ಕಲಬುರಗಿ: ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಮಾತ್ರ ಅವರಲ್ಲಿನ ಪ್ರತಿಭೆ ಇನ್ನಷ್ಟು ಹೊರ ಹೊಮ್ಮಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಹೇಳಿದರು.
ಹತ್ತನೇ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದು ಜಿಲ್ಲೆಯ ಕೀರ್ತಿ ಹೆಚ್ಚಿಸಿದ ಇಲ್ಲಿನ ಮಿಲೇನಿಯಂ ಫ್ರೌಢ ಶಾಲೆಯ ಪ್ರತಿಭಾವಂತ ವಿದ್ಯಾರ್ಥಿ ಜಿಲ್ಲೆಯ ಟಾಪರ್ ಶ್ರೀಕಾಂತ ಶಿವಕುಮಾರ ಬೆಳ್ಳೆ ಧುತ್ತರಗಾಂವ ಅವರನ್ನು ಇಲ್ಲಿನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ವಿಶೇಷ ಗೌರವ ಸತ್ಕಾರ ಸಲ್ಲಿಸಿ ಮಾತನಾಡಿದ ಅವರು, ಕೇವಲ ಓದು ಒಂದೇ ಮಕ್ಕಳ ಗುರಿಯಾಗದೆ ಅವರಲ್ಲಿರುವ ಆಸಕ್ತಿಯನ್ನು ಗುರುತಿಸಿ ಪೋಷಕರು ಪ್ರೋತ್ಸಾಹಿಸುವುದರ ಜತೆಗೆ ಅವರ ಬೇರೆ-ಬೇರೆ ಕಲಾ ಪ್ರಕಾರಗಳಿಗೆ ಮುಕ್ತ ಅವಕಾಶ ಕಲ್ಪಿಸಿಕೊಡಬೇಕು ಎಂದು ಅಭಿಪ್ರಾಯಪಟ್ಟರು.
ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಶಿವರಾಜ ಅಂಡಗಿ, ಸಂಘ ಸಂಸ್ಥೆ ಪ್ರತಿನಿಧಿ ಕಲ್ಯಾಣಕುಮಾರ ಶೀಲವಂತ, ಉಪನ್ಯಾಸಕ-ಚಿತ್ರನಟ ಗಂಗಾಧರ ಬಡಿಗೇರ, ಶಿವಕುಮಾರ ಬೆಳ್ಳೆ, ರಾಜೇಂದ್ರ ಮಾಡಬೂಳ, ಶಂಕರ ಬಿರಾದಾರ ಭೂತಪುರ, ಶಿವಕುಮಾರ ಸಿ.ಎಚ್., ಸೇರಿದಂತೆ ಅನೇಕರು ಉಪಸ್ಥಿತರಿದ್ದರು.