ಕಲಬುರಗಿ: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ಮಹಾವಿದ್ಯಾಲಯ, ಕಲಬುರಗಿ, ಐಸಿಎಆರ್-ಕೃಷಿ ವಿಜ್ಞಾನಕೇಂದ್ರ, ಕಲಬುರಗಿ ಮತ್ತುರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಅಭಿವೃದ್ದಿ ಬ್ಯಾಂಕ್ (ನಬಾರ್ಡ್) ಇವರ ಸಂಯುಕ್ತಆಶ್ರಯದಲ್ಲಿಆಹಾರ ಸಂಸ್ಕರಣೆ ಮತ್ತು ಮೌಲ್ಯವರ್ಧನೆ ಕೇಂದ್ರz ಉದ್ಘಾಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಅಪರ ಜಿಲ್ಲಾಧಿಕಾರಿ ಭೀಮಾಶಂಕರ್ ತೆಗ್ಗಳ್ಳಿ, ಕೇಂದ್ರವನ್ನು ಉದ್ಘಾಟಿಸಿ ಮಾತನಾಡುತ್ತಾ ರೈತ ಭಾಂದವರು ಸಂಘಟಿತರಾಗಿತಾವು ಬೆಳೆದ ಉತ್ಪನ್ನಗಳನ್ನು ರೈತಉತ್ಪಾದಕ ಸಂಸ್ಥೆಗಳ ಮೂಲಕ ಮೌಲ್ಯವರ್ಧನೆ ಚಟುವಟಿಕೆಗಳನ್ನು ಕೈಗೊಳ್ಳಲು ಸಲಹೆ ನೀಡಿದರು.
ಮುಂದುವರೆದು, ರೈತರುತಮ್ಮಆದಾಯವನ್ನು ದ್ವಿಗುಣಗೊಳಿಸಲು ಸಮಗ್ರ ಕೃಷಿ ಪದ್ದತಿ ಮತ್ತು ಕೃಷಿ ವಿಶ್ವವಿದ್ಯಾಲಯಗಳು ಬಿಡುಗಡೆಗೊಳಿಸಿದ ನೂತನ ತಾಂತ್ರಿಕತೆಗಳನ್ನು ಸಮರ್ಪಕವಾಗಿಅಳವಡಿಸಿಕೊಂಡು ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಪ್ರಗತಿ ಸಾಧಿಸಲುಕರೆ ನೀಡಿದರು.
ಕಾರ್ಯಕ್ರಮದಲ್ಲಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ವಿಸ್ತರಣಾ ನಿರ್ದೇಶಕ ಡಾ.ಡಿ.ಎಮ್.ಚಂದರಗಿ ಒಂದು ಜಿಲ್ಲೆ ಒಂದು ಉತ್ಪನ್ನದಡಿ ಆಯ್ಕೆಯಾದ ಈ ಭಾಗದ ಜಿ. ಐಟ್ಯಾಗ್ ಪುರಸ್ಕೃತತೊಗರಿಯನ್ನು ಮೌಲ್ಯವರ್ಧಿಸಿ ಬ್ರ್ಯಾಂಡ್ ಮೂಲಕ ಮಾರಾಟ ಮಾಡಿದಾಗ ಹೆಚ್ಚಿನ ಆದಾಯವನ್ನು ಪಡೆಯಬಹುದೆಂದು ತಿಳಿಸಿದರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಮೇಶ ಭಟ್, ಡಿ.ಡಿ.ಎಂ.ನಬಾರ್ಡ್, ಅನುಸೂಯ ಹೂಗಾರ, ಡಿ.ಡಿ.ಎ, ಕೃಷಿ ಇಲಾಖೆ ಮತ್ತುಡಾ.ಎಮ್.ಎಮ್.ಧನೋಜಿ, ಸಹ ಸಂಶೋಧನಾ ನಿರ್ದೇಶಕರು, ವಲಯ ಕೃಷಿ ಸಂಶೋಧನಾಕೇಂದ್ರ, ಕಲಬುರಗಿ ರೈತರನ್ನು ಉದ್ದೇಶಿಸಿ ರೈತರು ಒಗ್ಗೂಡಿ ತಮ್ಮದೇ ಉತ್ಪಾದಕ ಸಂಸ್ಥೆಗಳನ್ನು ರಚಿಸುವುದರ ಮೂಲಕ ಲಭ್ಯವಿರುವ ಸಂಪನ್ಮೂಲಗಳನ್ನು ವ್ಯವಸ್ಥಿತವಾಗಿ ಮತ್ತು ವ್ಯಾವಹಾರಿಕವಾಗಿ ಬಳಸಿಕೊಂಡು ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಾಗ ಮಾತ್ರ ಆರ್ಥಿಕವಾಗಿ ಸಬಲರಾಗಬಹುದು ಎಂದರು.
ಕಾರ್ಯಕ್ರಮದಅಧ್ಯಕ್ಷೀಯ ಭಾಷಣದಲ್ಲಿಡಾ.ಸುರೇಶಎಸ್. ಪಾಟೀಲ್, ಡೀನ್ (ಕೃಷಿ) ಕೃಷಿ ಮಹಾವಿದ್ಯಾಲಯ, ಕಲಬುರಗಿರವರುಸರಕಾರದಿಂದ ಅನುಷ್ಠಾನಗೊಂಡ ಯೋಜನೆಗಳನ್ನು ರೈತರು ಸಮರ್ಪಕವಾಗಿ ಬಳಸಿಕೊಳ್ಳಲು ಸೂಚಿಸಿದರು.ಡಾ. ಅಂಬರೀಷ ಗಣಾಚಾರಿರವರು ಪ್ರಾಸ್ತಾವಿಕವಾಗಿ ಮಾತನಾಡಿಕೇಂದ್ರದ ಕಾರ್ಯಸೂಚಿಗಳನ್ನು ವಿವರಿಸಿದರು.
ಕಾರ್ಯಕ್ರಮವನ್ನು ಡಾ.ರಾಜು ಜಿ. ತೆಗ್ಗಳ್ಳಿ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು, ಸ್ವಾಗತಿಸಿದರೆ, ಡಾ. ಯುಸುಫ್‌ಅಲಿ, ವಿಜ್ಞಾನಿ, ಕೆವಿಕೆ ನಿರೂಪಿಸಿದರು.ಕೊನೆಯಲ್ಲಿಡಾ.ಮಲ್ಲಿಕಾರ್ಜುನರೆಡ್ಡಿ, ವಂದನಾರ್ಪಣೆ ಮಾಡಿದರು.ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಸಂಶೋಧನಾಕೇಂದ್ರ ಮತ್ತು ಕೃಷಿ ವಿಜ್ಞಾನಕೇಂದ್ರದ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ ಅನೇಕ ರೈತರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…