ಪದೆ ಪದೇ ವಿದ್ಯುತ್ ಕಡಿತಕ್ಕೆ ಆಕ್ರೋಶ: ಜೆಸ್ಕಾಂ ಕಚೇರಿಗೆ ಮುತ್ತಿಗೆ ಎಚ್ಚರಿಕೆ

0
24

ಕಲಬುರಗಿ: ನಗರದ ಪ್ರತಿಷ್ಠಿತ ಬಡಾವಣೆ ಜಯನಗರ ಹಾಗೂ ಸುತ್ತಮುತ್ತಲಿನ ಬಡಾವಣೆಗಳಲ್ಲಿ ಪದೆ ಪದೇ ವಿದ್ಯುತ್ ಕಡಿತದಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದ್ದು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಕನ್ನಡ ಭೂಮಿ ಜಾಗೃತಿ ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಸಿರಗಾಪೂರ ಅವರು ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.

ಸೇಡಂ ರಸ್ತೆಯ ವಾರ್ಡ್ ನಂ.48 ರಲ್ಲಿ ಬರುವ ಜಯನಗರ, ಡಾಕ್ಟರ್ಸ್ ಕಾಲೋನಿ, ಧನ್ವಂತರಿ ಕಾಲೋನಿ, ವಿಶ್ವೇಶ್ವರಯ್ಯ ಕಾಲೋನಿ,ಪೂಜಾ ಕಾಲೋನಿ,ತಿಲಕ ನಗರ ಸೇರಿದಂತೆ ಇನ್ನೂ ಹಲವು ಬಡಾವಣೆಗಳಲ್ಲಿ ದಿನ ನಿತ್ಯ ಪದೇ ಪದೇ ವಿದ್ಯುತ್ ಕಡಿತಗೊಳ್ಳುತ್ತಿದೆ.ಇದರಿಂದ ವಿದ್ಯಾರ್ಥಿಗಳಿಗೆ, ವೃದ್ಧರಿಗೆ ಹಾಗೂ ವ್ಯಾಪಾರಸ್ಥರಿಗೆ ಸಾಕಷ್ಟು ತೊಂದರೆಯಾಗುತ್ತಿದೆ.ಬೆಸಿಗೆ ಇರುವುದರಿಂದ ಬಿಸಿಲಿನ ಝಳ ಹೆಚ್ಚಾಗಿದೆ.ಜನರು ಎಸಿ,ಫ್ಯಾನುಗಳನ್ನು ಅವಲಂಬಿಸಿದ್ದಾರೆ.ಹಗಲು ರಾತ್ರಿ ಎನ್ನದೆ ವಿದ್ಯುತ್ ಕಡಿತ ವಾಗುತ್ತದೆ.ಜನರು ನೆಮ್ಮದಿಯಿಂದ ನಿದ್ದೆ ಮಾಡಲು ಕಷ್ಟ ಅನುಭವಿಸಬೇಕು.ಈ ಬಡಾವಣೆಗಳಲ್ಲಿ ಸೊಳ್ಳೆಗಳ ಕಾಟ ಹೆಚ್ಚಾಗಿದೆ.ಮಹಾನಗರ ಪಾಲಿಕೆ ಸೊಳ್ಳೆಗಳ ಕಾಟ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಂಡಿಲ್ಲ.ದೈನಂದಿನ ಜೀವನದಲ್ಲಿ ವಿದ್ಯುತ್ ಇಲ್ಲದೆ ಜೀವನ ನಡೆಸುವುದು ದುಸ್ತರವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

Contact Your\'s Advertisement; 9902492681

ಹಲವು ಬಾರಿ ವಿದ್ಯುತ್ ದರ ಏರಿಕೆಯಾದರೂ ಜನರು ಸಹಿಸಿಕೊಳ್ಳುತ್ತಿದ್ದಾರೆ.ಆದರೆ ವಿದ್ಯುತ್ ಕಡಿತ ಸಮಸ್ಯೆ ಮಾತ್ರ ತಪ್ಪಿದ್ದಲ್ಲ. ಈ ಬಗ್ಗೆ ಜೆಸ್ಕಾಂ ಅಧಿಕಾರಿಗಳಿಗೆ ದೂರು ಸಲ್ಲಿಸಿದರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಜಯನಗರ ವಿಭಾಗದ ಅಧಿಕಾರಿ ದೂರು ಸ್ವೀಕರಿಸದೇ ನಿರ್ಲಕ್ಷ್ಯ ಧೋರಣೆ ತಾಳುತ್ತಿದ್ದಾರೆ.ಸ್ವಲ್ಪ ಗಾಳಿ,ಮಳೆ ಬಂದರಂತೂ ಕತ್ತಲಲ್ಲೆ ಕಾಲ ಕಳೆಯಬೇಕಾಗಿದೆ.ಈಗಿರುವ ಹಳೆ ವಿದ್ಯುತ್ ಟ್ರಾನ್ಸಫಾರ್ಮರ್ ಗಳನ್ನು ಬದಲಿಸಬೇಕು.ನಿರಂತರ ವಿದ್ಯುತ್ ಸರಬರಾಜಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು.ಇಲ್ಲವಾದರೆ ಬಡಾವಣೆಯ ನಾಗರಿಕರೊಂದಿಗೆ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here