ಕಲಬುರಗಿ: ನಾಡಿನ ಖ್ಯಾತ ಜನಪದ ವಿದ್ವಾಂಸ ಗುಲ್ಬರ್ಗ ವಿವಿ ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥರಾಗಿದ್ದ ಡಾ. ಬಿ.ಬಿ. ಹೆಂಡಿಯವರ ಪತ್ನಿ ಸುಶೀಲಾ ದೇವಿ ಹೆಂಡಿ (89) ಅವರು ಇಂದು ಬೆಳಗ್ಗೆ 6 ಗಂಟೆಗೆ ಬೆಂಗಳೂರಿನ ತಮ್ಮ ಪುತ್ರ ರಾಜಶೇಖರ ಅವರ ನಿವಾಸದಲ್ಲಿ ನಿಧನರಾದರು.
ಮೃತರಿಗೆ ನಾಲ್ಕು ಜನ ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವಿದೆ. ಮೃತರ ಅಂತ್ಯಕ್ರಿಯೆ ಅವರ ಸ್ವಂತ ಊರಾದ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲ್ಲೂಕಿನ ನಿಡಗುಂದಿಯ ಅವರ ಹೊಲದಲ್ಲಿ ನಾಳೆ ಮಧ್ಯಾಹ್ನ 2 ಗಂಟೆಗೆ ಜರುಗಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.