ಬಿಸಿ ಬಿಸಿ ಸುದ್ದಿ

ಭಾಲ್ಕಿ ತಾಲ್ಲೂಕಿನಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮದ ಕುರಿತು ಪೂರ್ವಭಾವಿ ಸಭೆ

ಭಾಲ್ಕಿ: ೨೮. ರಂದು ಭಾಲ್ಕಿ ನಗರದ ಪುರಸಭೆ ಸಭಾಂಗಣದಲ್ಲಿ ಜಿಲ್ಲಾಡಳಿತ, ತಾಲ್ಲುಕಾ ಆಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಹಮ್ಮಿಕೊಳ್ಳುವ ೭೫ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಅಮೃತ ಭಾರತಿಗೆ ಕನ್ನಡದ ಆರತಿ ಶೀರ್ಷಿಕೆಯಡಿ ನಡೆಯುತ್ತಿರುವ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಿ ಎಂದು ಭಾಲ್ಕಿ ಶಾಸಕರಾದ ಈಶ್ವರ ಖಂಡ್ರೆ ಅವರು ಹೇಳಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಭಾಲ್ಕಿ ತಾಲ್ಲೂಕಿನಲ್ಲಿ ಹಮ್ಮಿಕೊಳ್ಳುತ್ತಿರುವುದು ಶ್ಲಾಘನೀಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಿಳಿಸಿದರು. ಸಿದ್ರಾಮ ಸಿಂಧೆ ಸಹಾಯಕ ನಿರ್ದೇಶಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೀದರ ಅವರು ಸಭೆಯಲ್ಲಿ ಇದ್ದ ಎಲ್ಲಾ ಮಹನೀಯರಿಗೆ ಪ್ರಸ್ತಾವಿಕವಾಗಿ ಮಾತನಾಡಿದರು.

ಸ್ವಾತಂತ್ರ್ಯದ ಸಂಗ್ರಾಮದ ನೆನಪುಗಳನ್ನು ಮೆಲುಕು ಹಾಕುತ್ತಾ ಸ್ವಾತಂತ್ರ್ಯ ಹೋರಾಟಕ್ಕೆ ತಮ್ಮನ್ನೆ ತಾವು ತೊಡಗಿಸಿಕೊಂಡು ದೇಶದ ಸ್ವಾತಂತ್ರ್ಯಕ್ಕಾಗಿ ಜೀವತ್ಯಾಗ ಮಾಡಿದ ಹೋರಾಟಗಾರರ ಜೀವನಗಾಥೆ ಹಾಗೂ ಹೋರಾಟದ ವಿವಿಧ ಹಂತಗಳನ್ನು ವಿಶೇಷವಾಗಿ ಸ್ವಾತಂತ್ರ್ಯಕ್ಕೆ ಕರ್ನಾಟಕದ ಕೊಡುಗೆಯನ್ನು ಇಂದಿನ ಯುವಜನಾಂಗಕ್ಕೆ ಮತ್ತು ಸಾರ್ವಜನಿಕರಿಗೆ ಮತ್ತು ರಾಷ್ಟ್ರಕ್ಕೆ ತಿಳಿಸುವ ಉದ್ದೇಶದ ಕಾರ್ಯಕ್ರಮ ಇದಾಗಿದೆ. ಕಾರ್ಯಕ್ರಮವು ೪ ಹಂತದ ಕಾರ್ಯಕ್ರಮವಾಗಿದೆ. ಈಗ ೧ನೇ ಹಂತದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಮಹಾತ್ಮ ಗಾಂಧೀಜಿ ಭಗತಸಿಂಗ, ಸುಭಾಷಚಂದ್ರ ಭೋಸ್, ಜವಾಹರಲಾಲ ನೆಹರು, ಸುಖದೇವ, ವೀರಸಾವರ್ಕರ, ಅವರ ಸವಿನೆನಪಿಗಾಗಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಕಾರ್ಯಕ್ರಮ ಯಶಸ್ವಿ ಮಾಡಲು ಜಿಲ್ಲೆಯ ಎಲ್ಲಾ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಸಮಾಜಸೇವಕರು, ಚಿಂತಕರು ಕಲಾವಿದರು ಶ್ರಮಿಸಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಮತ್ತು ಮತ್ತು ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದವರಿಗೆ ಸನ್ಮಾನಿಸಲು ತೀಮಾನಿಸಲಾಯಿತು. ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಕಾರ್ಯಕ್ರಮ ಯಶಸ್ವಿಗೊಳಿಸಲು ಶಾಸಕರಾದ ಈಶ್ವರ ಬಿ.ಖಂಡ್ರೆ ಅವರು ಸೂಚಿಸಿದರು.

ಕಾರ್ಯಕ್ರಮದ ಮೆರವಣಿಗೆಯು ಪುರಸಭೆ ಕಾರ್ಯಾಲಯದಿಂದ ಜಗಜ್ಯೋತಿ ಬಸವಣ್ಣನವರ ಭಾವಚಿತ್ರದ ಮೆರವಣಿಗೆಯು ಬಸ ನಿಲ್ದಾಣ ಡಾ>ಬಾಬಾ ಸಾಹೇಬ ಅಂಬೇಡ್ಕರ ವೃತ್ತ ಮಹಾತ್ಮಾ ಗಾಂಧಿ ವೃತ್ತ ಮಹಾತ್ಮ ಬಸವೇಶ್ವರ ವೃತ್ತದ ಮೂಲಕ ಪುರಭವನ ತಲುಪುವುದು.
ಸಭೆಯಲ್ಲಿ ಪದವಿ ಪೂರ್ವ ಕಾಲೇಜಿನ ಮಕ್ಕಳಿಗೆ ಅಮೃತ ಭಾರತಿಗೆ ಕನ್ನಡದ ಆರತಿ ಕುರಿತು ಪ್ರಬಂಧ, ಕವನವಾಚನ, ರಂಗೋಲಿ, ಚಿತ್ರಕಲೆ, ಭಾಷಣ ಇನ್ನಿತರೆ ಸ್ಪರ್ಧೆಗಳನ್ನು ಏರ್ಪಡಿಸುವ ಚರ್ಚಿಸಲಾಯಿತು.

ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳಾದ ಕೀರ್ತಿ ಚಾಲಕ್ ತಹಸೀಲ್ದಾರರು ಭಾಲ್ಕಿ ಬಸವಂತರಾಯ ಜಿದ್ದೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಾರ್ಯನಿರ್ವಾಹಕ ಅಧಿಕಾರಿಗಳಾದ ದೀಪಿಕಾ ನಾಯ್ಕರ ಪುರಸಭೆಯ ಅಧ್ಯಕ್ಷರಾದ ಬಸವರಾಜ ವಂಕೆ, ಸ್ವಾಮಿದಾಸ ಟಿ.ಸಿ.ಎಂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಗಭೂಷಣ ಮಾಮಡಿ, ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟದ ಅಧ್ಯಕ್ಷರಾದ ವಿಜಯಕುಮಾರ ಸೋನಾರೆ, ತಾಲ್ಲೂಕಾ ಪತ್ರಕರ್ತರ ಸಂಘ ಅಧ್ಯಕ್ಷರಾದ ಚಂದ್ರಕಾಂತ ಎಮ್ಮೆ, ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಕಾರ್ಯಕ್ರಮದ ಸಂಯೋಜಕರಾದ ಗುರುನಾಥ ರಾಜಗೀರಾ ಪತ್ರಕರ್ತರು ಮಾಧ್ಯಮದ ಮಿತ್ರರು ಭಾಲ್ಕಿ ಪೋಲಿಸ್ ಠಾಣೆಯ ಆರಕ್ಷಕ ಉಪ ನೀರಿಕ್ಷಕರು ತಾಲ್ಲೂಕು ಮಟ್ಟದ ಅಧಿಕಾರಿಗಳು, ಚಿಂತಕರು, ಕಲಾವಿದರು ಸಾಹಿತಿಗಳು ಇನ್ನಿತರರು ಅವರು ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

9 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

19 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

19 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

19 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago