ಕನ್ನಡ ನಾಮಫಲಕಕ್ಕೆ ಒತ್ತಾಯಿಸಿ ಕರವೇ ಪ್ರತಿಭಟನೆ

0
22

ಕಲಬುರಗಿ: ನಗರದ ಪ್ರಮುಖ ವಾಣಿಜ್ಯ ವಹಿವಾಟು ನಡೆಯುವ ಅಂಗಡಿಗಳು ಹಾಗೂ ಮಾಲ್‌ಗಳಲ್ಲಿ ಕಡ್ಡಾಯವಾಗಿ ಕನ್ನಡ ಫಲಕಗಳನ್ನು ಬರೆಸುವಂತೆ ಮಾಲೀಕರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ) ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹಲವೆಡೆ ಇಂಗ್ಲಿಷ್ ನಾಮಫಲಕಗಳು ಇರುತ್ತವೆ. ಇದರಿಂದ ಕನ್ನಡ ಭಾಷೆ ಹಾಗೂ ಕನ್ನಡಾಂಬೆಗೆ ಅವಮಾನ ಮಾಡಿದಂತಾಗುತ್ತದೆ. ಕನ್ನಡ ನಾಡಿನ ನೀರು, ಅನ್ನ, ಗಾಳಿ ಇನ್ನಿತರ ಎಲ್ಲ ಸೌಕರ್ಯಗಳನ್ನು ಪಡೆದುಕೊಂಡು ಇಂಗ್ಲಿಷ್ ಭಾಷೆಯ ನಾಮಫಲಕ ಹಾಕುವುದು ಯಾವ ನ್ಯಾಯ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಇನ್ನು ಮುಂದೆಯಾದರೂ ಎಲ್ಲ ಫಲಕಗಳನ್ನು ಕನ್ನಡದಲ್ಲಿ ಬರೆಸಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಇಂಗ್ಲಿಷ್ ಫಲಕಗಳಿಗೆ ಕಪ್ಪು ಮಸಿ ಬಳಿಯಬೇಕಾಗುತ್ತದೆ ಎಚ್ಚರಿಸಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ಆನಂದ ಎಸ್. ದೊಡ್ಡಮನಿ, ನಗರ ಘಟಕ ಅಧ್ಯಕ್ಷ ಸಿದ್ದು ಪೂಜಾರಿ, ನಗರ ಪ್ರಧಾನ ಕಾರ್ಯದರ್ಶಿ ಸುರೇಶ ಬಿ. ಹೊಸಮನಿ, ತಾರಫೈಲ ವಾರ್ಡ ಅಧ್ಯಕ್ಷ ಸಾಗರ ಡಿ. ಅಭಿಶಾಳ, ರುಫ್, ಜಗದೀಶ, ರಫೀಕ್, ಅಶೋಕ ಗುತ್ತೇದಾರ ಹಾಗೂ ಕಾರ್ಯಕರ್ತರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here