ಕಲಬುರಗಿ: ಜಿಲ್ಲೆಯಲ್ಲಿ ಬರಸ್ಥಿತಿ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುಂಜಾಗೃತ ಕ್ರಮವಾಗಿ ಜಿಲ್ಲೆಯಲ್ಲಿ ಒಟ್ಟು 14 ಮೇವು ಬ್ಯಾಂಕ್‌ಗಳನ್ನು ಸ್ಥಾಪಿಸಲಾಗಿದೆ. ಈ ಮೇವು ಬ್ಯಾಂಕ್‌ಗಳಲ್ಲಿ ಒಣಮೇವನ್ನು ಸಂಗ್ರಹಿಸಿಡಲಾಗಿದೆ. ಅವಶ್ಯಕವಿರುವ ಜಾನುವಾರುಗಳ ಮಾಲೀಕರು ಸಂಬಂಧಪಟ್ಟ ತಾಲೂಕಿನ ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರುಗಳಿಗೆ ಸಂಪರ್ಕಿಸಬಹುದಾಗಿದೆ ಎಂದು ಕಲಬುರಗಿ ಪಶು ಪಾಲನಾ ಮತ್ತು ಪಶು ವೈದ್ಯಕೀಯ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ತಾಲೂಕಿನ ಹೆಸರು ಹಾಗೂ ಮೇವು ಬ್ಯಾಂಕ್ ಸ್ಥಾಪಿಸಿದ ಸ್ಥಳದ ವಿವರ ಇಂತಿದೆ. ಅಫಜಲಪುರ ತಾಲೂಕಿನ ರೇವೂರ ಹಾಗೂ ಅತನೂರ. ಆಳಂದ ತಾಲೂಕಿನ ಆಳಂದ ಹಾಗೂ ಖಜೂರಿ. ಚಿಂಚೋಳಿ ತಾಲೂಕಿನ ಐನಾಪುರ ಹಾಗೂ ಕೊಡ್ಲಿ. ಚಿತ್ತಾಪೂರ ತಾಲೂಕಿನ ಚಿತ್ತಾಪುರ ಹಾಗೂ ನಾಲವಾರ. ಜೇವರ್ಗಿ ತಾಲೂಕಿನ ಆಂದೋಲಾ ಹಾಗೂ ಹುಲ್ಲೂರ. ಕಲಬುರಗಿ ತಾಲೂಕಿನ ಅವರಾದ ಹಾಗೂ ಪಟ್ಟಣ. ಸೇಡಂ ತಾಲೂಕಿನ ಮುಧೋಳ ಹಾಗೂ ಮಳಖೇಡ.
ಸರ್ಕಾರ ನಿಗದಿಪಡಿಸಿದ ದರದಂತೆ ಪ್ರತಿ ಕೆ.ಜಿ ೨ರೂ. ಗಳ ದರವನ್ನು ಪಾವತಿಸಿ ಮೇವನ್ನು ಖರೀದಿಸಬಹುದಾಗಿದೆ. ರೈತರು ಆಧಾರ ಕಾರ್ಡ್ ಅಥವಾ ಯಾವುದಾದರೂ ಗುರುತಿನ ಚೀಟಿಯ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಸಂಬಂಧಪಟ್ಟ ರೈತರು ಆಯಾ ಭಾಗದ ಪಶು ಚಿಕಿತ್ಸಾಲಯ ವ್ಯಾಪ್ತಿಯಲ್ಲಿ ಬರುವ ಪಶು ವೈದ್ಯಾಧಿಕಾರಿಗಳಿಂದ ಜಾನುವಾರುಗಳ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ತರಬೇಕೆಂದು ಅವರು ತಿಳಿಸಿದ್ದಾರೆ.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…