ಜೇವರ್ಗಿ: ತಾಲೂಕಿನ ಮಂದೇವಾಲ ಗ್ರಾಮದಲ್ಲಿ ರವಿವಾರ ತಡರಾತ್ರಿ 11 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟನಿಂದ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಮೂರು ಅಂಗಡಿಗಳಿಗೆ ಬೆಂಕಿ ತಗುಲಿದ ಅಪಾರ ಪ್ರಮಾಣ ವಸ್ತುಗಳು ಸುಟ್ಟು ಭಸ್ಮವಾಗಿವೆ.
ಶರಣಗೌಡ ದರಗೊಂಡ್ ಎಂಬುವವರಿಗೆ ಸೇರಿರುವ 3 ಅಂಗಡಿಗಳಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹತ್ತಿ ಉರಿದಿದೆ ಎನ್ನಲಾಗಿದೆ. ಬೆಂಕಿಯಲ್ಲಿ ಐದು ದ್ವಿಚಕ್ರ ವಾಹನಗಳು, ಎರಡು ಫ್ರಿಡ್ಜ್, ಎರಡು ಕಂಪ್ಯೂಟರ್, ಸೇರಿದಂತೆ ಅಂಗಡಿಗಳಿಗೆ ನಿಗಾವಹಿಸಲು ಅಳವಡಿಸಿರುವ ಸಿ.ಸಿ ಕ್ಯಾಮೆರಾಗಳು ದ್ವಿಚಕ್ರ ವಾಹನಗಳ ಬಿಡಿ ಭಾಗಗಳು ಸೇರಿದಂತೆ ರೇಡಿಯಮ್ ಕಟಿಂಗ್ ಯಂತ್ರ ಸೇರಿದಂತೆ ಹಲವಾರು ವಸ್ತುಗಳು ಬೆಂಕಿಯಲ್ಲಿ ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಅಂದಾಜು ಸರಿಸುಮಾರು 10 ಲಕ್ಷಕ್ಕಿಂತ ಹೆಚ್ಚಿನ ವಸ್ತುಗಳು ಸುಟ್ಟು ಕರಕಲಾಗಿವೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಘಟನೆ ಕುರಿತು ಪ್ರಕರಣ ದಾಖಲಾಗಿದೆ. ಎಂದು ಅಂಗಡಿಯ ಮಾಲೀಕರು ಶರಣಗೌಡ ಮತ್ತು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…
ಕಲಬುರಗಿ: ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಪ್ರಯುಕ್ತ ಜೈ ಕನ್ನಡಿಗರ…
ಕಲಬುರಗಿ; ಕಾರಾಗೃಹದ ಬಂದಿಗಳಿಗೆ ಉಚಿತವಾಗಿ ಅದಾನಿ ಸಕ್ಷಮ ಸ್ಕಿಲ್ ಡೆವಲಪ್‍ಮೆಂಟ್, ವಾಡಿ ಹಾಗೂ ಕೇಂದ್ರ ಕಾರಾಗೃಹದ ಸಹಯೋಗದೊಂದಿಗೆ ಬಂದಿಗಳ ಮನಃ…
ಕಲಬುರಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಯವರು ಮೂರು ವರ್ಷಗಳು ಪೂರೈಸಿರುವ…
ಕಲಬುರಗಿ: ವಿದ್ಯಾರ್ಥಿನಿಯರ ಸರ್ವತೋಮುಖ ಬೆಳವಣಿಗೆಯೇ ಶಿಕ್ಷಣ, ಶಿಕ್ಷಣವೆಂದರೆ ಕೇವಲ ಆನಲೈನ ಮಾಹಿತಿಯಲ್ಲ, ಪುಸ್ತಕದ ಜ್ಞಾನವೂ ಅಲ್ಲ, ವಿದ್ಯಾರ್ಥಿನಿಯರ ಬೌದ್ಧಿಕ, ಮಾನಸಿಕ,…
ಶಹಾಬಾದ: ನಗರದ ಶಿವಯೋಗಿಸ್ವಾಮಿ ಪ್ರೌಢಶಾಲೆಯಲ್ಲಿ ಪ್ರಿಯಾಂಕ್ ಖರ್ಗೆ ಅಭಿಮಾನಿ ಬಳಗದ ವತಿಯಿಂದ ಶುಕ್ರವಾರ ಸಚಿವರಾದ ಪ್ರಿಯಾಂಕ್ ಖರ್ಗೆ ಅವರ ಜನ್ಮ…