ಕಲಬುರಗಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ: ಬಾಬುರಾವ ಚವ್ಹಾಣ

0
52

ಕಲಬುರಗಿ:  ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಗ್ರಾಮೀಣ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಬೇಕು ಎಂದು  ಮಾಜಿ ಸಚಿವ ಬಾಬುರಾವ ಚವ್ಹಾಣ ಮನವಿ ಮಾಡಿಕೊಂಡರು.

ಈ ಕುರಿತು ಪಕ್ಷದ ಹೈಕಮಾಂಡ್ ಗೆ ಈಗಾಗಲೇ ಮನವಿ ಮಾಡಿಕೊಂಡಿದ್ದು, ಬಂಜಾರ ಸಮುದಾಯಕ್ಕೆ ಟಿಕೆಟ್ ನೀಡುವುದೇ ಆಗಿದ್ದಲ್ಲಿ ನನ್ನನ್ನು ಪರಿಗಣಿಸಬೇಕು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Contact Your\'s Advertisement; 9902492681

ಗ್ರಾಮೀಣ ಕ್ಷೇತ್ರದಿಂದ ಶಾಸಕನಾಗಿ ಸಚಿವನಾಗಿ ಕಾರ್ಯ ನಿರ್ವಹಿಸಿರುವುದು, ಕೆಜೆಪಿ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿರುವ ನನಗೆ ಈ ಕ್ಷೇತ್ರದ ಜನತೆಯ ನಾಡಿ ಮಿಡಿತ ಚನ್ನಾಗಿ ಗೊತ್ತಿದೆ. ಹೀಗಾಗಿ ಮುಂಬರುವ ಚುನಾವಣೆಯಲ್ಲಿ ಟಿಕೆಟ್ ಕೊಟ್ಟರೆ ಗೆಲ್ಲಲು ಸಾಧ್ಯವಾಗುತ್ತದೆ ಎಂದರು.

ಕಲಬುರಗಿ ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅವರು ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಅದೇರೀತಿಯಾಗಿ ಸಂಸದ ಡಾ. ಉಮೇಶ ಜಾಧವ ಕೂಡ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರ ಕೆಲಸಗಳನ್ನು ಮುಂದುವರಿಸಿದ್ದರೆ ಸಾಕಿತ್ತು. ಆದರೆ ಅದರ ಬದಲಾಗಿ ರೈಲ್ವೆ ವಿಭಾಗೀಯ ಕಚೇರಿ, ಐಐಟಿ ಕೇಂದ್ರಗಳನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಿದರು.

ಕೆಕೆಆರ್ಡಿಬಿಯಿಂದ ಕೇವಕ ರಸ್ತೆಗಳಿಗೆ ಮಾತ್ರ ಹಣ ಬಿಡುಗಡೆಯಾಗಿದೆ. ಉಳಿದ ಯಾವುದೇ ಅಭಿವೃದ್ಧಿ ಆಗಿಲ್ಲ. 40% ಕಮಿಷನ್ ಖ್ಯಾತಿಯ ರಾಜ್ಯ ಸರ್ಕಾರ ಪಿಎಸ್ಐ ಪರೀಕ್ಷೆ ಇನ್ನಿತರ ಹಗರಣಗಳಿಂದಾಗಿ ಭ್ರμÁ್ಟಚಾರದಿಂದ ಕೂಡಿದೆ. ಇದರಿಂದಾಗಿ ರಾಜ್ಯದ ಜನತೆ ಬೇಸತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here