ಕನ್ನಡ ನಾಡು ಕಂಡ ರಾಷ್ಟ್ರಕವಿ ಕುವೆಂಪು ಹಾಗೂ ನಾಡಗೀತೆಗೆ ಅವಮಾನಿಸುವುದನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತೀವ್ರವಾಗಿ ಖಂಡಿಸುತ್ತದೆ. ‘ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುತ್ತದೆ’ ಎಂಬ ಕವಿವಾಣಿಯಂತೆ ಕನ್ನಡ ಸಾಹಿತ್ಯ ಪರಿಷತ್ತು ಸದಾ ಕಾರ್ಯಪ್ರವೃತ್ತವಾಗಿರುತ್ತದೆ. ರಾಷ್ಟ್ರಕವಿ ಕುವೆಂಪ ಅವರನ್ನು ನಿಂದಿಸಿ, ನಾಡಗೀತೆಯನ್ನು ತಿರುಚಿ ಬರೆದವರ ವಿರುದ್ಧ ರಾಜ್ಯ ಸರ್ಕಾರ ಈ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. -ವಿಜಯಕುಮಾರ ಪಾಟೀಲ ತೇಗಲತಿಪ್ಪಿ. ಅಧ್ಯಕ್ಷರು, ಜಿಲ್ಲಾ ಕಸಾಪ, ಕಲಬುರಗಿ.
ಕಲಬುರಗಿ: ಇಂದಿನ ಮಕ್ಕಳು ಭವಿಷ್ಯತ್ತಿನ ನಾಗರಿಕರು ಎಂಬ ಮಾತಿನಂತೆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಗೆ ಪ್ರೋತ್ಸಾಹಿಸುವ ಜವಾಬ್ದಾರಿಯುತ ವ್ಯಕ್ತಿ ಅಥವಾ ಸಂಘ-ಸಂಸ್ಥೆ, ಸರಕಾರಗಳ ಕರ್ತವ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಡಿಮೆ ಅವಧಿಯಲ್ಲಿ ಅತ್ಯಂತ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕನ್ನಡಿಗರ ಮನಗೆಲ್ಲುತ್ತಲಿದೆ ಎಂದು ಮಾಜಿ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹತ್ತನೇ ಪರೀಕ್ಷೆಯ ಕನ್ನಡದಲ್ಲಿ ಅತೀ ಹೆಚ್ಚು ಅಂಕಗಳು ಪಡೆದ ಜಿಲ್ಲೆಯ ವಿದ್ಯಾರ್ಥಿಗಳಿಗೆ ‘ಹತ್ತರ ಕನ್ನಡಕೆ… ಗುಣಾಗ್ರಣಿ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಇಂದಿನ ಮಕ್ಕಳು ಕಂಪ್ಯೂಟರ್ ಯುಗದಲ್ಲಿದ್ದಾರೆ. ಅವರಿಗೆ ಆಸಕ್ತಿಯುತ ಕ್ಷೇತ್ರದಲ್ಲಿ ಅವಕಾಶ ನೀಡಿದಲ್ಲಿ ಅವರು ದೇಶದ ಶಕ್ತಿಯಾಗಿ ಹೊರ ಹೊಮ್ಮುತ್ತಾರೆ ಎಂದು ಮಾರ್ಮಿಕವಾಗಿ ಹೇಳಿದರು.
ಇದನ್ನೂ ಓದಿ: ಸೊಲ್ಲಾಪುರ: ಗಡಿನಾಡು ಕನ್ನಡ ಜಾಗೃತಿ ಸಾಂಸ್ಕೃತಿಕ ಉತ್ಸವ
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಮಕ್ಕಳು ತಮ್ಮ ಎಳೆಯ ವಯಸ್ಸಿನಲ್ಲಿ ಪಡೆಯುವ ಈ ಸನ್ಮಾನ ಅವರ ಇಡೀ ಜೀವನದಲ್ಲಿ ಅವಿಸ್ಮರಣೀಯವಾಗಿರುತ್ತದೆ. ಅವರ ಸಾಧನೆಗೆ ಸಂದ ಈ ಸಣ್ಣ ಗೌರವ ಅವರ ಮುಂದಿನ ಹೆಜ್ಜೆಗೆ ಶಕ್ತಿ ತುಂಬಬಲ;ಲದು ಎಂಬುದು ನಮ್ಮ ಭಾವನೆಯಾಗಿದೆ. ‘ಕನ್ನಡ’ ಎಂದರೆ ಮೂಗು ಮುರಿಯುವ ಕಾಲದಲ್ಲಿ ಕನ್ನಡ ವಿಷಯದಲ್ಲಿ ಮಕ್ಕಳು ಸಾಧಿಸಿದ ಸಾಧನೆ ಹುಬ್ಬೆರಿಸುವಂತಿದೆ. ಅವರ ಯಶಸ್ಸು ಅಂಕಗಳಿಗೂ ಮೀರಿದ್ದು ಎಂದರೆ ಅತಿಶಯೋಕ್ತಿಯಾಗಲಾರದು ಎಂದರು.
ಚಿಂತಕ ಮಲ್ಲಣ್ಣ ಮಡಿವಾಳ, ಎಕೆಆರ್ ದೇವಿ ಪಿಯು ಕಾಲೇಜಿನ ಆಡಳಿತಾಧಿಕಾರಿ ವಿದ್ಯಾಸಾಗರ ದೇಶಮುಖ, ಜಿಲ್ಲಾ ಕಸಾಪ ಪದಾಧಿಕಾರಿಗಳಾದ ಶಿವರಾಜ ಅಂಡಗಿ, ಯಶವಂತರಾಯ ಅಷ್ಠಗಿ, ಶರಣರಾಜ ಛಪ್ಪರಬಂದಿ, ಕಲ್ಯಾಣಕುಮಾರ ಶೀಲವಂತ, ಡಾ.ಕೆ.ಗಿರಿಮಲ್ಲ, ಧರ್ಮಣ್ಣ ಹೆಚ್.ಧನ್ನಿ, ಶಕುಂತಲಾ ಪಾಟೀಲ ಜಾವಳಿ, ಶಿಲ್ಪಾ ಜೋಶಿ, ಸಂಗಪ್ಪ ಸೇದಿಮನಿ, ನಾಗೇಂದ್ರಪ್ಪ ಮಾಡ್ಯಾಳೆ, ರವೀಂದ್ರಕುಮಾರ ಭಂಟನಳ್ಳಿ, ರಾಜೇಂದ್ರ ಮಾಡಬೂಳ, ವಿನೋದ ಜೇನವೇರಿ, ಜಗದೀಶ ಮರಪಳ್ಳಿ, ಕನ್ನಡ ಸಾಹಿತ್ಯ ಪರಿಷತ್ತಿನ ಶಹಾಬಾದ ಅಧ್ಯಕ್ಷ ಶರಣಬಸಪ್ಪ ಕೋಬಾಳ, ಚಿಂಚೋಳಿ ಅಧ್ಯಕ್ಷ ಸುರೇಶ ದೇಶಪಾಂಡೆ, ಕಾಳಗಿ ಅಧ್ಯಕ್ಷ ಸಂತೋಷ ಕುಡಳ್ಳಿ, ಉತ್ತರ ವಲಯ ಅಧ್ಯಕ್ಷ ಪ್ರಭುಲಿಂಗ ಮೂಲಗೆ, ಸಿದ್ಧಾರಾಮ ಹಂಚನಾಳ, ವಿಶ್ವನಾಥ ತೊಟ್ನಳ್ಳಿ, ಕವಿತಾ ದೇಗಾಂವ, ಶಿವಾನಂದ ಮಠಪತಿ, ಶಿವಲೀಲಾ ತೆಗನೂರ, ಅರವಿಂದ ಗೋಟೂರ, ವೀರಣ್ಣ ಹುಮನಾಬಾದ, ಶರಣಬಸಪ್ಪ ನರೂಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಹತ್ತನೇ ಪರೀಕ್ಷೆಯ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಪಡೆದ ಜಿಲ್ಲೆಯ ಸುಮಾರು ೩೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಗುಣಾಗ್ರಣಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಇದನ್ನೂ ಓದಿ: ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿಗಳ ಸಂವಾದ: ಕಲಬುರಗಿಯ ಸಂತೋಷಿ ಮಾತಿಗೆ ಪ್ರಧಾನಿ ಮೆಚ್ಚುಗೆ
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…