ಕಲಬುರಗಿ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಂಸ್ಥಾಪಕ ಕೇಶವ್ ಬಲಿರಾಮ್ ಹೆಡ್ಗೆವಾರ್ ಅವರ ಭಾಷಣವನ್ನು ಶೈಕ್ಷಣಿಕ ವರ್ಷದ ಕನ್ನಡ ಪಠ್ಯಕ್ರಮದಲ್ಲಿ ಸೇರ್ಪಡೆ ಮಾಡಿದ್ದು, ಇದು ಶಿಕ್ಷಣದ ಕೇಸರೀಕರಣದ ಮುಂದುವರೆದ ಭಾಗವಾಗಿದ್ದು ಇದನ್ನು ಶೀಘ್ರ ಹಿಂಪಡೆಯಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯು ನಿಜವಾದ ಆದರ್ಶ ಪುರುಷ ಯಾರಾಗಬೇಕು? ಎಂಬ ತಲೆಬರಹದಲ್ಲಿ ಹೆಡ್ಗೆವಾರ್ ಭಾಷಣವನ್ನು ಹತ್ತನೇ ತರಗತಿಯ ಕನ್ನಡ ಗದ್ಯಪುಸ್ತಕದಲ್ಲಿ ಐದನೇ ಪಠ್ಯವಾಗಿ ಸೇರಿಸಲಾಗಿದೆ. ದೇಶಾದ್ಯಂತ ನರಮೇಧಗಳನ್ನು ನಡೆಸಿದ, ದೇಶದಲ್ಲಿ ಹಲವು ಬಾರಿ ನಿಷೇಧಿಸಲ್ಪಟ್ಟ ಭಯೋತ್ಪಾದನಾ ಸಂಘಟನೆಯಾದ ಆರ್ಎಸ್ಎಸ್ ಸಂಸ್ಥಾಪಕ ಹೆಡ್ಗೆವಾರ್ ಹೇಗೆ ಆದರ್ಶ ಪುರುಷನಾಗಲು ಸಾಧ್ಯವೆಂದು ಪ್ರಶ್ನಿಸಿದ ಪ್ರತಿಭಟನಾಕಾರರು ಉದ್ದೇಶಪೂರ್ವಕವಾಗಿ ಪಠ್ಯಪುಸ್ತಕದ ಪಠ್ಯ ಕ್ರಮವನ್ನು ಬ್ರಾಹ್ಮಣೀಕರಣಗೊಳಿಸುವ ಗುರಿಯೊಂದಿಗೆ ಸಂಘದ ಗರಡಿಯಲ್ಲಿ ಪಳಗಿರುವ ರೋಹಿತ್ ಚಕ್ರತೀರ್ಥ ರಂತಹವರನ್ನು ಪರಿಷ್ಕರಣಾ ಸಮಿತಿಯ ಅಧ್ಯಕ್ಷರನ್ನಾಗಿ ಮಾಡಲಾಗಿದೆ.
ವಿದ್ಯಾರ್ಥಿಗಳಿಗೆ ಸಂವಿಧಾನದ ಆಶಯಗಳನ್ನು ಅರಿತು ಸಮಾಜದಲ್ಲಿ ಸೌಹಾರ್ದತೆ, ಸಾಮರಸ್ಯಕ್ಕೆ ಒತ್ತು ಕೊಡುವ ನಿಟ್ಟಿನಲ್ಲಿ ಕಲಿಕೆ, ವಿದ್ಯೆಯನ್ನು ನೀಡಬೇಕು ಹೊರತು ಹಿಂದೂ ರಾಷ್ಟ್ರವೆಂಬ ಸಂವಿಧಾನಕ್ಕೆ ಅಪಚಾರವೆಸಗುವ ದೇಶವಿರೋಧಿ ಆಲೋಚನೆ ಹೊಂದಿದ್ದ ವ್ಯಕ್ತಿಗಳ ಭಾಷಣ ಹೇಳಿ ಕೊಡುವ ಸರಕಾರದ ಈ ಕೃತ್ಯ ನೈಜ ಸ್ವಾತಂತ್ರ್ಯ ಹೋರಾಟಗಾರರರಿಗೆ ಅಪಮಾನ ಮಾಡುವಂತಿದೆ ಅದಲ್ಲದೆ, ಇದು ದೇಶದ್ರೋಹದ ನಡೆಯಾಗಿದೆ ಎಂದರು.
ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ತನ್ನದೇ ಆದ ಹಿಂದೂ ರಾಷ್ಟ್ರದ ಕಲ್ಪನೆಯೊಂದಿಗೆ ಜನರ ದಾರಿ ತಪ್ಪಿಸಿದ ದೇಶದ್ರೋಹಿಯ ಭಾಷಣವನ್ನು ಪಠ್ಯಕ್ರಮದಲ್ಲಿ ಸೇರಿಸಿರುವುದು ಶಿಕ್ಷಣದಲ್ಲಿ ಹಿಂದುತ್ವ ಸಿದ್ದಾಂತದ ಹೇರಿಕೆಯೆಂಬುದು ಸ್ಪಷ್ಟವಾಗಿದೆ, ಇದನ್ನು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ತೀವ್ರವಾಗಿ ವಿರೋಧಿಸುತ್ತಿದೆ ಹಾಗೂ ಈ ಹೆಡ್ಗೆವಾರ್ ಭಾಷಣವನ್ನು ಶೀಘ್ರ ಪಠ್ಯಕ್ರಮದಿಂದ ಕೈ ಬಿಡಬೇಕು ಎಂದು ಕ್ಯಾಂಪಸ್ ಫ್ರಂಟ್ ಕಾರ್ಯಕರ್ತರು ಆಗ್ರಹಿಸಿದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…