ಕಲಬುರಗಿ: ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದ ದಲಿತ ಕುಟುಂಬದ ವಿದ್ಯಾರ್ಥಿನಿಯನ್ನು ಅಪಹರಿಸಿದ್ದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಮಳಖೇಡ ಠಾಣೆಯ ಪಿಎಸ್ಐ ಅವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಭಾರತೀಯ ದಲಿತ ಪ್ಯಾಂಥರ್ ಜಿಲ್ಲಾ ಘಟಕದ ಉಪಾಧ್ಯಕ್ಷ ಕಾಶಿನಾಥ ದೀವಂಟಿಗೆ ಆಗ್ರಹಿಸಿದರು.
ಈ ಕುರಿತು ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ತಪ್ಪಿತಸ್ಥ ರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಾಳೆ ಮಳಖೇಡ ಪೆÇಲೀಸ್ ಠಾಣೆ ಮುತ್ತಿಗೆ ಹಾಕಲಾಗುವುದು ಎಂದು ತಿಳಿಸಿದರು.
ಈ ಕುರಿತಾಗಿ ಠಾಣೆಯ ಪಿಎಸ್ಐ ಅವರಿಗೆ ಕೇಳಲಾಗಿ ಅವರು ತಪ್ಪಿತಸ್ಥರ ರಕ್ಷಣೆಗೆ ನಿಂತವರಂತೆ ವರ್ತಿಸುತ್ತಿದ್ದು, ನ್ಯಾಯ ಕೇಳಲು ಹೋದವರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ದೂರಿದರು.
ಈ ವಿಷಯವನ್ನು ಎಸ್.ಪಿ.ಅವರ ಗಮನಕ್ಕೆ ತಂದಾಗ ಮಾತ್ರ ಈ ಪ್ರಕರಣ ಕುರಿತು ಅಲ್ಲಿನ ಪಿಎಸ್ ಐ ಅವರು ತನಿಖೆ ನಡೆಸಿದಂತೆ ಮಾಡುತ್ತಿದ್ದಾರೆ ವಿನಃ ಈವರೆಗೆ ಆರೋಪಿಗಳನ್ನು ಬಂಧಿಸುತ್ತಿಲ್ಲ ಎಂದು ಅವರು ಆರೋಪಿಸಿದರು.
ಸಿದ್ಧಾರೂಢ ಸಮತಾ ಜೀವನ, ಗುರುನಾಥ ದೊಡ್ಡಮನಿ, ಮಲ್ಲಿಕಾರ್ಜುನ ದೊಡ್ಡಮನಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…