ಬೆಂಗಳೂರು: ಕಳೆದ ಎರಡು ದಿನಗಳಿಂದ ನಗರದ ಹಲವು ಸ್ಥಳಗಳಿಗೆ ಭೇಟಿ ನೀಡಿದ್ದೇನೆ. ಅನೇಕ ಕಡೆ ಕಳಪೆ ಕಾಮಗಾರಿ ನಡೆದಿರುವುದು ಕಂಡುಬಂದಿದೆ. ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ರಾಜರಾಜೇಶ್ವರಿ ನಗರ ಕ್ಷೇತ್ರದ ನಾಯಂಡಹಳ್ಳಿ ಸರ್ಕಲ್ ನ ತಗ್ಗು ಪ್ರದೇಶಗಳಿಗೆ ಇಂದು ಭೇಟಿ ಜನರ ಸಂಕಷ್ಟ ಆಲಿಸಿದರು.
ಪಂತರಪಾಳ್ಯ, ನಾಯಂಡಹಳ್ಳಿ ಮೆಟ್ರೋ ಲೇಔಟ್ ಮತ್ತಿತರೆ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು ಅವರು.ಪ್ಲ್ಯಾಟ್ ಗಳಲ್ಲಿ ನೀರು ತುಂಬಿ ಅಲ್ಲಿನ ನಿವಾಸಿಗಳು ಹೋಟೆಲ್ ಗಳಲ್ಲಿ ಉಳಿಯುವ ಪರಿಸ್ಥಿತಿ ಇದೆ ಎಂದು ಅವರು ಕಳವಳ ವ್ಯಕ್ತಪಡಿಸಿದರು.
ಶಿವಮೊಗ್ಗ ನಗರದಲ್ಲೇ ಸಿಎಂ ಆಗಿದ್ದ ಜಿಲ್ಲೆಯಲ್ಲೇ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನು ಬೆಂಗಳೂರಿನಲ್ಲಿ ವಲಯವಾರು ಉಸ್ತುವಾರಿ ಕೊಟ್ಟಿದ್ದಾರೆ. ಆದರೆ ಇವತ್ತು ಅವರು (ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ) ವಿದೇಶ ಪ್ರವಾಸದಲ್ಲಿದ್ದಾರೆ. ರಾಜರಾಜೇಶ್ವರಿನಗರದಲ್ಲಿ ಈಗಿನ ಶಾಸಕ ಮೂರು ಬಾರಿ ಎಂಎಲ್ ಎ ಆಗಿದ್ದಾರೆ. ಅಶ್ವತ್ಥ ನಾರಾಯಣ ಕ್ಷೇತ್ರಕ್ಕೆ ಅಭಿವೃದ್ಧಿಗಾಗಿ ಎಷ್ಟು ಅನುದಾನ ಹೋಗಿದೆ? ಎಂದು ಅವರು ಪ್ರಶ್ನಿಸಿದರು.
ಎಲ್ಲವೂ ಕಳಪೆ ಕಾಮಗಾರಿ ಮಾಡಲಾಗುತ್ತಿದೆ. ಈಗಾಗಲೇ ಸಿಎಂ ದಾವೋಸ್ ಪ್ರವಾಸದಲ್ಲಿದ್ದಾರೆ. ಯಾವ ಮುಖ ಇಟ್ಟುಕೊಂಡು ಬಂಡವಾಳ ಹೂಡಿಕೆ ಮಾಡಿ ಎಂದು ವಿದೇಶಿ ಕಂಪನಿಗಳನ್ನು ಕೇಳುತ್ತಾರೆ. ಇಲ್ಲಿ ಉದ್ಯಮಿಗಳು ದಿನ ಬೆಳಗಾದರೆ ಸರಕಾರಕ್ಕೆ ಮಂಗಳಾರತಿ ಮಾಡುತ್ತಿದ್ದಾರೆ ಎಂದು ಅವರು ಚಾಟಿ ಬೀಸಿದರು.
ಕಣ್ಣು ಹೊರೆಸುವ ತಂತ್ರವನ್ನು ಇವರು ಅನುಸರಿಸುತ್ತಿದ್ದಾರೆ. ವೋಟ್ ಹಾಕಿದವರಿಗೆ ಒಂದು, ವೋಟ್ ಹಾಕದವರಿಗೆ ಮತ್ತೊಂದು. ಶಾಸಕರಿಂದ ಜನರಿಗೆ ತಾರತಮ್ಯ ಧೋರಣೆಗೆ ಹೆಚ್ ಡಿಕೆ ಕಿಡಿಕಾರಿದರು.
ಯಾವ ಯಾವ ಕ್ಷೇತ್ರಗಳಿಗೆ ಎಷ್ಟು ಅನುದಾನ ಬಿಡುಗಡೆ ಎಂಬ ಬಗ್ಗೆ ಮಾಹಿತಿ ಪಡೆಯುತ್ತಿದ್ದೇನೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಧ್ವನಿ ಎತ್ತುತ್ತೇನೆ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ಏಳು ಬಾರಿ ದೆಹಲಿಗೆ ದಂಡೆತ್ತಿ ಹೋಗಿದ್ದಾರೆ. ಆದರೆ ಯಾವುದೂ ಕೆಲಸ ಆಗಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್, ಪಕ್ಷದ ಸ್ಥಳೀಯ ಮುಖಂಡರು ಮಾಜಿ ಮುಖ್ಯಮಂತ್ರಿಗಳ ಜತೆಯಲ್ಲಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…