ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಹಾರಲಾಲ ನೆಹರು ಪುಣ್ಯ ದಿನವನ್ನು ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಕಾಳಗಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಟೀಲ, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶರಣಕುಮಾರ ಮೋದಿ, ಮಹಿಳಾ ಅಧ್ಯಕ್ಷೆ ಲತಾ ರವಿ ರಾಠೋಡ, ಜಿಲ್ಲಾ ಕಾಂಗ್ರೆಸ್ ಸಮಿತಿ (ಪರಿಶಿಷ್ಠಜಾತಿ) ಘಟಕದ ಅಧ್ಯಕ್ಷ ಮಹಾಂತಪ್ಪ ಸಂಗಾವಿ, ಕಾಂಗ್ರೆಸ್ ದಕ್ಷಿಣ ನಗರ ಬ್ಲಾಕ್ ಸಮಿತಿ ಹಿಂದುಳಿದ ವಿಭಾಗದ ಅಧ್ಯಕ್ಷ ಧರ್ಮರಾಜ ಬಿ.ಹೇರೂರ ಹಾಗೂ ಕಾರ್ಯಕರ್ತರು ಇದ್ದರು.