ಬಿಸಿ ಬಿಸಿ ಸುದ್ದಿ

ಭುಗಿಲೇಳಲಿದೆ ಎಸ್‌ಟಿ ಮೀಸಲು ಹೋರಾಟ | ಮೇ.೨೦ ರಂದು ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ: ತಿಪ್ಪೇಸ್ವಾಮಿ

ವಾಡಿ: ಜನಸಂಖ್ಯೆ ಆಧಾರದಡಿ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಲು ಹೋರಾಟ ಆರಂಭಗೊಂಡಿದೆ. ಸರ್ಕಾರ ಇದನ್ನು ಲಘುವಾಗಿ ಪರಿಗಣಿಸಿದರೆ ರಾಜ್ಯದಾಧ್ಯಂತ ಚಳುವಳಿ ಭುಗಿಲೇಳಲಿದೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಹೇಳಿದರು.

ಮಂಗಳವಾರ ಚಿತ್ತಾಪುರ ತಾಲೂಕಿನ ಚಾಮನೂರ ಗ್ರಾಮಕ್ಕೆ ಭೇಟಿ ನೀಡುವ ಮೂಲಕ ಮಹರ್ಷಿ ವಾಲ್ಮೀಕಿ ಸಮುದಾಯದ ಜನರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಪರಿಶಿಷ್ಟ ಜಾತಿಯವರಿಗೆ ಶೇ.೧೫ ರಿಂದ ಶೇ.೧೭ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.೩ ರಿಂದ ಶೇ.೭.೫ ರಷ್ಟು ಮೀಸಲಾತಿ ಪ್ರಮಾಣ ಹೆಚ್ಚಿಸಬೇಕು ಎಂಬುದು ಸಮುದಾಯದ ಬೇಡಿಕೆಯಾಗಿದ್ದು, ಇದೇ ಕಾರಣಕ್ಕೆ ಮಹರ್ಷಿ ವಾಲ್ಮೀಕಿ ಗುರು ಪೀಠದ ಪೂಜ್ಯ ಶ್ರೀಪ್ರಸನ್ನಾನಂದ ಸ್ವಾಮೀಜಿ ಅವರು ಕಳೆದ ಮೂರು ತಿಂಗಳಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದಾರೆ. ಶ್ರೀಗಳ ಧರಣಿಯನ್ನು ಹಗುರವಾಗಿ ಪರಿಗಣಿಸುವ ಮೂಲಕ ರಾಜ್ಯ ಬಿಜೆಪಿ ಸರ್ಕಾರ ಬೇಡ ಜನಾಂಗವನ್ನು ನಿರ್ಲಕ್ಷ್ಯದಿಂದ ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕಲಬುರಗಿ ಪೇಟೆ ಧಾರಣೆ

ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸಲು ಪ್ರಾಣ ಕೊಡಲು ಸಿದ್ಧರಾಗಿಯೇ ಹೋರಾಟಕ್ಕೆ ಕರೆ ನೀಡಿದ್ದೇವೆ. ಯಾವೂದೇ ಕಾರಣಕ್ಕೂ ಹೋರಾಟ ಕೈಬಿಡುವುದಿಲ್ಲ. ಗುರುಗಳ ಆದೇಶದಂತೆ ಶಾಂತಿ ಸಹನೆಯಿಂದ ಶುರುವಾಗಿರುವ ಹೋರಾಟವು ಹಂತ ಹಂತವಾಗಿ ತನ್ನ ಸ್ವರೂಪ ಬದಲಿಸಲಿದೆ. ಮೇ.೨೦ ರಂದು ರಾಜ್ಯದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಜನರು ಸಾಂಕೇತಿಕವಾಗಿ ಸಂಘಟಿತ ಹೋರಾಟ ನಡೆಸಲಿದ್ದಾರೆ. ನಂತರ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುವುದು. ಅಂತಿಮಪವಾಗಿ ಬೆಂಗಳೂರು ಚಲೋ ರ‍್ಯಾಲಿ ಮೂಲಕ ರಾಜ್ಯದ ಲಕ್ಷಾಂತರ ಜನರು ವಿಧಾನಸೌಧ ಮುತ್ತಿಗೆ ಹಾಕಿ ಪ್ರತಿಭಟಿಸುವ ಮೂಲಕ ಸರ್ಕಾರವನ್ನು ಎಚ್ಚರಿಸಲಿದ್ದಾರೆ. ಬೇಡಿಕೆ ಈಡೇರಿಸುವುದಾಗಿ ಭರವಸೆ ಕೊಟ್ಟು ಮಾತುತಪ್ಪಿರುವ ಸಿಎಂ ಬೊಮ್ಮಾಯಿ ಅವರಿಗೆ ಸಮುದಾಯದ ಜನರು ಸೂಕ್ತ ಉತ್ತರ ಕೊಡಲಿದ್ದಾರೆ ಎಂದರು.

ಮಹರ್ಷಿ ವಾಲ್ಮೀಕಿ ಸಮಾಜದ ತಾಲೂಕು ಅಧ್ಯಕ್ಷ ಭೀಮರಾವ ದೊರೆ ಮಾತನಾಡಿ, ಪಪಂ ಮೀಸಲಾತಿ ಪ್ರಮಾಣ ಹೆಚ್ಚಳದಿಂದ ಉದ್ಯೋಗ ಅವಕಾಶಗಳು ಸೇರಿದಂತೆ ಶೈಕ್ಷಣಿಕ ಮತ್ತು ಸಾಮಾಜಿಕವಾಗಿ ಪ್ರಗತಿ ಕಾಣಲು ಸಾಧ್ಯವಾಗುತ್ತದೆ. ಸಮಾಜದ ಸ್ವಾಮೀಜಿಯವರ ಆಶಯದಂತೆ ಬೇಡ ಸಮುದಾಯದ ಪ್ರತಿಯೊಬ್ಬರೂ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಇದನ್ನೂ ಓದಿ: ಬಿಜೆಪಿಯೇ ಭ್ರಷ್ಟಾಚಾರ- ಹಗರಣಗಳ ಗಂಗೋತ್ರಿ: ಡಾ. ಅಜಯ್ ಸಿಂಗ್ ತಿರುಗೇಟು

ಪರಿಶಿಷ್ಟ ಪಂಗಡಗಳ ನೌಕರರ ಸಂಘದ ಕಾರ್ಯದರ್ಶಿ ಪ್ರಭು ಮದಕರಿ, ವಾಲ್ಮೀಕಿ ಸಮಾಜದ ತಾಲೂಕು ಗೌರವಾಧ್ಯಕ್ಷ ಮಲ್ಲಿಕಾರ್ಜುನ ಮಾಲಗತ್ತಿ, ಉಪಾಧ್ಯಕ್ಷ ಸುಭಾಷ ರದ್ದೇವಾಡಗಿ, ಮುಖಂಡರಾದ ರಾಮಕೃಷ್ಣ ಮಾಲಗತ್ತಿ, ಸಿದ್ದಪ್ಪ ರದ್ದೇವಾಡಗಿ, ಗಂಗಣ್ಣ ಮಲ್ಲಾರಿ, ಕಾಶೆಪ್ಪ ಅಂಬಲೇಗೋಳ, ಹಣಮಂತ ಗಲಗಿನ, ಹಣಮಂತ ರದ್ದೇವಾಡಗಿ, ಚಂದ್ರಪ್ಪ ಮಾಲಗತ್ತಿ, ಮಲ್ಲಪ್ಪ ಅಂಬಲೇಗೋಳ, ಹಣಮಂತ ಕೆಂಚಗಾರಹಳ್ಳಿ, ಜಗದೇವ ಮಾಲಗತ್ತಿ ಸಭೆಯಲ್ಲಿ ಪಾಲ್ಗೊಂಡಿದ್ದರು.

emedialine

Recent Posts

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

6 hours ago

ಬಡವರಿಗೆ ಹಣ್ಣು-ಹಂಪಲು ವಿತರಣೆ

ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ  ಜೈ ಕನ್ನಡಿಗರ…

6 hours ago

ಕಾರಾಗೃಹದ ಬಂದಿಗಳಿಗೆ ಮನಃ ಪರಿವರ್ತನೆಗೊಳ್ಳುವ ಚಲನ ಚಿತ್ರ ಸ್ಕ್ರೀನ್

ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…

6 hours ago

ಕನ್ನಡ ದೀಪೋತ್ಸವ: ವಿಜಯೀಭವ ಕೃತಿ ಜನಾರ್ಪಣೆ 24 ರಂದು

ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…

6 hours ago

ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದಿಂದ ವಿಭಾಗಿಯ ಮಟ್ಟಕ್ಕೆ ಆಯ್ಕೆ

ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…

6 hours ago

ಅಭಿವೃದ್ಧಿ ಪರ ಚಿಂತನೆಯಳ್ಳ ಪ್ರಬುದ್ದ ರಾಜಕಾರಣಿ ಪ್ರಿಯಾಂಕ್ ಖರ್ಗೆ

ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…

6 hours ago