ಬಿಸಿ ಬಿಸಿ ಸುದ್ದಿ

ನಾಳೆ ಪ್ರತಿಭಾ ಪುರಸ್ಕಾರ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭ

ಶಹಾಬಾದ: ನಗರದ ಮತ್ತಿಮಡು ಅಭಿಮಾನಿಗಳ ಬಳಗ ಹಾಗೂ ಸ್ನೇಹಿತರ ಬಳಗದ ವತಿಯಿಂದ ಬಿಜೆಪಿ ಮುಖಂಡ ನಿಂಗಪ್ಪಾ.ಎಸ್.ಹುಳಗೋಳಕರ್ ಅವರ ೫೪ನೇ ಹುಟ್ಟು ಹಬ್ಬದ  ಅಂಗವಾಗಿ ತಾಲೂಕಿನಲ್ಲಿ ಎಂ.ಬಿ.ಬಿ.ಎಸ್‌ನಲ್ಲಿ ತೇರ್ಗಡೆ ಹೊಂದಿದ  ಹಾಗೂ ಎಸ್.ಎಸ್.ಎಲ್.ಸಿಯಲ್ಲಿ ಶಾಲಾವಾರು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಮೇ ೩೧ ರಂದು ಸಾಯಂಕಾಲ ೭ ಗಂಟೆಗೆ ನಗರದ ಜಗದಂಬಾ ಮಂದಿರದಲ್ಲಿ ಆಯೋಜಿಸಲಾಗಿದೆ ಎಂದು ಮತ್ತಿಮಡು ಅಭಿಮಾನಿಗಳ ಬಳಗ ಸದಾನಂದ ಕುಂಬಾರ ತಿಳಿಸಿದ್ದಾರೆ.

ಅವರು ಸುದ್ದಿಗಾರೊಂದಿಗೆ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ಸಮಾರಂಭವನ್ನು ಆಯೋಜಿಸಲಾಗಿದೆ.ಕಳೆದ ಎರಡು ವರ್ಷದಿಂದ ಕೋವಿಡ್ ಹಿನ್ನೆಲೆಯಲ್ಲಿ ಮಾಡಿರಲಿಲ್ಲ.ಈ ಬಾರಿ ವಿಶೇಷವಾಗಿ ತಾಲೂಕಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಶಾಲಾವಾರು ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಜತೆಗೆ ಎಂ.ಬಿ.ಬಿ.ಎಸ್  ತೇರ್ಗಡೆ ಹೊಂದಿದ  ವಿದ್ಯಾರ್ಥಿಗಳಿಗೂ ಪ್ರೋತ್ಸಾಹ ಹಾಗೂ ಇತರ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ತೊನಸನಹಳ್ಳಿ(ಎಸ್) ಗ್ರಾಮದ ಮಲ್ಲಣಪ್ಪ ಸ್ವಾಮಿಗಳು ಹಾಗೂ ರಾವೂರಿನ ಸಿದ್ಧಲಿಂಗ ದೇವರು ಸಾನಿಧ್ಯ ವಹಿಸಲಿದ್ದಾರೆ. ಮಾಜಿ ಸಪ್ತಖಾತೆ ಸಚಿವ ಮತ್ತು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ ಚಿಂಚನಸೂರ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮಡು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ.ವಿ.ಟೆಂಗಳಿ, ಕಾಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಶರಣಪ್ಪ ತಳವಾರ, ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ,ತಹಸೀಲ್ದಾರ ಸುರೇಶ ವರ್ಮಾ, ವಾಡಿ-ಶಹಾಬಾದ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕನಕಪ್ಪ ದಂಡಗುಲಕರ್, ನಗರಸಭೆಯ ಪೌರಾಯುಕ್ತ ಬಸವರಾಜ ಹೆಬ್ಬಾಳಕರ್, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಸಲಿಂಗಪ್ಪ ಡಿಗ್ಗಿ, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ನಗರ ಪೊಲೀಸ್ ಠಾಣೆಯ ಪಿಐ ಸಂತೋಷ ಹಳ್ಳೂರ್, ಉದ್ದಿಮೆದಾರರಾದ ಶಶಿಕಾಂತ ಪಾಟೀಲ, ಭೌದ್ಧ ಮಹಾಸಭಾದ ಅಧ್ಯಕ್ಷ ಸುರೇಶ ಮೆಂಗನ, ಬಸವರಾಜ ಮತ್ತಿಮಡು ಅಭಿಮಾನಿ ಬಳಗದ ಅಧ್ಯಕ್ಷ ನಿಂಗಪ್ಪಾ ಹುಳಗೋಳಕರ್ ಆಗಮಿಸಲಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಭೀಮಯ್ಯ ಗುತ್ತೆದಾರ,ಶ್ರೀಧರ ಜೋಷಿ, ರಾಜೇಶ ಯನಗುಂಟಿಕರ್, ಶರಣು ಜೋಗೂರ, ಶರಣಬಸಪ್ಪ ತುಂಗಳ,ಶರಣು ಪಗಲಾಪೂರ,ಕಾಶಣ್ಣ ಚನ್ನೂರ್, ಪರಮಾನಂದ ಯಲಗೋಡಕರ್, ಶಿವಕುಮಾರ ತಳವಾರ ಇತರರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

5 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

15 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

15 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

15 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago