ಭಾಲಿ: ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲದಲ್ಲಿ ೨೦೨೧-೨೨ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ. ಫಲಿತಾಂಶದ ಕರಪತ್ರವನ್ನು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಬಿಡುಗಡೆ ಮಾಡಿದರು.
ಗಡಿಭಾಗದ ಗ್ರಾಮೀಣ ಪ್ರದೇಶದ ಮಕ್ಕಳ ಶೈಕ್ಷಣಿಕ ಸಾಧನೆಯನ್ನು ನೋಡಿ ಅಪಾರ ಸಂತೋಷವಾಗುತ್ತದೆ. ಪ್ರತಿಯೊಬ್ಬ ಮಗುವಿನಲ್ಲಿಯೂ ಪ್ರತಿಭೆ ಇರುತ್ತದೆ. ಅದಕ್ಕೆ ಸೂಕ್ತ ವೇದಿಕೆ ಸಿಕ್ಕಾಗ ಆ ಪ್ರತಿಭೆಯ ಸುಗಂಧವನ್ನು ಎಲ್ಲಾ ಕಡೆ ಹರಡುತ್ತದೆ. ನಮ್ಮ ಸಂಸ್ಥೆ ಇಂತಹ ಮಕ್ಕಳಿಗೆ ಸೂಕ್ತ ವೇದಿಕೆಯಾಗಿರುವುದು ನಮಗೆ ತೃಪ್ತಿದಾಯಕವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಕಲಿತ ಮಕ್ಕಳಾದ ಸುಮಿತ ಈಶ್ವರ ಎಂಬ ವಿದ್ಯಾರ್ಥಿ ೬೨೪ ಅಂಕಗಳನ್ನು ಹಾಗೂ ಗುರುಬಸವ ಮತ್ತು ವಿಜಯಲಕ್ಷ್ಮಿ ಎಂಬ ಎರಡು ಮಕ್ಕಳು ೬೨೩ ಅಂಕಗಳನ್ನು ಪಡೆದು ರಾಜ್ಯಕ್ಕೆ ೨ನೇ ರ‍್ಯಾಂಕ್, ೩ನೇ ರ‍್ಯಾಂಕ್ ಬಂದಿರುವುದು ನಿಜಕ್ಕೂ ಸಂತೋಷದ ಸಂಗತಿ. ಹಾಗೆಯೇ ೨೩೪ ವಿದ್ಯಾರ್ಥಿಗಳ ಅಗ್ರಶ್ರೇಣಿಯಲ್ಲಿ ಪಾಸಾಗಿದ್ದಾರೆ ಎಂದು ಪೂಜ್ಯರು ಸಂತೋಷವನ್ನು ವ್ಯಕ್ತಪಡಿಸಿದರು. ಪೂಜ್ಯ ಶ್ರೀ ಗುರುಬಸವ ಪಟ್ಟದ್ದೇವರು ನೇತೃತ್ವ ವಹಿಸಿದ್ದರು.
ಅಕ್ಷರ ದಾಸೋಹ ಯೋಜನೆ ಅಧಿಕಾರಿಗಳಾದ ಗೀತಾ ಶಿವಕುಮಾರ ಗಡ್ಡೆ ಅವರಿಂದ ಕರಪತ್ರ ಬಿಡುಗಡೆಗೊಳಿಸಲಾಯಿತು. ಇದೇ ಸಂದರ್ಭದಲ್ಲಿ ಪ್ರಾಚಾರ್ಯ ಬಸವರಾಜ ಮೊಳಕೇರೆ, ಆಂಗ್ಲ ಮಾಧ್ಯಮ ಶಾಲೆಯ ಪ್ರಾಚಾರ್ಯ ಬಸವರಾಜ, ಇಂಜನೀಯರ್ ಸಿದ್ಧಯ್ಯ ಕಾವಡಿಮಠ, ಲಕ್ಷ್ಮಣ ಮೇತ್ರೆ, ಜಯಕ್ಕ ಗಾಂವಕರ, ಅನೀಲ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…