ಸುರಪುರ: ಇತ್ತೀಚೆಗೆ ಮಕ್ಕಳು ಕಾಣೆಯಾಗುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿವೆ.ಆದ್ದರಿಂದ ವಿದ್ಯಾರ್ಥಿಗಳು ಅಥವಾ ಸಾರ್ವಜನಿಕರು ತಮಗೆ ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದರೆ ಕೂಡಲೆ ಪೊಲೀಸರಿಗೆ ತಿಳಿಸುವಂತೆ ಪಿಎಸ್‌ಐ ಎಸ್.ಡಿ.ವಡಯರ್ ತಿಳಿಸಿದರು.
ಯದಗಿರಿ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡ ಆಪರೇಷನ್ ಮುಸ್ಕಾನ್ ಕುರಿತ ಜಾಗೃತಿ ಅಭಿಯಾನದ ಅಂಗವಾಗಿ ನಗರದ ಜ್ಞಾನೋದಯ ಪ್ರೌಢ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಕ್ಕಳನ್ನು ಕಳ್ಳಸಾಗಾಣಿಕೆ ಮಾಡುವುದು,ಮಕ್ಕಳಿಗೆ ಮೋಸದಿಂದ ತಿಂಡಿ ತಿನುಸುಗಳ ತಿನಿಸಿ ಅಪಹರಣ ಮಾಡುವುದು, ಮಕ್ಕಳನ್ನು ಭೀಕ್ಷಾಟನೆಗೆ ತೊಡಗಿಸುವುದು, ಮಕ್ಕಳ ಅಂಗಾಂಗಳ ಮಾರಾಟ ಮಾಡುವುದು, ನಿಧಿಯಾಸೆಗೆ ಬಲಿ ನೀಡುವಂತ ಕೃತ್ಯಗಳಿಗು ಮಕ್ಕಳನ್ನು ದೂಡಲಾಗುತ್ತಿದೆ.ಇವುಗಳಿಂದ ಮಕ್ಕಳನ್ನು ರಕ್ಷಿಸುವುದು ಪೋಷಕರ ಜವಬ್ದಾರಿಯಾಗಿದೆ. ಆದರೆ ಇಂತಹ ಕೃತ್ಯ ಎಸಗುವ ಯಾವುದೆ ವ್ಯಕ್ತಿಗಳು ಕಂಡಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡುವಂತೆ ಕರೆ ನೀಡಿದರು.
ಅಲ್ಲದೆ ಬಾಲ ಕಾರ್ಮಿಕ ನಿಷೇಧ ಕಾಯ್ದೆ ೧೯೮೬, ಬಾಲ್ಯ ವಿವಾಹ ನಿಷೇಧ ಕಾಯ್ದೆ ೨೦೦೬ ಹಾಗು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ೨೦೧೨ರ ಫೋಕ್ಸೊ ಕಾಯ್ದೆಗಳ ಕುರಿತು ಮಾಹಿತಿ ನೀಡಿದರು.
ಪೊಲೀಸ ಸಿಬ್ಬಂದಿಯಾದ ದಯಾನಂದ, ಶಾಲೆಯ ಮುಖ್ಯಗುರು ಲಂಕೆಪ್ಪ ಕವಲಿ, ಚನ್ನಪ್ಪ ನಾಯಕ, ಬೀರೆಶ ಕುಮಾರ, ದೇವು ಹೆಬ್ಬಾಳ, ವಿರೇಶ ಹಳ್ಳಿಮನಿ, ಅಯಮ್ಮ ದರಬಾರಿ, ಪ್ರಕಾಶ ಮಾಳಗಿ, ತಿರುಪತಿ ಮುಷ್ಠಳ್ಳಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…