ಕಲಬುರಗಿ: ಬೆಂಗಳೂರಿನಲ್ಲಿ ನಡೆಯುತ್ತಿದ್ದ ರೈತ ಸಂಘದ ಆತ್ಮಾವಲೋಕನ ಸಭೆಗಾಗಿ ಆಗಮಿಸಿದ್ದ ರೈತಾಂದೋಲನದ ಪ್ರಮುಖ ನಾಯಕರಲ್ಲೊಬ್ಬರಾದ ರಾಕೇಶ್ ಟಿಕಾಯತ್ ಮತ್ತು ಜೊತೆಗಿದ್ದ ರೈತ ಹೋರಾಟಗಾರರ ಮೇಲೆ ಆರೆಸ್ಸೆಸ್ ಹಲ್ಲೆಕೋರರು ಮಸಿ ಎರಚಿ ದಾಳಿ ನಡೆಸಿದ್ದನ್ನು ರಾಷ್ಟ್ರೀಯ ಸಮಾಜ ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷರಾದ ಶಿವಲಿಂಗಪ್ಪ ಕಿನ್ನೂರ್ ತೀವ್ರವಾಗಿ ಖಂಡಿಸಿದರು.
ದಾಳಿಕೋರರನ್ನು ಕೂಡಲೇ ಬಂಧಿಸಿ, ಈ ಗಂಭೀರ ಅಪರಾಧಕ್ಕೆ ಕಠಿಣವಾದ ಪ್ರಕರಣವನ್ನು ಅವರ ಮೇಲೆ ದಾಖಲಿಸಬೇಕು. ಪ್ರಾಮಾಣಿಕವಾಗಿ, ನಿಷ್ಪಕ್ಷಪಾತವಾಗಿ, ವೇಗವಾಗಿ ತನಿಖೆ ನಡೆದು ಅಪರಾಧಿಗಳಿಗೆ ಬೇಗ ಶಿಕ್ಷೆಯಾಗಬೇಕು.
ಪ್ರಮುಖ ನಾಯಕರಿಗೆ ಸೂಕ್ತ ಭದ್ರತೆ ನೀಡದೆ ಕರ್ತವ್ಯ ಲೋಪ ಎಸಗಿರುವ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ಮೇಲೆ ಕೂಡಲೇ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಆಗ್ರಹಿಸುತ್ತದೆ.
ಇತ್ತೀಚಿನ ದಿನಗಳಲ್ಲಿ ಒಂದಾದ ಮೇಲೊಂದರಂತೆ ಭುಗಿಲೇಳುತ್ತಿರುವ ಅಶಾಂತಿಯ ಘಟನೆಗಳನ್ನು ಗಮನಿಸಿದರೆ, ಕರ್ನಾಟಕದ ಬಿಜೆಪಿ ಸರ್ಕಾರ ಪ್ರಜಾತಾಂತ್ರಿಕ ರೀತಿಯಲ್ಲಿ ಆಳ್ವಿಕೆ ನಡೆಸುವಲ್ಲಿ ವಿಫಲವಾಗಿದೆ ಎಂಬುದು ಸ್ಪಷ್ಟವಾಗಿದೆ. ಕೂಡಲೇ ರಾಜ್ಯಪಾಲರು ಮಧ್ಯಪ್ರವೇಶಿಸಿ ಸರ್ಕಾರದ ಮೇಲೆ ಶಿಸ್ತು ಕ್ರಮ ಕೈಗೊಳ್ಳಬೇಕು. ಜನತೆಗೆ ಶಾಂತಿ-ಸುವ್ಯವಸ್ಥೆ ರಕ್ಷಣೆಯ ಭರವಸೆ ನೀಡಬೇಕು ಎಂದು ಒತ್ತಾಯಿಸಿದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…