ಕಲಬುರಗಿ: ನಗರದ ಜೇವರ್ಗಿ ರಸ್ತೆಯ ಎಂ.ಎನ್.ದೇಸಾಯಿ ಪದವಿ ಕಾಲೇಜಿನಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಹಾಗೂ ಸಹಕಾರ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸನ್ಮಾನ ಸಮಾರಂಭದಲ್ಲಿ ಸಂಸ್ಥೆಯ ಅಧ್ಯಕ್ಷ ಸಂದೀಪ ದೇಸಾಯಿ ಮಾತನಾಡಿ ಯುವ ಪ್ರತಿಭೆಗಳು ದೇಶದ ಸಂಪತ್ತಾಗಿದ್ದು ಅವರ ಸಾಧನೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಸನ್ಮಾನಿಸುವುದು ಸಮಾಜದ ಆದ್ಯ ಕರ್ತವ್ಯವಾಗಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅಗ್ರ ಶ್ರೇಣಿ ಪಡೆದ ಕು. ಪೂಜಾ ಪಿ ಪೂಜಾರಿ ಹಾಗೂ ಕಲಬುರಗಿ ಡಿಸಿಸಿ ಬ್ಯಾಂಕ್ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ರುದ್ರಗೌಡ ಪಾಟೀಲ್ ಯತ್ನಾಳ ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಯಲ್ಲಪ್ಪ ಮುರಡಿ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಕಲಬುರಗಿ ಜಿಲ್ಲಾ ಗಾಣಿಗ ಸಮಾಜದ ಅಧ್ಯಕ್ಷ ಶರಣುಕುಮಾರ ಬಿಲ್ಲಾಡ, ಬಿ.ಎಂ ಪಾಟೀಲ್ ಕಲ್ಲೂರ, ಚಂದ್ರಕಾಂತ್ ಗೌಡರ, ಗಾಣಿಗ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪಾಟೀಲ್, ಸಂಸ್ಥೆ ಕಾರ್ಯದರ್ಶಿ ಜಗನಾಥ ನಾಗೂರ, ಉಪನ್ಯಾಸಕರಾದ ನಾಗರಾಜ ಪಟ್ಟಣಕರ್, ಅನಂತ ಜೋಶಿ, ಮಂಜುನಾಥ ಬನ್ನೂರ್ಕರ್ ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…