ಬಿಸಿ ಬಿಸಿ ಸುದ್ದಿ

ಪ್ಲಾಸ್ಟಿಕ್ ಮಾರಾಟ ಮತ್ತು ಸಂಗ್ರಹಗಾರರ ಮೇಲೆ ದಾಳಿ ನಡೆಸಲು ಸೂಚನೆ

ಕಲಬುರಗಿ: ರಾಷ್ಟ್ರೀಯ ಹಸಿರು ನ್ಯಾಯಪೀಠವು ನವೆಂಬರ್ ೧ಕ್ಕೆ ಕಲಬುರಗಿ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಮತ್ತು ಹಸಿರು ನಗರವನ್ನಾಗಿಸಲು ನಿರ್ದೇಶನ ನೀಡಿದ್ದು, ಈ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಆಗಸ್ಟ್ ೧೫ರೊಳಗಾಗಿ ಪ್ಲಾಸ್ಟಿಕ್ ಮಾರಾಟ ಮತ್ತು ಸಂಗ್ರಹಿಸುವ ವಾಣಿಜ್ಯ ಅಂಗಡಿ ಮತ್ತು ಉತ್ಪಾದಕರ ಮೇಲೆ ದಾಳಿ ಮಾಡಿ ಕಾಯ್ದೆಯನ್ವಯ ಗರಿಷ್ಠ ದಂಡ ವಿಧಿಸಿ ಶಿಕ್ಷೆಗೆ ಗುರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಅವರು ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಖಡಕ್ ಸೂಚನೆ ನೀಡಿದರು.

ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಪ್ಲಾಸ್ಟಿಕ್ ನಿಷೇಧ ಹಾಗೂ ರಾಷ್ಟ್ರೀಯ ಹಸಿರು ನ್ಯಾಯಪೀಠದ ಆದೇಶವನ್ನು ಅನುಷ್ಠಾನಗೊಳಿಸುವ ಕುರಿತು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು ಕಲಬುರಗಿ ನಗರದಲ್ಲಿ ಪಾಲಿಕೆಯ ಅಧಿಕಾರಿಗಳು ಪ್ರತಿ ವಾರ್ಡ್‌ವಾರು ಭೇಟಿ ಕೊಟ್ಟು ಪ್ಲಾಸ್ಟಿಕ್ ಬಳಕೆಯಿಂದಾಗುತ್ತಿರುವ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಿ ಪ್ಲಾಸ್ಟಿಕ್ ನಿಷೇಧಿಸಲು ಸಹಕಾರ ನೀಡುವಂತೆ ಕೋರಬೇಕು ಎಂದರು.

ಜಿಲ್ಲೆಯಲ್ಲಿ ಒಣ ಕಸ ಮತ್ತು ಹಸಿ ಕಸವನ್ನು ಮನೆಗಳಿಂದ ಪ್ರತ್ಯೇಕವಾಗಿ ಪಡೆಯಲು ಯಾವುದೇ ಸಮಸ್ಯೆಯಿಲ್ಲ. ಪೌರಕಾರ್ಮಿಕ ಸಿಬ್ಬಂದಿಗಳು ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕವಾಗಿ ಪಡೆದು ಸೂಕ್ತ ರೀತಿಯಲ್ಲಿ ಘನತ್ಯಾಜ್ಯ ವಿಲೇವಾರಿ ಕೈಗೊಳ್ಳುವುದು. ಕಲಬುರಗಿ ನಗರವನ್ನು ನೂರಕ್ಕೆ ನೂರರಷ್ಟು ಪ್ಲಾಸ್ಟಿಕ್ ಮುಕ್ತ ಹಾಗೂ ಹಸಿರು ನಗರವನ್ನಾಗಿಸಬೇಕು ಎಂದು ಅವರು ಹೇಳಿದರು.

ಪ್ಲಾಸ್ಟಿಕ್ ಬಳಕೆ ಹಾಗೂ ಘನತ್ಯಾಜ್ಯಗಳು ಹೆಚ್ಚಾಗಿ ಹೊಟೇಲ್, ಕಲ್ಯಾಣ ಮಂಟಪ, ಧಾರ್ಮಿಕ ಸ್ಥಳಗಳಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಅಧಿಕಾರಿಗಳು ಇಂತಹ ಪ್ರದೇಶಗಳ ಮೇಲೆ ಪ್ಲಾಸ್ಟಿಕ್ ಬಳಕೆ ತಡೆಯಲು ದಾಳಿ ಮಾಡುವಾಗ ರಕ್ಷಣೆಗೆ ಪೊಲೀಸ್ ಸಿಬ್ಬಂದಿಯನ್ನು ಬಳಸಿಕೊಳ್ಳಬೇಕು. ಮುಂದಿನ ಒಂದು ವಾರದೊಳಗೆ ಪ್ಲಾಸ್ಟಿಕ್ ಮಾರಾಟ ಮತ್ತು ಉತ್ಪನ್ನ ಮಾಡುವವರ ಸಭೆ ನಡೆಸಿ ಪ್ಲಾಸ್ಟಿಕ್ ಬಳಸದಂತೆ ತಿಳಿಹೇಳಿ ಎಂದರು.

ಇನ್ನು ನಗರ-ಪಟ್ಟಣಗಳಲ್ಲಿ ಕಟ್ಟಡ ನಿರ್ಮಾಣ ಮತ್ತು ತೆರವು ಕಾರ್ಯದಿಂದ ಉಳಿಯುವ ಕಟ್ಟಡದ ತ್ಯಾಜ್ಯ ಸಾಮಗ್ರಿಗಳನ್ನು ಎಲ್ಲೆಂದರಲ್ಲಿ ಹಾಕದೆ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡಬೇಕು ಎಂದು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಕಟ್ಟಡದ ಕಚ್ಚಾ ಸಾಮಗ್ರಿಗಳು ರಾಜಾ ಕಾಲುವೆ, ರಸ್ತೆ, ಹಳ್ಳ-ಕೊಳ್ಳಗಳಲ್ಲಿ ಹಾಕದಂತೆ ನೋಡಿಕೊಳ್ಳಬೇಕು. ಕಸವನ್ನು ಎಲ್ಲದೆರಲ್ಲಿ ಹಾಕುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಪ್ಲಾಸ್ಟಿಕ್ ಮುಕ್ತ ನಗರಕ್ಕೆ ಜನರ ಸಹಕಾರ ಅಗತ್ಯ:- ಪ್ಲಾಸ್ಟಿಕ್ ಮುಕ್ತ ನಗರ ಮಾಡಲು ಒಬ್ಬರಿಂದ ಸಾಧ್ಯವಿಲ್ಲ. ಪ್ಲಾಸ್ಟಿಕ್ ಸಂಪೂರ್ಣವಾಗಿ ನಿಷೇಧಿಸಲು ನಗರದ ಸಾರ್ವಜನಿಕರು, ಸರ್ಕಾರಿ ಅಧಿಕಾರಿಗಳು, ಸಂಘ-ಸಂಸ್ಥೆಗಳು, ಹೊಟೇಲ್ ಮಾಲೀಕರು, ಪರಿಸರ ಪ್ರೇಮಿಗಳು ಸೇರಿದಂತೆ ಎಲ್ಲರ ಪಾತ್ರ ಮುಖ್ಯವಾಗಿದ್ದು, ಜಿಲ್ಲಾಡಳಿತದೊಂದಿಗೆ ಸಾರ್ವಜನಿಕರ ಸಹಕಾರ ತುಂಬಾ ಅವಶ್ಯಕವಾಗಿದೆ ಎಂದರು.

ಸಭೆಯಲ್ಲಿ ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತೆ ಬಿ. ಫೌಜಿಯಾ ತರುನ್ನುಮ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಕಾರ್ಯನಿರ್ವಾಹಕ ಅಭಿಯಂತರ ಶಿವಣಗೌಡ ಪಾಟೀಲ ಸೇರಿದಂತೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ಇಂಜಿನೀಯರಗಳು ಹಾಗೂ ಇನ್ನಿತರ ಅಧಿಕಾರಿಗಳು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

2 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

12 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

12 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

12 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago