲಿ ಸಾಲ ಭಾದೆಗೆ ರೈತ ವಿಷ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ ಜಿಲ್ಲೆಯಲ್ಲಿ ಸಂಭವಿಸಿದೆ.
ಈರಣ್ಣ, ಬಡಿಗೆರ (55) ಆತ್ಮಹತ್ಯೆಗೆ ಶರಣಾದ ರೈತ. ಜೈನಾಪುರ ಗ್ರಾಮದ ನಿವಾಸಿಯಾಗಿದ ಈರಣ್ಣ, ಆಂದೋಲ ಗ್ರಾಮದ ಕೆಜಿಬಿ ಬ್ಯಾಂಕ್ ನಲ್ಲಿ ಸಾಲ ಮಾಡಿದ್ದ ಎನ್ನಲಾಗಿದ್ದು, ಮಳೆ, ಬೆಳೆ ಇಲ್ಲದ ಕಾರಣ ನಿನ್ನೆ ವಿಷ ಸೇವಿಸಿದ್ದು, ಜೇವರ್ಗಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನಪ್ಪಿದ್ದಾನೆಂದು ತಿಳಿದುಬಂದಿದೆ.
ಈ ಕುರಿತು ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.